AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಾಮ ಸ್ತೋತ್ರ ಪಠಿಸುತ್ತಾ ಬೆಂಗಳೂರಿನಿಂದ ಅಯೋಧ್ಯೆಗೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ ರಾಮ ಭಕ್ತರು

ರಾಮ ಮಂದಿರದಲ್ಲಿ ಇದಾಗಲೇ ಪೂಜಾ ಕೈಂಕರ್ಯಗಳು ಆರಂಭವಾಗಿದ್ದು, ಇದಾಗಲೇ ಹೆಚ್ಚಿನ ಸಂಖ್ಯೆಯ ಭಕ್ತರು ಅಯೋಧ್ಯೆಗೆ ಪ್ರಯಾಣ ಹೊರಟಿದ್ದಾರೆ. ಅದೇ ರೀತಿ ಬೆಂಗಳೂರಿನ ರಾಮ ಭಕ್ತರ ತಂಡವೊಂದು ʼಶ್ರೀ ರಾಮ ಜಯ ರಾಮ ಜಯ ಜಯ ರಾಮʼ… ಎಂದು ರಾಮ ನಾಮವನ್ನು ಜಪಿಸುತ್ತಾ ಬೆಂಗಳೂರು ವಿಮಾನ ನಿಲ್ದಾಣದಿಂದ ಅಯೋಧ್ಯೆಗೆ ಪ್ರಯಾಣ ಹೊರಟಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. 

Viral Video: ರಾಮ ಸ್ತೋತ್ರ ಪಠಿಸುತ್ತಾ ಬೆಂಗಳೂರಿನಿಂದ ಅಯೋಧ್ಯೆಗೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ ರಾಮ ಭಕ್ತರು
ಮಾಲಾಶ್ರೀ ಅಂಚನ್​
| Edited By: |

Updated on: Jan 18, 2024 | 12:41 PM

Share

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಸಾರಥ್ಯದಲ್ಲಿ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಮತ್ತು ರಾಮ ಮಂದಿರ ಉದ್ಘಾಟನಾ ಸಮಾರಂಭ ನಡೆಯಲಿದೆ. ಈ ಒಂದು ಪುಣ್ಯ ಕಾರ್ಯದಲ್ಲಿ ಭಾಗವಹಿಸಲು ಸಹಸ್ತ್ರಾರು ಸಂಖ್ಯೆಯಲ್ಲಿ ರಾಮ ಭಕ್ತರು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಇದಾಗಲೇ ಕೆಲವೊಬ್ಬ ರಾಮ ಭಕ್ತರು ತಮ್ಮ ಊರುಗಳಿಂದ ಪಾದಯಾತ್ರೆಯ ಮೂಲಕವೇ ಅಯೋಧ್ಯೆ ಪ್ರಯಾಣವನ್ನು ಆರಂಭಿಸಿದ್ದಾರೆ. ಅದೇ ರೀತಿ ಇಲ್ಲೊಂದು ರಾಮ ಭಕ್ತರ ತಂಡ ಶ್ರೀ ರಾಮನ ಸ್ತೋತ್ರಗಳನ್ನು ಪಠಿಸುತ್ತಾ ಬೆಂಗಳೂರಿನ ವಿಮಾನ ನಿಲ್ದಾಣದಿಂದ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ.  ಹೌದು ಬೆಂಗಳೂರು ಟು ಅಯೋಧ್ಯೆ ಸಂಪರ್ಕಿಸುವ ಮೊದಲ ವಿಮಾನ ಯಾನದಲ್ಲಿ ಅವರು ಅಯೋಧ್ಯೆಗೆ  ಪ್ರಯಾಣ ಬೆಳೆಸಿದ್ದಾರೆ.

ಇದೀಗ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭ ಆಗಿರುವ ಹೊತ್ತಿನಲ್ಲಿ ಬೆಂಗಳೂರು-ಅಯೋಧ್ಯೆ ನಡುವಣ ವಿಮಾನ ಪ್ರಯಾಣ ಆರಂಭವಾಗಿದ್ದು, ಈ ಬೆಂಗಳೂರು ಟು ಅಯೋಧ್ಯೆ ಸಂಪರ್ಕಿಸುವ ವಿಮಾನಯಾನಕ್ಕೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಉತ್ತರ ಪ್ರದೇಶದ ಸಿ.ಎಂ ಯೋಗಿ ಆದಿತ್ಯನಾಥ್ ನಿನ್ನೆ ಚಾಲನೆ ನೀಡದರು. ಈ ಮೊದಲ  ವಿಮಾನಯಾನದಲ್ಲಿ ಬೆಂಗಳೂರಿನಿಂದ ರಾಮ ಭಕ್ತರ ತಂಡವೊಂದು ರಾಮ ನಾಮ ಜಪಿಸುತ್ತಾ ಅಯೋಧ್ಯೆಗೆ ಪ್ರಯಾಣಿಸಿದ್ದಾರೆ.

ಈ ವಿಡಿಯೋ ತುಣುಕನ್ನು ಸುದ್ದಿ ಸಂಸ್ಥೆ ANI ತನ್ನ X ಖಾತೆಯಲ್ಲಿ ಹಂಚಿಕೊಂಡಿದ್ದು, ʼಬೆಂಗಳೂರಿನಿಂದ ಅಯೋಧ್ಯೆಗೆ ಪ್ರಯಾಣಿಸುವಾಗ ಬೆಂಗಳೂರಿನ ರಾಮ ಭಕ್ತರ ತಂಡವೊಂದು ರಾಮ ನಾಮ ಜಪಿಸುತ್ತಿರುವ ದೃಶ್ಯ; ಕೇಂದ್ರ ನಾಗರಿಕ ವಿಮಾನದ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಉತ್ತರ ಪ್ರದೇಶದ ಸಿ.ಎಂ ಯೋಗಿ ಆದಿತ್ಯನಾಥ್ ಅವರು ಬೆಂಗಳೂರು, ಕೊಲ್ಕತ್ತಾ, ಮತ್ತು ಅಯೋಧ್ಯೆ ನಡುವಿನ ಮೊದಲ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಕ್ಕೆ ನಿನ್ನೆ ಚಾಲನೆ ನೀಡಿದರು” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದೆ.

ಇದನ್ನೂ ಓದಿ: ಆಫ್ರಿಕಾದಲ್ಲಿ ಶ್ರೀರಾಮ ಘೋಷ; ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕರಾದ ಕಿಲಿ ಪೌಲ್

ಸುದ್ದಿ ಸಂಸ್ಥೆ ANI ಹಂಚಿಕೊಂಡಿರುವ ವಿಡಿಯೋದಲ್ಲಿ ಬೆಂಗಳೂರಿನಿಂದ ಅಯೋಧ್ಯೆಗೆ ಹೊರಟಿರುವ ಭಕ್ತವೃಂದವೊಂದು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಶ್ರೀರಾಮ ಜಯ ರಾಮ ಜಯ ಜಯ ರಾಮ… ಎಂದು ರಾಮ ನಾಮ ಜಪಿಸುತ್ತಾ ವಿಮಾನವನ್ನು ಏರುತ್ತಿರು ದೃಶ್ಯವನ್ನು ಕಾಣಬಹುದು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ