Video: ಮಾಡೆಲ್ ಮುಂದೆಯೇ ರಸ್ತೆಯಲ್ಲಿ ಹಸ್ತಮೈಥುನ ಮಾಡಿಕೊಂಡ ವ್ಯಕ್ತಿ
ಬೀದಿ ಕಾಮುಕರ ಹಾವಳಿ ಹೆಚ್ಚಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ದಿನಕ್ಕೊಂದು ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತದೆ. ಇದೀಗ ಇಲ್ಲೊಂದು ವಿಡಿಯೋ ಭಾರೀ ಚರ್ಚೆಗೆ ಕಾರಣವಾಗಿದೆ. ಜೈಪುರದ ಗುರ್ಗಾಂವ್ದಲ್ಲಿ ವ್ಯಕ್ತಿಯೊಬ್ಬ ಮಾಡೆಲ್ನ್ನು ನೋಡಿ ಹಸ್ತಮೈಥುನ ಮಾಡಿಕೊಂಡಿದ್ದಾನೆ. ಈ ಬಗ್ಗೆ ಈ ಮಾಡೆಲ್ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಪೊಲೀಸರು ಕೂಡ ವಿಡಿಯೋ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜೈಪುರ, ಆಗಸ್ಟ್ 08: ಸಾರ್ವಜನಿಕ ಪ್ರದೇಶದಲ್ಲಿ ಕಾಮುಕರ ಹಾವಳಿ ಹೆಚ್ಚುಗುತ್ತಿದೆ. ಹುಡುಗಿಯರನ್ನು ನೋಡಿದ ತಕ್ಷಣ ಕೆಟ್ಟಾಗಿ ನಡೆದುಕೊಳ್ಳುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದೀಗ ಇಲ್ಲೊಂದು ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಬಗ್ಗೆ ನ್ಯೂಸ್ 9 ವರದಿಯನ್ನು ಮಾಡಿದೆ. ಈ ಬಗ್ಗೆ ಸ್ವತಃ ಮಾಡೆಲ್ ವಿಡಿಯೋವೊಂದು ಹಂಚಿಕೊಂಡು, ತನಗೆ ಆಗಿರುವ ಈ ಕೆಟ್ಟ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ಜೈಪುರದ (Jaipur) ಗುರ್ಗಾಂವ್ನಲ್ಲಿ (Gurgaon police) ಈ ಘಟನೆ ನಡೆದಿದೆ. ರಸ್ತೆಯಲ್ಲಿ ಅಷ್ಟೊಂದು ಜನದಟ್ಟಣೆ ಇದ್ರು ಆತನ ನನ್ನ ನೋಡಿ ಹಸ್ತಮೈಥುನ ಮಾಡಿಕೊಂಡಿದ್ದಾನೆ ಎಂದು ಹೇಳಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಗುರ್ಗಾಂವ್ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಕಿರುಕುಳದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ.
ದೆಹಲಿ-ಜೈಪುರ ಹೆದ್ದಾರಿಯ ರಾಜೀವ್ ಚೌಕ್ ಬಳಿ ಈ ಮಾಡೆಲ್ ಕ್ಯಾಬ್‌ಗಾಗಿ ಕಾಯುತ್ತಿದ್ದಾಗ ಮುಖಕ್ಕೆ ಮಾಸ್ಕ್ ಧರಿಸಿದ್ದ ವ್ಯಕ್ತಿ ಆಕೆ ಸುತ್ತ ಸುತ್ತಾಡಲು ಶುರು ಮಾಡಿದ್ದಾನೆ. ಆಗಸ್ಟ್ 2 ರಂದು ಬೆಳಿಗ್ಗೆ 11 ಗಂಟೆಗೆ ಈ ಘಟನೆ ನಡೆದಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವರಿಸಿದ್ದಾರೆ. ಈ ವ್ಯಕ್ತಿ ನನ್ನ ಹತ್ತಿರ ಬಂದು ಸುತ್ತುತ್ತಿದ್ದ ನನ್ನನ್ನು ದಿಟ್ಟಿಸುತ್ತಿದ್ದ. ಆರಂಭದಲ್ಲಿ ನಾನು ಕೂಡ ಆತನನ್ನು ಗಮನಿಸಿಲ್ಲ. ಆದರೆ ಸ್ವಲ್ಪ ಹೊತ್ತಿನ ನಂತರ ಪ್ಯಾಂಟ್ ಜಿಪ್ ಬಿಚ್ಚಿರುವುದನ್ನು ನಾನು ಗಮನಿಸಿದೆ. ಅವನು ನನ್ನನ್ನು ದಿಟ್ಟಿಸಿ ಹಸ್ತಮೈಥುನ ಮಾಡಿಕೊಳ್ಳಲು ಪ್ರಾರಂಭಿಸಿದ್ದಾನೆ. ಅವನು ಮಾನಸಿಕ ಅಸ್ವಸ್ಥನಲ್ಲ. ತಾನು ಏನು ಮಾಡುತ್ತಿದ್ದೇನೆ ಎಂಬುದನ್ನು ತಿಳಿದಿತ್ತು. ಆದರೆ ಆತನ ಈ ಕ್ರಿಯೆ ನನಗೆ ತುಂಬಾ ಅಸಹ್ಯವನ್ನುಂಟು ಮಾಡಿತ್ತು ಎಂದು ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: ತೆರಿಗೆ ಹಣ ವಾಪಾಸ್ ಕೊಡಿ, ನಾವೇ ಬೆಂಗಳೂರು ಅಭಿವೃದ್ಧಿ ಪಡಿಸುತ್ತೇವೆ ಎಂದ ಬೆಂಗಳೂರಿನ ನಾಗರಿಕರು
ವೈರಲ್ ವಿಡಿಯೋ ಇಲ್ಲಿದೆ ನೋಡಿ:
ಮೊದಲು ನನಗೂ ತುಂಬಾ ಭಯ ಆಗಿತ್ತು. ಆದರೆ ನಂತರದಲ್ಲಿ ನಾನು ಆತನ ಈ ಅಸಹ್ಯ ಕೃತ್ಯವನ್ನು ವಿಡಿಯೋ ಮಾಡಿದ್ದೇನೆ. ನಂತರ ಮನೆಗೆ ಹೋದ್ಮೇಲೆ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದೇನೆ. ಈ ಮಾಡೆಲ್ ವಿಡಿಯೋವನ್ನು ಆಧಾರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 75(2) (ಲೈಂಗಿಕ ಕಿರುಕುಳ) ಮತ್ತು 78 (ಹಿಂಬಾಲಿಸುವುದು) ಅಡಿಯಲ್ಲಿ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ ಈ ಬಗ್ಗೆ ತನಿಖೆಯನ್ನು ಆರಂಭಿಸಿದ್ದಾರೆ.
ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ








