ರೂ. 7 ಲಕ್ಷ ಮೌಲ್ಯದ ನೆಕ್ಲೇಸ್​ ಕದ್ದ ಮಹಿಳೆಯ ವಿಡಿಯೋ ವೈರಲ್​

Uttar Pradesh : ಕಣ್ಣಿಗೆ ಕೂಲಿಂಗ್ ಗ್ಲಾಸ್​, ಮುಖಕ್ಕೆ ಮಾಸ್ಕ್​ ಧರಿಸಿದ ಈ ಮಹಿಳೆ ಉತ್ತರಪ್ರದೇಶದ ಆಭರಣ ಮಳಿಗೆಗೆ ಹೋಗುತ್ತಾಳೆ. ಬಹಳ ಚಾಣಾಕ್ಷತೆಯಿಂದ ಕಳ್ಳತನ ಮಾಡುತ್ತಾಳೆ. ಪೊಲೀಸರು ಈಕೆಯನ್ನು ಹುಡುಕುತ್ತಿದ್ದಾರೆ.

ರೂ. 7 ಲಕ್ಷ ಮೌಲ್ಯದ ನೆಕ್ಲೇಸ್​ ಕದ್ದ ಮಹಿಳೆಯ ವಿಡಿಯೋ ವೈರಲ್​
7 ಲಕ್ಷ ರೂ. ಮೌಲ್ಯದ ನೆಕ್ಲೆಸ್ ಕದಿಯುತ್ತಿರುವ ಮಹಿಳೆ
Follow us
TV9 Web
| Updated By: ಶ್ರೀದೇವಿ ಕಳಸದ

Updated on: Nov 28, 2022 | 6:05 PM

Viral Video : ಉತ್ತರ ಪ್ರದೇಶದ ಗೋರಖ್‌ಪುರದ ಆಭರಣ ಮಳಿಗೆಯೊಂದರಲ್ಲಿ ಮಹಿಳೆಯೊಬ್ಬಳು ರೂ. 7 ಲಕ್ಷದ ನೆಕ್ಲೇಸ್​ ಅನ್ನು ಕದ್ದಿದ್ದಾಳೆ. ಈಕೆ ಆಭರಣವನ್ನು ಕದಿಯುವ ಈ ದೃಶ್ಯ ಆಭರಣ ಮಳಿಗೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಇದೀಗ ವೈರಲ್ ಆಗಿದೆ. ಈ ಮಹಿಳೆಯು ಮಾಸ್ಕ್ ಮತ್ತು ಕಪ್ಪುಬಣ್ಣದ ಕೂಲಿಂಗ್​ ಗ್ಲಾಸ್​ ಧರಿಸಿದ್ದಾಳೆ. ನೆಟ್ಟಿಗರು ಈ ವಿಡಿಯೋ ನೋಡಿ ಬೆಚ್ಚಿಬಿದ್ದಿದ್ದಾರೆ. ಈ ಘಟನೆ ನಡೆದಿದ್ದು ನವೆಂಬರ್ 17ರಂದು.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by India Today (@indiatoday)

ಬಲದೇವ್​ ಪ್ಲಾಝಾದ ಬೇಚೂಲಾಲ್​ ಸರಾಫ್​ ಪ್ರೈವೇಟ್ ಲಿಮಿಟೆಡ್​ ಎಂಬ ಆಭರಣ ಅಂಗಡಿಗೆ ಈ ಮಹಿಳೆ ನೆಕ್ಲೇಸ್​ ಖರೀದಿಸಲು ಹೋಗಿದ್ದಾಳೆ. ಆಭರಣವನ್ನು ಸಮೀಪದಿಂದ ನೋಡುತ್ತಿರುವಂತೆ ಒಂದೆರಡು ಸಲ ನಟಿಸುತ್ತಾಳೆ. ಹೀಗೆ ಮಾಡುತ್ತಲೇ ನೆಕ್ಲೇಸ್​ನ ಬಾಕ್ಸ್​ಗಳನ್ನು ತನ್ನ ತೊಡೆಯ ಮೇಲೆ ಇಟ್ಟುಕೊಳ್ಳುತ್ತಾಳೆ. ನಂತರ ಒಂದನ್ನು ಮಾತ್ರ ಕೌಂಟರಿನ ಮೇಲೆ ಇಡುತ್ತಾಳೆ. ತೊಡೆಯ ಮೇಲೆ ಇಟ್ಟುಕೊಂಡ ಬಾಕ್ಸ್​ ಅನ್ನು ಸೀರೆಯಿಂದ ಮರೆಮಾಚುತ್ತಾಳೆ.

ಸಿಸಿಟಿವಿಯಲ್ಲಿ ಸೆರೆಯಾದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಹೌಹಾರಿದ್ದಾರೆ. ಪೊಲೀಸರು ಈ ಕಳ್ಳಿಯನ್ನು ಇನ್ನೂ ಹುಡುಕುತ್ತಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?