ಮೂಗಿನಲ್ಲಿಯೇ ಅತಿ ವೇಗದಲ್ಲಿ ಟೈಪಿಂಗ್​ ಮಾಡ್ತಾರೆ ಇವರು! ಗಿನ್ನಿಸ್​ ದಾಖಲೆಯಲ್ಲಿದೆ ಇವರು ಹೆಸರು

ನನ್ನ ದಾಖಲೆಗೆ ಸಾಕ್ಷಿಯಾಗಿ ಪ್ರಮಾಣ ಪತ್ರವನ್ನು ಸ್ವೀಕರಿಸಿದೆ. ಇದು ನನ್ನ ಉತ್ಸುಕತೆಯನ್ನು ಹೆಚ್ಚಿಸಿತು. ಆ ಬಳಿಕ ಇನ್ನೂ ಹೆಚ್ಚಿನ ಅಭ್ಯಾಸವನ್ನು ಮಾಡಲು ಪ್ರಾರಂಭಿಸಿದೆ. 2016ರಲ್ಲಿ ನಾನು ಎರಡು ಹೊಸ ದಾಖಲೆಗಳನ್ನು ಮಾಡಿದೆ ಎಂದು ಅವರು ಹೇಳಿದ್ದಾರೆ.

ಮೂಗಿನಲ್ಲಿಯೇ ಅತಿ ವೇಗದಲ್ಲಿ ಟೈಪಿಂಗ್​ ಮಾಡ್ತಾರೆ ಇವರು! ಗಿನ್ನಿಸ್​ ದಾಖಲೆಯಲ್ಲಿದೆ ಇವರು ಹೆಸರು
ಪಿಟಿಐ ಚಿತ್ರ
Follow us
TV9 Web
| Updated By: shruti hegde

Updated on: Jun 20, 2021 | 4:14 PM

ಈಗೆಲ್ಲಾ ಕಂಪ್ಯೂಟರ್​ ಸಿಸ್ಟಮ್​ದೇ ಹಾವಳಿ. ದೊಡ್ಡ ದೊಡ್ಡ ಸಂಸ್ಥೆಗಳೆಲ್ಲಾ ಎಲ್ಲಾ ಲೆಕ್ಕ ಪತ್ರಗಳನ್ನು ಅಥವಾ ದತ್ತಾಂಶಗಳನ್ನು ಕಂಪ್ಯೂಟರ್​ನಲ್ಲಿಯೇ ದಾಖಲಿಸಿಡುತ್ತದೆ. ಸಾಮಾಜ್ಯವಾಗಿ ಕೈಗಳಿಂದ ಟೈಪ್​ ಮಾಡುವುದೇ ಕಷ್ಟಕರ.. ಆದರೆ ಇಲ್ಲೋರ್ವರು ಮೂಗಿನ ಸಹಾಯದಿಂದ ಟೈಪಿಂಗ್​ ಮಾಡ್ತಾರೆ. ಅತಿ ವೇಗದಲ್ಲಿ ಕಣ್ಮುಚ್ಚಿಕೊಂಡು ಟೈಪ್​ ಮಾಡಿ ಗಿನ್ನಿಸ್​ ದಾಖಲೆ ಸೃಷ್ಟಿಸಿದ್ದಾರೆ. ಆಶ್ಚರ್ಯವೆನಿಸಿದರೂ ನಂಬಲೇ ಬೇಕಾದ ಸತ್ಯವಿದು. ಇರ ಹೆಸರು ವಿನೋದ್​ ಕುಮಾರ್​ ಚೌಧರಿ. ಕುತೂಹಲ ಕೆರಳಿಸುವ ವಿಷಯವೆಂದ್ರೆ ಇವರು ಎಲ್ಲಿಯವರು? ಇವರ ವೃತ್ತಿಯೇನು? 

ವಿನೋದ್​ ಕುಮಾರ್ ಚೌಧರಿ ಅವರು ಜವಹರ್​ಲಾಲ್​ ನೆಹರೂ ವಿಶ್ವವಿದ್ಯಾಲಯದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಇವರು ಪ್ರತಿಭಾನ್ವಿತರೂ ಹೌದು! ಜತೆಗೆ ಒಂಭತ್ತು ವಿವಿಧ ಟ್ಯಾಲೆಂಟ್​ ಮೂಲಕ ಗಿನ್ನಿಸ್​ ದಾಖಲೆಯನ್ನು ಸೃಷ್ಟಿದ ಮಹಾನ್​ ಕಲಾವಿದರು ಇವರು. ಜವಹರ್​ಲಾಲ್​ ನೆಹರು ವಿಶ್ವ ವಿದ್ಯಾಲಯದಲ್ಲಿ ಕಂಪ್ಯೂಟರ್​ ಆಪರೇಟರ್​ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ ವಿನೋದ್​ ಕುಮಾರ್​ ಚೌಧರಿ. ಅವರು ತಮ್ಮ ಸಾಧನೆಯ ಮೂಲಕ ಗಿನ್ನಿಸ್​ ದಾಖಲೆ ಸೃಷ್ಟಿಸಿ ಜನಪ್ರಿಯತೆ ಪಡೆದಿದ್ದಾರೆ. ವಿನೋದ್​ ಕುಮಾರ್ ಚೌಧರಿ ಅವರಿಗೆ 41 ವರ್ಷ.

2014 ರಲ್ಲಿ ತನ್ನ ಮೂಗಿನಿಂದ ಟೈಪಿಂಗ್​ ಮಾಡುವ ಮೂಲಕ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಜತೆಗೆ ಬಾಯಿಯಲ್ಲಿ ಕೋಲು ಹಿಡಿದು ಟೈಪಿಂಗ್​ ಮಾಡುವುದು, ಕಣ್ಮುಚ್ಚಿಕೊಂಡು ಟೈಪಿಂಗ್​ ಮಾಡುವುದು ಜತೆಗೆ ವೇಗವಾಗಿ ಟೈಪಿಂಗ್​ ಮಾಡುವುದರ ಮೂಲಕ ದಾಖಲೆ ಸೃಷ್ಟಿಸಿದ್ದಾರೆ. ಇದರ ಜತೆಗೆ ತನ್ನ ವಿಶಿಷ್ಟ ಕಲೆಯನ್ನು ಬಡ ಮಕ್ಕಳಿಗೆ ಹಾಗೂ ಅಂಗವಿಕಲ ಮಕ್ಕಳಿಗೆ ಮನೆಯಲ್ಲಿಯೇ ಪಾಠ ಮಾಡುತ್ತಿದ್ದಾರೆ.

‘ಬಾಲ್ಯದಲ್ಲಿರುವಾಗ ನನಗೆ ಕ್ರೀಡೆಯ ಬಗ್ಗೆ ತುಂಬಾ ಆಸಕ್ತಿ ಇತ್ತು. ಆದರೆ ನಾನು ದೊಡ್ಡವನಾಗುತ್ತಿದ್ದಂತೆಯೇ ನನ್ನ ಆರೋಗ್ಯ ಸಮಸ್ಯೆಯಿಂದಾಗಿ ಕ್ರೀಡೆಗಳನ್ನು ಮುಂದುವರೆಸಲು ಸಾಧ್ಯವಾಗಲಿಲ್ಲ. ಆ ಬಳಿಕ, 2014ರ ಸಮಯದಲ್ಲಿ ನನ್ನ ಮೂಗಿನ ಸಹಾಯದಿಂದ 46.30 ಸೆಕೆಂಡುಗಳಲ್ಲಿ 103 ಅಕ್ಷರಗಳನ್ನು ಟೈಪ್​ ಮಾಡುವ ಮೂಲಕ ಮೊದಲ ದಾಖಲೆಯನ್ನು ಸೃಷ್ಟಿಸಿದೆ. ಇದುವರೆಗೆ, ಟೈಪಿಂಗ್​ ಮಾಡಲು ತೆಗೆದುಕೊಂಡ ಕಡಿಮೆ ಸಮಯವಿದು’ ಎಂದು ವಿನೋದ್​ ಕುಮಾರ್​ ಚೌಧರಿ ಪಿಟಿಐಗೆ ತಿಳಿಸಿದ್ದಾರೆ.

ನನ್ನ ದಾಖಲೆಗೆ ಸಾಕ್ಷಿಯಾಗಿ ಪ್ರಮಾಣ ಪತ್ರವನ್ನು ಸ್ವೀಕರಿಸಿದೆ. ಇದು ನನ್ನ ಉತ್ಸುಕತೆಯನ್ನು ಹೆಚ್ಚಿಸಿತು. ಆ ಬಳಿಕ ಇನ್ನೂ ಹೆಚ್ಚಿನ ಅಭ್ಯಾಸವನ್ನು ಮಾಡಲು ಪ್ರಾರಂಭಿಸಿದೆ. 2016ರಲ್ಲಿ ನಾನು ಎರಡು ಹೊಸ ದಾಖಲೆಗಳನ್ನು ಮಾಡಿದೆ ಎಂದು ಅವರು ಹೇಳಿದ್ದಾರೆ.

2016ರಲ್ಲಿ ಕಣ್ಣಿಗೆ ಪಟ್ಟಿಕಟ್ಟಿಕೊಂಡು 6.09 ಸೆಕೆಂಡುಗಳಲ್ಲಿ ಎಲ್ಲಾ ವರ್ಣಾಕ್ಷರಗಳನ್ನು ಅತಿ ವೇಗದಲ್ಲಿ ಟೈಪ್ ಮಾಡಿದೆ ದಾಖಲೆ ಬರೆದೆ ಎಂದು ಖುಷಿಯನ್ನು ಹಂಚಿಕೊಂಡಿದ್ದಾರೆ.

ಹಿರಿಯ ಕ್ರಿಕೆಟಿಗ ಸಚಿನ್​ ತೆಂಡೂಲ್ಕರ್​ ಅವರಂತೆ ಗಿನ್ನಿಸ್​ ಪುಸ್ತಕದಲ್ಲಿ 19 ದಾಖಲೆಗಳನ್ನು ಸೃಷ್ಟಿಸುವ ಆಸೆ ಹೊಂದಿದ್ದೇನೆ. ಇದಕ್ಕಾಗಿ ನಾನು ಹೊಸ ಹೊಸ ಪ್ರಯತ್ನಗಳನ್ನು ಮಾಡುತ್ತಲೇ ಇರುತ್ತೇನೆ ಮತ್ತು ಯಾವಾಗಲೂ ಅಭ್ಯಾಸದಲ್ಲಿ ತೊಡಗಿರುತ್ತೇನೆ. ಯಾವುದೇ ಮೂಲಸೌಕರ್ಯಗಳನ್ನು ಹೊಂದಿರದ ಹಾಗೂ ಅಗತ್ಯವಿರುವವರಿಗೆ ಉಚಿತವಾಗಿ ತರಬೇತಿಯನ್ನು ನೀಡುವ ಕಂಪ್ಯೂಟರ್​ ಸಂಸ್ಥೆಯನ್ನು ನಡೆಸಲು ನಾನು ಬಯಸುತ್ತೇನೆ ಎಂದು  ಹೇಳಿದ್ದಾರೆ.

ಇದೀಗ ನನ್ನ ಆರ್ಥಿಕ ಪರಿಸ್ಥಿತಿಯಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ ಅಭ್ಯಾಸ ಹೇಳಿಕೊಡುತ್ತಿದ್ದೇನೆ. ವಿದ್ಯಾರ್ಥಿಗಳು ಅಭ್ಯಾಸ ಮಾಡಬಹುದಾದ ಕೆಲವು ಕಂಪ್ಯೂಟರ್​ಗಳು ನನ್ನಲ್ಲಿವೆ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಒಂದು ನಿಮಿಷದೊಳಗೆ ಟೆನಿಸ್​ ಚೆಂಡನ್ನು 205 ಬಾರಿ ಮುಟ್ಟಿದ್ದೇನೆ ಗಿನ್ನಿಸ್​ ಪುಸ್ತಕದಲ್ಲಿ ಇದು ಹೊಸ ದಾಖಲೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:

ಗಿನ್ನಿಸ್ ರೆಕಾರ್ಡ್ ಸೇರಿತು ಮಾವಿನಹಣ್ಣು: ಈ ಹಣ್ಣಿನ ತೂಕ ಬರೋಬ್ಬರಿ 4.25 ಕೆಜಿ

ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ನಿರ್ಮಿಸಿದ ಗಿನ್ನಿಸ್​ ದಾಖಲೆ ಏನು ಗೊತ್ತಾ?

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ