ನಟಿ ಕಂಗನಾ ರಣಾವತ್ (Kangana Ranaut) ಅವರಿಗೆ ಇತ್ತೀಚೆಗೆ ಭಾರತೀಯ ಜನತಾ ಪಾರ್ಟಿ ಲೋಕಸಭಾ ಚುನಾವಣಾ ಟಿಕೆಟ್ ನೀಡಿದೆ. ಇಡೀ ವಿಶ್ವದಲ್ಲಿ ಸಣ್ಣ ಕಾಶಿ ಅಂತ ಪ್ರಸಿದ್ಧವಾಗಿರುವ ಮಂಡಿ ಕ್ಷೇತ್ರದಿಂದ ಅವರು ಕಣಕ್ಕಿಳಿಯುತ್ತಿದ್ದಾರೆ. ಹೀಗಾಗಿ ಅವರು ಈಗಾಗಲೇ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಿಸಿಕೊಂಡಿದ್ದಾರೆ. ಆದರೆ ಅವರು ಇತ್ತೀಚೆಗೆ ಖಾಸಗಿ ವಾಹಿನಿಯೊಂದಕ್ಕೆ ನೀಡಿದ್ದ ಸಂದರ್ಶನದಿಂದ ಸದ್ಯ ಸಾಕಷ್ಟು ಚರ್ಚೆಗೊಳಗಾಗುತ್ತಿದ್ದಾರೆ. ನಟಿ ಕಂಗನಾ ರಣಾವತ್ ಅವರು ಸಂದರ್ಶನವೊಂದರಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸುಬಾಸ್ ಚಂದ್ರ ಬೋಸ್ ಅವರನ್ನು ಭಾರತದ ಮೊದಲ ಪ್ರಧಾನಿ ಎಂದು ಹೇಳಿದ್ದಾರೆ. ಈ ಹೇಳಿಕೆಯೇ ಸದ್ಯ ಇಂಟರ್ನೆಟ್ನಲ್ಲಿ ಸಾಕಷ್ಟು ಹಲ್ ಚಲ್ ಎಬ್ಬಿಸಿದೆ.
ಕಂಗನಾ ರಣಾವತ್ರ ಪ್ರಕಾರ ‘ಭಾರತಕ್ಕೆ 2014 ರಲ್ಲಿ ಸ್ವಾತಂತ್ರ್ಯ ಸಿಕ್ಕಿತು. ನೇತಾಜಿ ಬೋಸ್ ಸ್ವತಂತ್ರ ಭಾರತದ ಮೊದಲ ಪ್ರಧಾನಿ ಆಗಿದ್ದರು. ಸರ್ದಾರ್ ಪಟೇಲ್ ಅವರಿಗೆ ಇಂಗ್ಲಿಷ್ ಮಾತನಾಡಲು ಬಾರದ ಕಾರಣ ಅವರು ಪ್ರಧಾನಿ ಆಗಲಿಲ್ಲ’ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಎದೆಯ ಮೇಲೆ ಫ್ಯಾನ್ ಅಳವಡಿಸಿಕೊಂಡ ಬಂದ ಊರ್ಫಿ ಜಾವೇದ್: ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದನ್ನು ನಿಷೇಧಿಸಿ ಎಂದ ನೆಟ್ಟಿಗರು
ಭಾರತದ ಮೊದಲ ಪ್ರಧಾನ ಮಂತ್ರಿ ಹೇಳಿಕೆ ನೀಡಿದ ಬಳಿಕ ಕಂಗನಾ ರಣಾವತ್ ಅವರ “ಜ್ಞಾನ” ದ ಬಗ್ಗೆ ಸಾಕಷ್ಟು ಟ್ರೋಲ್ ಮಾಡಲಾಗುತ್ತಿದೆ. ಹಲವಾರು ನೆಟಿಗರು ಕಮೆಂಟ್ ಮಾಡುವ ಮೂಲಕ ಕಂಗನಾ ರಣಾವತ್ ಅವರಿಗೆ ಸರಿಯಾದ ಪಾಠ ಮಾಡಿದ್ದಾರೆ.
Hey Prabhu 🙏 pic.twitter.com/G0hbuH7MvA
— Srinivas BV (@srinivasiyc) April 4, 2024
ಇದಕ್ಕೆ ಪ್ರತಿಕ್ರಿಯಿಸಿರುವ ನೆಟ್ಟಿಗರು ಮುಂದಿನ 5 ವರ್ಷ ಇಂತಹ ಹೆಚ್ಚು ಹೆಚ್ಚು ಜೋಕ್‌ಗಳಿಗಾಗಿ ಮಂಡಿ ಕ್ಷೇತ್ರದ ಜನರು ಕಂಗನಾ ರಣಾವತ್ರಿಗೆ ಮತ ಹಾಕಿ ಎಂದು ಕಿಚಾಯಿಸಿದ್ದಾರೆ.
ಇದನ್ನೂ ಓದಿ: ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲ: ಪಾಪ ನಿಂತುಕೊಂಡೇ ಐಪಿಎಲ್ ಪಂದ್ಯ ವೀಕ್ಷಿಸಿದ ಫ್ಯಾನ್ಸ್
ಬಿಆರ್ಎಸ್ ಕಾರ್ಯಾಧ್ಯಕ್ಷ ಕೆಟಿ ರಾಮರಾವ್ ಕೂಡ ಬಗ್ಗೆ ಪ್ರತಿಕ್ರಿಯಿಸಿದ್ದು, ‘ಸುಭಾಷ್ ಚಂದ್ರ ಬೋಸ್ ನಮ್ಮ ಮೊದಲ ಪ್ರಧಾನಿ ಎಂದು ಬಿಜೆಪಿ ಅಭ್ಯರ್ಥಿಯೊಬ್ಬರು ಹೇಳುತ್ತಾರೆ. ದಕ್ಷಿಣದ ಮತ್ತೊಬ್ಬ ಬಿಜೆಪಿ ನಾಯಕ ಮಹಾತ್ಮಾ ಗಾಂಧಿ ನಮ್ಮ ಪ್ರಧಾನಿ ಎಂದು ಹೇಳುತ್ತಾರೆ. ಇವರೆಲ್ಲ ಎಲ್ಲಿಂದ ಪದವಿ ಪಡೆದರು?’ ಎಂದು ತಮ್ಮ ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.
One BJP candidate from North says Subash Chandra Bose was our first PM !!
And another BJP leader from South says Mahatma Gandhi was our PM !!
Where did all these people graduate from? 😁
— KTR (@KTRBRS) April 5, 2024
ಇಷ್ಟೆಲ್ಲಾ ಆದ ಬಳಿಕ ನಟಿ ಕಂಗನಾ ರಣಾವತ್ ಅವರು ಸ್ಪಷ್ಟನೆ ನೀಡಿದ್ದು, ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಕಲಿಕೆಗಾರರಿಗೆ ಕೆಲವು ಸಾಮಾನ್ಯ ಜ್ಞಾನ ಎಂದು ಬರೆದುಕೊಂಡಿದ್ದಾರೆ. ಸಿಂಗಾಪುರದಲ್ಲಿ ಮುಕ್ತ ಭಾರತಕ್ಕಾಗಿ ಸರ್ಕಾರವನ್ನು ರಚಿಸಿದ ನಂತರ ಸುಭಾಷ್ ಚಂದ್ರ ಬೋಸ್ ಅವರು ತಮ್ಮನ್ನು ತಾವು ಪ್ರಧಾನಿ ಎಂದು ಘೋಷಿಸಿಕೊಂಡಿದ್ದರು ಎನ್ನುವ ಸ್ಕ್ರೀನ್‌ಶಾಟ್ ಅನ್ನು ಅವರು ಹಂಚಿಕೊಂಡಿದ್ದಾರೆ.
ಮತ್ತಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:18 pm, Sun, 7 April 24