AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aishwarya Shivakumar: ಒನಕೆ ಓಬವ್ವನ ರೂಪ ತಾಳಿ ಬಂದ ಡಿಕೆ ಶಿವಕುಮಾರ್ ಪುತ್ರಿ

ಒನಕೆ ಓಬವ್ವನ ವೇಷ ತೊಟ್ಟು ಫೋಟೋ ಕ್ಲಿಕ್ಕಿಸಿಕೊಂಡಿರುವ ಡಿಕೆಶಿ ಪುತ್ರಿ ಐಶ್ವರ್ಯ ಸವಿಸ್ತಾರವಾಗಿ ನಾರಿ ಶಕ್ತಿಯ ಬಗ್ಗೆ ಕ್ಯಾಪ್ಷನ್​ ಬರೆದುಕೊಂಡಿದ್ದಾರೆ. "ಹೆಣ್ಣು ಅಬಲೆಯಲ್ಲ, ಎಲ್ಲವನ್ನೂ ಸಾಧಿಸಬಲ್ಲ ಶಕ್ತಿ ಆಕೆಗಿದೆ. ಧೈರ್ಯ, ಸಾಹಸದ ಮೂಲಕ ನಾರಿಶಕ್ತಿಯ ಪ್ರತೀಕವಾಗಿ ಒನಕೆ ಓಬವ್ವ ಅವರು ನಮಗೆ ಸ್ಫೂರ್ತಿಯಾಗಿದ್ದಾರೆ" ಎಂದು ಬರೆದುಕೊಂಡಿದ್ದಾರೆ.

Aishwarya Shivakumar: ಒನಕೆ ಓಬವ್ವನ ರೂಪ ತಾಳಿ ಬಂದ ಡಿಕೆ ಶಿವಕುಮಾರ್ ಪುತ್ರಿ
ಒನಕೆ ಓಬವ್ವನ ರೂಪ ತಾಳಿ ಬಂದ ಡಿಕೆ ಶಿವಕುಮಾರ್ ಪುತ್ರಿImage Credit source: instagram
ಅಕ್ಷತಾ ವರ್ಕಾಡಿ
|

Updated on: Apr 20, 2024 | 4:34 PM

Share

ಕರ್ನಾಟಕ ವೀರ ವನಿತೆಯರಲ್ಲಿ ಒಬ್ಬರೆಂದು ಪರಿಗಣಿಸಲಾಗಿರುವ, ಚಿತ್ರದುರ್ಗದ ಇತಿಹಾಸದಲ್ಲಿ ಅಜರಾಮರವಾಗಿ ಉಳಿದಿರುವ ಹೆಸರು ಒನಕೆ ಓಬವ್ವ. ಇದೀಗ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D. K. Shivakumar) ಅವರ ಪುತ್ರಿ ಐಶ್ವರ್ಯ ಶಿವಕುಮಾರ್ (Aishwarya Shivakumar) ಅವರು ಒನಕೆ ಓಬವ್ವ ಅವರ ವೇಷ ತೊಟ್ಟು ಫೋಟೋಶೂಟ್​​ ಮಾಡಿಕೊಂಡಿದ್ದಾರೆ. ಇದಲ್ಲದೇ ನಾರಿ ಶಕ್ತಿಯ ಬಗ್ಗೆ ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗಿದೆ.

ಒನಕೆ ಓಬವ್ವನ ವೇಷ ತೊಟ್ಟು ಫೋಟೋ ಕ್ಲಿಕ್ಕಿಸಿಕೊಂಡಿರುವ ಐಶ್ವರ್ಯ ಸವಿಸ್ತಾರವಾಗಿ ನಾರಿ ಶಕ್ತಿಯ ಬಗ್ಗೆ ಕ್ಯಾಪ್ಷನ್​ ಬರೆದುಕೊಂಡಿದ್ದಾರೆ. “ಹೆಣ್ಣು ಅಬಲೆಯಲ್ಲ, ಎಲ್ಲವನ್ನೂ ಸಾಧಿಸಬಲ್ಲ ಶಕ್ತಿ ಆಕೆಗಿದೆ. ಧೈರ್ಯ, ಸಾಹಸದ ಮೂಲಕ ನಾರಿಶಕ್ತಿಯ ಪ್ರತೀಕವಾಗಿ ಒನಕೆ ಓಬವ್ವ ಅವರು ನಮಗೆ ಸ್ಫೂರ್ತಿಯಾಗಿದ್ದಾರೆ. ‘ಧೈರ್ಯಂ ಸರ್ವತ್ರ ಸಾಧನಂ.’ ಧೈರ್ಯ ಇದ್ದರೆ ಎಂತಹ ಸಮಸ್ಯೆ ಎದುರಾದರೂ ಜಯಿಸಬಹುದು ಎಂಬುದಕ್ಕೆ ಸಾಕ್ಷಿಯಾಗಿ ಒನಕೆ ಓಬವ್ವ ಅವರು ಇತಿಹಾಸ ಪುಟದಲ್ಲಿ ಅಜರಾಮರವಾಗಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ವೈರಲ್​ ಪೋಸ್ಟ್​ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಹಿಳಾ ರಿಪೋರ್ಟರ್​​ಗೆ ಬಲವಂತವಾಗಿ ಹಿಜಾಬ್​​ ಹಾಕಿದ ಮುಸ್ಲಿಂ ಯುವಕ, ಆಕೆಯ ಪ್ರತ್ಯುತ್ತರಕ್ಕೆ ನೆಟ್ಟಿಗರು ಫಿದಾ

ಡಿಕೆಶಿ ಪುತ್ರಿ ಫೋಟೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಐಶ್ವರ್ಯ ಶಿವಕುಮಾರ್ ಅವರ ಅಧಿಕೃತ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಫೋಟೋ ಹಂಚಿಕೊಳ್ಳಲಾಗಿದ್ದು, ಫೋಟೋ ಹಂಚಿಕೊಂಡ ಕೇವಲ 6ಗಂಟೆಯಲ್ಲಿ 17 ಸಾವಿರಕ್ಕೂ ಹೆಚ್ಚಿನ ಜನರು ಲೈಕ್ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್