
ಮಂಗಳೂರು, ಡಿಸೆಂಬರ್ 24: ಆಟೋ, ಬೈಕ್ (bike) ಸೇರಿದಂತೆ ಕಾರಿನ ಹಿಂಭಾಗದಲ್ಲಿ ಪ್ರೀತಿ ಪಾತ್ರದ ಹೆಸರು, ಕೆಲವರು ತಂದೆ ತಾಯಿಯ ಆಶೀರ್ವಾದ, ಕೈಕೊಟ್ಟ ಪ್ರೇಮಿಯ ನೆನಪಿನಲ್ಲಿ ಕೆಲ ಸಾಲುಗಳನ್ನು ಬರೆದಿರುವುದನ್ನು ನೋಡಿರುತ್ತಿರುತ್ತೀರಿ. ಇಂತಹ ಸಾಲುಗಳನ್ನು ನೋಡಿದಾಗ ತುಟಿಯಂಚಿನಲ್ಲಿ ಸದ್ದಿಲ್ಲದೇ ನಗು ಮೂಡುತ್ತದೆ. ಇದೀಗ ಇಂತಹದ್ದೇ ಕಾರಿನ ಹಿಂಭಾಗದಲ್ಲಿ ಬರೆದ ಸಾಲುಗಳು ನೆಟ್ಟಿಗರ ಗಮನ ಸೆಳೆಯುತ್ತಿದೆ. ಮಂಗಳೂರಿನ (Manglore) ಸರ್ಕ್ಯೂಟ್ ಹೌಸ್ ರಸ್ತೆಯಲ್ಲಿ ಚಲಿಸುತ್ತಿರುವ ಮಾರುತಿ ಸುಜುಕಿ ಆಲ್ಟೋ ಕಾರ್‌ನ ಹಿಂಭಾಗದಲ್ಲಿ ಬರೆದ ಸಾಲುಗಳು ಉಳಿದ ವಾಹನ ಸವಾರರಿಗೆ ಎಚ್ಚರಿಕೆ ನೀಡಿದ್ದಂತಿದೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇನ್ ಕ್ರಿಡಿಬಲ್ ಮಂಗಳೂರು (incrediblemangloree) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಹಿಂಬದಿ ವಾಹನ ಸವಾರರು ಮಾರುತಿ ಸುಜುಕಿ ಆಲ್ಟೋ ಕಾರಿನ ಹಿಂಭಾಗದಲ್ಲಿ ಬರೆಯಲಾದ ಸಾಲುಗಳನ್ನು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಈ ಕಾರಿನ ಹಿಂಭಾಗದಲ್ಲಿ ಅಂತರ ಕಾಯ್ದುಕೊಳ್ಳಿ…ಇಎಂಐ ಬಾಕಿ ಇದೆ ಎಂದು ಬರೆದಿರುವುದನ್ನು ಕಾಣಬಹುದು.
ಇದನ್ನೂ ಓದಿ:ದೇವ್ರು ಕಣ್ಬಿಟ್ರೆ ಆನಂದ, ಮನುಷ್ಯ ಕಣ್ಬಟ್ರೆ ಗೋವಿಂದ; ಆಟೋ ಹಿಂಬದಿ ಬರೆದ ಸಾಲುಗಳು ವೈರಲ್
ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಪಾಪ ಈ ವಾಹನಕ್ಕೆ ಗುದ್ದುವ ಮುನ್ನ ಜೋಕೆ ಎಂದು ಹೇಳಿದ್ದಾರೆ. ಇನ್ನೊಬ್ಬರು, ತನ್ನ ಕಾರಿಗೆ ಏನಾದರೂ ಸಮಸ್ಯೆಯಾದಲ್ಲಿ ಸಾಲಕ್ಕೆ ನೀವೇ ಹೊಣೆಗಾರರು ಎಂಬಂತಿದೆ ಈ ಸಾಲು ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಈ ವ್ಯಕ್ತಿಯ ನೋವು ಕಾರಿನ ಹಿಂಭಾಗದ ಬರಹವೇ ಹೇಳುತ್ತಿದೆ ಎಂದಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ