ಇದಪ್ಪಾ ಅದೃಷ್ಟ ಅಂದ್ರೆ; 10 ಕೋಟಿ ರೂ. ಲಾಟರಿ ಗೆದ್ದು ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಕಣ್ಣೂರಿನ ಆಟೋ ಚಾಲಕ

ಅದೃಷ್ಟ ಯಾವಾಗ, ಹೇಗೆ ಒಲಿಯುತ್ತೆ ಅಂತ  ಹೇಳೋಕೆ ಆಗೊಲ್ಲ. ಈ ಅದೃಷ್ಟದ ಕಾರಣದಿಂದಲೇ ರಾತ್ರೋರಾತ್ರಿ ಶ್ರೀಮಂತರಾದವರನ್ನು ನೀವು ನೋಡಿರುತ್ತೀರಿ ಅಲ್ವಾ. ಅದೇ ರೀತಿ ಇದೀಗ ಕೇರಳದ ಆಟೋ ಚಾಲಕರೊಬ್ಬರಿಗೆ ಬಂಪರ್ ಅದೃಷ್ಟ ಒಳಿದಿದ್ದು, ನಿನ್ನೆ ರಾತ್ರಿಯಷ್ಟೇ ಅವರು ಲಾಟರಿ ಟಿಕೆಟ್ ಖರೀದಿಸಿದ್ದು, ಇಂದು  10 ಕೋಟಿ ಬಂಪರ್ ಲಾಟರಿ ಗೆಲ್ಲುವ ಮೂಲಕ ಕೋಟ್ಯಾಧಿಪತಿಯಾಗಿದ್ದಾರೆ.  

ಇದಪ್ಪಾ ಅದೃಷ್ಟ ಅಂದ್ರೆ; 10 ಕೋಟಿ ರೂ. ಲಾಟರಿ ಗೆದ್ದು ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಕಣ್ಣೂರಿನ ಆಟೋ ಚಾಲಕ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Mar 27, 2024 | 5:28 PM

ಅದೃಷ್ಟ ಯಾವಾಗ, ಯಾರಿಗೆ ಯಾವ ರೂಪದಲ್ಲಿ ಬರುತ್ತೆ ಅಂತ ಹೇಳೋಕೆ ಸಾಧ್ಯವಿಲ್ಲ. ಅದೆಷ್ಟೋ ಜನರು ಲಾಟರಿ ಗೆಲ್ಲುವ ಮೂಲಕವೇ ರಾತ್ರೋರಾತ್ರಿ ಕೋಟ್ಯಾಧಿಪತಿಗಳಾಗಿದ್ದಾರೆ. ಅದೃಷ್ಟ ಇದ್ದವರಿಗೆ ಲಾಟರಿ ಹೊಡಿಯುತ್ತದೆ.   ಹೀಗೆ ಸಾಮಾನ್ಯ ವ್ಯಕ್ತಿಗೆ ಲಾಟರಿ ಹೊಡೆದು ಕೋಟ್ಯಾಧಿಪತಿ ಆಗಿರುವುದನ್ನು ನೋಡಿ ನಮಗ್ಯಾಕೆ ಇಂಥ ಅದೃಷ್ಟ ಬರಬಾರದೆಂದು ಅದೆಷ್ಟೋ ಜನರು ಲಾಟರಿ ಟಿಕೆಟ್ ಖರೀದಿಸುವುದುಂಟು. ಆದರೆ ಕೆಲವರಿಗೆ ಮಾತ್ರ ಈ ಲಾಟರಿಯಲ್ಲಿ ಅದೃಷ್ಟದ ಬಾಗಿಲು ತೆರೆಯುತ್ತದೆ. ಇದೀಗ ಕೇರಳದ ಆಟೋ ಚಾಲಕರೊಬ್ಬರಿಗೆ ಈ ಅದೃಷ್ಟ ಒಲಿದಿದ್ದು, ನಿನ್ನೆ ರಾತ್ರಿಯಷ್ಟೇ ಅವರು ಲಾಟರಿ ಟಿಕೆಟ್ ಖರೀದಿ  ಮಾಡಿದ್ದು, ಇಂದು ಬೆಳಗ್ಗೆ ಲಾಟರಿಯಲ್ಲಿ ಪ್ರಥಮ ಬಹುಮಾನ 10 ಕೋಟಿ ರೂ. ಗೆದ್ದು ಕೋಟ್ಯಾಧಿಪತಿಯಾಗಿದ್ದಾರೆ.

ಕೇರಳದ ಕಣ್ಣೂರಿನ  ಆಳಕೋಡ್ ನಿವಾಸಿ ನಾಸರ್ ಅವರು 10 ಕೋಟಿ ರೂ. ಬಂಪರ್ ಲಾಟರಿ ಗೆದ್ದಿದವರು. ವೃತ್ತಿಯಲ್ಲಿ ಆಟೋ ಡ್ರೈವರ್ ಆಗಿರುವ ನಾಸರ್ ಇದೀಗ ಬಂಪರ್ ಲಾಟರಿ ಗೆಲ್ಲುವ ಮೂಲಕ ರಾತ್ರೋರಾತ್ರಿ ಕೋಟ್ಯಾಧಿಪತಿಯಾಗಿದ್ದಾರೆ.

ಇದನ್ನೂ ಓದಿ: ಕೋಳಿ, ಹಂದಿ ಇತ್ಯಾದಿ ಮಾಂಸಕ್ಕಿಂತ ಹೆಬ್ಬಾವಿನ ಮಾಂಸ ಬೆಸ್ಟ್; ಅಧ್ಯಯನ 

ಕೇರಳದ ಕಾರ್ತಿಕಪುರದ ರಾರರಾಜೇಶ್ವರಿ ಲಾಟರಿ ಏಜನ್ಸಿಯಿಂದ ನಾಸರ್ ಲಾಟರಿ ಟಿಕೆಟ್ ಖರೀಸಿದ್ದು, ಅವರ ಅದೃಷ್ಟ ಖುಲಾಯಿಸಿ ಈ ಲಾಟರಿಯಲ್ಲಿ ಪ್ರಥಮ ಬಹುಮಾನ 10 ಕೋಟಿ ರೂ. ಹಣವನ್ನು ಗೆದ್ದಿದ್ದಾರೆ. ಕಾರ್ತಿಕಪುರದಲ್ಲಿ ಆಟೋ ಚಾಲಕನಾಗಿ ಕೆಲಸ ಮಾಡುವ ನಾಸರ್ ನಿನ್ನೆ ರಾತ್ರಿಯಷ್ಟೇ ಲಾಟರಿ ಟಿಕೆಟ್ ಖರೀದಿಸಿದ್ದರು ಎಂದು ಲಾಟರಿ ಏಜೆಂಟ್ ರಾಜು ಹೇಳಿದ್ದಾರೆ. ಇದೀಗ ಟಿಕೆಟ್ ಖರೀದಿ ಮಾಡಿದ ಮರು ದಿನವೇ ನಾಸಿರ್ ಅವರಿಗೆ 10. ಕೋಟಿ ರೂ. ಗಳ ಬಂಪರ್ ಲಾಟರಿ ಸಿಕ್ಕಿದ್ದು,  ಈ ಸುದ್ದಿಯನ್ನು ಕೇಳಿ ಅದೃಷ್ಟ ಅಂದ್ರೆ ಇದಪ್ಪಾ ಎಂದು ನೆಟ್ಟಿಗರು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್