Viral: ಆಸ್ಪತ್ರೆಯಲ್ಲಿ ಹೃದಯಾಘಾತ, ಜೀವ ಉಳಿಸಲು ವೈದ್ಯರ ಹೋರಾಟ ಹೇಗಿತ್ತು ನೋಡಿ…

ವೈದ್ಯೋ ನಾರಾಯಣ ಹರಿ ಎಂಬ ಮಾತಿದೆ. ಅಂದ್ರೆ ವೈದ್ಯನಾದವನು ದೇವರಂತೆ ಒಂದು ಜೀವವನ್ನು ಬದುಕಿಸಬಲ್ಲ ಸಾಮಾರ್ಥ್ಯವನ್ನು ಹೊಂದಿರುವ ವ್ಯಕ್ತಿ ಎಂದು. ಅದೇ ರೀತಿ ಇಲ್ಲೊಬ್ಬ ವೈದ್ಯರೂ ಕೂಡಾ ತನ್ನ ಸಮಯ ಪ್ರಜ್ಞೆಯಿಂದ ಅಮೂಲ್ಯ ಜೀವವೊಂದನ್ನು ಉಳಿಸಿದ್ದಾರೆ. ಆಸ್ಪತ್ರೆಯಲ್ಲಿ ಕುಳಿತಿರುವಾಗಲೇ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೆ ತುತ್ತಾಗಿದ್ದು, ಆ ತಕ್ಷಣಕ್ಕೆ ದೇವರಂತೆ ಬಂದ ವೈದ್ಯರು ಸಿಪಿಆರ್‌ ನೀಡುವ ಮೂಲಕ ಆ ವ್ಯಕ್ತಿಯ ಜೀವ ಉಳಿಸಲು ದೊಡ್ಡ ಹೋರಾಟವನ್ನೇ ಮಾಡಿದ್ದಾರೆ. ಈ ವಿಡಿಯೋ ಇದೀಗ ವೈರಲ್‌ ಆಗುತ್ತಿದೆ.

Viral: ಆಸ್ಪತ್ರೆಯಲ್ಲಿ ಹೃದಯಾಘಾತ, ಜೀವ ಉಳಿಸಲು ವೈದ್ಯರ ಹೋರಾಟ ಹೇಗಿತ್ತು ನೋಡಿ…
ವೈರಲ್​​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 07, 2024 | 2:17 PM

ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೆ ತುತ್ತಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಆರೋಗ್ಯವಂತ ವ್ಯಕ್ತಿಗಳು ಏಕಾಏಕಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಅನೇಕ ಪ್ರಕರಣಗಳು ವರದಿಯಾಗುತ್ತಿವೆ. ಹಾರ್ಟ್‌ ಅಟ್ಯಾಕ್‌ ಆದ ಸಂದರ್ಭದಲ್ಲಿ ತಕ್ಷಣಕ್ಕೆ ಸಿಪಿಆರ್‌ ನೀಡಿದ್ರೆ ಪ್ರಾಣ ಉಳಿಯುವ ಸಾಧ್ಯತೆ ಇರುತ್ತದೆ. ಕೆಲ ಸಮಯದ ಹಿಂದೆ ವಿಮಾನ ನಿಲ್ದಾಣದಲ್ಲಿ ಹೃದಯಾಘಾತಕ್ಕೆ ತುತ್ತಾದ ವ್ಯಕ್ತಿಗೆ ವೈದ್ಯೆಯೊಬ್ಬರು ಸಿಪಿಆರ್‌ ನೀಡುವ ಮೂಲಕ ಪ್ರಾಣ ಉಳಿಸಿದ್ದರು. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಆಸ್ಪತ್ರೆಯಲ್ಲಿ ಕುಳಿತಿರುವಾಗಲೇ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೆ ತುತ್ತಾದ ವ್ಯಕ್ತಿಯೊಬ್ಬರಿಗೆ ದೇವರಂತೆ ಬಂದ ವೈದ್ಯರು ಸಿವಿಆರ್‌ ನೀಡುವ ಮೂಲಕ ಪ್ರಾಣ ರಕ್ಷಿಸಿದ್ದಾರೆ. ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿದೆ.

ಈ ಘಟನೆ ಕೇರಳದ ಆದಿಮಲ್ಲಿಯ ಮಾರ್ನಿಂಗ್‌ ಸ್ಟಾರ್‌ ಆಸ್ಪತ್ರೆಯಲ್ಲಿ ನಡೆದಿದ್ದು, ಆಸ್ಪತ್ರೆಯಲ್ಲಿ ಕುಳಿತಿರುವ ಸಂದರ್ಭದಲ್ಲಿಯೇ ಹೃದಯಾಘಾತಕ್ಕೆ ತುತ್ತಾತ ವ್ಯಕ್ತಿಗೆ ತಕ್ಷಣ ಸಿಪಿಆರ್‌ ನೀಡುವ ಮೂಲಕ ವೈದ್ಯರು ಒಂದು ಅಮೂಲ್ಯ ಜೀವವನ್ನು ರಕ್ಷಿಸಲು ಹೋರಾಟವನ್ನೇ ಮಾಡಿದ್ದಾರೆ. ಈ ದೃಶ್ಯ ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಸೂರಿ ಸುರೇಶ್‌ (Soori Suresh) ಎಂಬವರು ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ವೈದ್ಯರೊಬ್ಬರು ಹೃದಯಾಘಾತಕ್ಕೊಳಗಾದ ವ್ಯಕ್ತಿಯ ಪ್ರಾಣ ರಕ್ಷಿಸಲು ಹೋರಾಟವನ್ನೇ ಮಾಡುವ ದೃಶ್ಯವನ್ನು ಕಾಣಬಹುದು. ಆಸ್ಪತ್ರೆಗೆ ಬಂದಿದ್ದಂತಹ ವ್ಯಕ್ತಿಯೊಬ್ಬರು ಹಾರ್ಟ್‌ ಅಟ್ಯಾಕ್‌ಗೆ ತುತ್ತಾಗಿ ಕುಳಿತಲ್ಲಿಯೇ ಕುಸಿದು ಬೀಳುತ್ತಾರೆ. ಈ ದೃಶ್ಯವನ್ನು ಕಂಡ ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿಗಳು ತಕ್ಷಣ ಅಲ್ಲಿಗೆ ಓಡಿ ಬರುತ್ತಾರೆ. ಅದರಲ್ಲಿ ಒಬ್ಬ ವೈದ್ಯ ಸಿ.ಪಿ.ಆರ್‌ ಕೊಟ್ಟು ಒಂದು ಜೀವ ಉಳಿಸಿಲು ಹೋರಾಟವನ್ನೇ ಮಾಡಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಸ್ಟ್ರೇಚರ್‌ನಲ್ಲೂ ಸಾಗಿಸುವಾಗಲೂ ಕೂಡಾ ಹೃದಯಾಘಾತಕ್ಕೆ ತುತ್ತಾತ ವ್ಯಕ್ತಿಗೆ ಪ್ರಜ್ಞೆ ಬರಲೆಂದು ಸಿ.ಪಿ.ಆರ್‌ ನೀಡಿದ್ದಾರೆ. ವೈದ್ಯರು ಮತ್ತು ಅವರ ತಂಡದ ಸಮಯ ಪ್ರಜ್ಞೆ ಮತ್ತು ತಕ್ಷಣದ ಸ್ಪಂದನೆಯಿಂದ ಆ ವ್ಯಕ್ತಿಯ ಪ್ರಾಣ ಉಳಿದಿದೆ.

ಇದನ್ನೂ ಓದಿ: ತಮಟೆ ಏಟಿಗೆ ಕಿವಿ ಕೇಳದ ಬಾಲಕನ ಡಾನ್ಸ್, ತಾಯಿಯ ಖುಷಿಯನ್ನೊಮ್ಮೆ ನೋಡಿ

ನಾಲ್ಕು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 2.1 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಜೀವ ಉಳಿಸಲು ಹೋರಾಡಿದ ವೈದ್ಯರಿಗೆ ನನ್ನದೊಂದು ಸಲಾಂʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼವೈದ್ಯರು ನಿಜವಾದ ಕಲಿಯುಗದ ದೇವರುಗಳುʼ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ