Viral Video : ಫ್ರೆಶರ್ಸ್ ಡೇಗೆ ವಿದ್ಯಾರ್ಥಿನಿಯರೊಂದಿಗೆ ಸಖತ್ ಸ್ಟೆಪ್ ಹಾಕಿದ ಹೆಚ್ಓಡಿ, ವಿಡಿಯೋ ವೈರಲ್

ಸೋಶಿಯಲ್ ಮೀಡಿಯಾದಲ್ಲಿ ಕೆಲವೊಮ್ಮೆ ವಿಡಿಯೋಗಳು ನೆಟ್ಟಿಗರ ಮನಸ್ಸು ಗೆಲ್ಲುತ್ತವೆ. ಇದೀಗ ಇಂತಹದ್ದೆ ವಿಡಿಯೋವೊಂದು ವೈರಲ್ ಆಗಿದ್ದು ಕಾಲೇಜು ಕಾರ್ಯಕ್ರಮವೊಂದರಲ್ಲಿ ವಿದ್ಯಾರ್ಥಿನಿಯರೊಂದಿಗೆ ಹೆಚ್ ಒಡಿ ಭರ್ಜರಿಯಾಗಿ ಸ್ಟೆಪ್ ಹಾಕಿದ್ದಾರೆ. ಇವರ ಈ ಡಾನ್ಸ್‌ ಗೆ ವಿದ್ಯಾರ್ಥಿಗಳಂತೂ ಫುಲ್‌ ಫಿದಾ ಆಗಿದ್ದು, ಈ ವಿಡಿಯೋಗೆ ಮೆಚ್ಚುಗೆ ವ್ಯಕ್ತವಾಗಿದೆ.

Viral Video : ಫ್ರೆಶರ್ಸ್ ಡೇಗೆ ವಿದ್ಯಾರ್ಥಿನಿಯರೊಂದಿಗೆ ಸಖತ್ ಸ್ಟೆಪ್ ಹಾಕಿದ ಹೆಚ್ಓಡಿ, ವಿಡಿಯೋ ವೈರಲ್
Follow us
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ

Updated on: Nov 09, 2024 | 5:52 PM

ಪ್ರತಿಯೊಬ್ಬ ವಿದ್ಯಾರ್ಥಿ ಜೀವನದಲ್ಲಿ ಫೇವರಿಟ್ ಶಿಕ್ಷಕರೊಬ್ಬರು ಇದ್ದೆ ಇರುತ್ತಾರೆ. ತಮ್ಮ ಆತ್ಮೀಯ ಶಿಕ್ಷಕರ ಜೊತೆಗೆ ವಿವರಿಸಲಾಗದ ಬಂಧವೊಂದು ಬೆಸೆದಿರುತ್ತದೆ. ಶಿಕ್ಷಕರು ಕೂಡ ತಮ್ಮ ಪ್ರೀತಿಯ ವಿದ್ಯಾರ್ಥಿಗಳನ್ನು ಸ್ನೇಹಿತರಂತೆ ಭಾವಿಸುತ್ತಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಕಾಲೇಜು ಶಿಕ್ಷಕರೊಬ್ಬರು ವಿದ್ಯಾರ್ಥಿಗಳೊಂದಿಗೆ ಡ್ಯಾನ್ಸ್​ ಮಾಡಿರುವ ವಿಡಿಯೋ ವೈರಲ್​​​ ಆಗಿದೆ. ಹೆಚ್ಒಡಿ ಯುವಕರು ಕೂಡಾ ನಾಚುವಂತೆ ವಿದ್ಯಾರ್ಥಿನಿಯರೊಂದಿಗೆ ಅದ್ಭುತವಾಗಿ ನೃತ್ಯ ಮಾಡಿದ್ದಾರೆ.

ಈ ಡಾನ್ಸ್ ವಿಡಿಯೋವನ್ನು @amalvmusic ಹೆಸರಿನ ಖಾತೆಯಲ್ಲಿ ಶೇರ್ ಮಾಡಲಾಗಿದೆ. ಈ ವಿಡಿಯೋ ಕೇರಳದ ಕಾಲೇಜಿನಲ್ಲಿ ನಡೆದ ಡ್ಯಾನ್ಸ್​​ ಎಂದು ಹೇಳಲಾಗುತ್ತಿದೆ. ವೈರಲ್​ ಆಗಿರುವ ವಿಡಿಯೋದಲ್ಲಿ ಕಾಲೇಜು ವಿದ್ಯಾರ್ಥಿನಿಯರು ವೇದಿಕೆ ಮೇಲೆ ನೃತ್ಯ ಮಾಡುತ್ತಿರುವುದನ್ನು ನೋಡಬಹುದು. ಡ್ಯಾನ್ಸ್​ ಮಧ್ಯದಲ್ಲಿ ಶಿಕ್ಷಕರೊಬ್ಬರು ತಾವು ಹೋಗಿ ವಿದ್ಯಾರ್ಥಿನಿಯರೊಂದಿಗೆ ಸೇರಿ ಸ್ಟೆಪ್ಸ್​ ಹಾಕಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Amal V Nath (@amalvmusic)

ಇದನ್ನೂ ಓದಿ: ಹಳೆ ಕಾರನ್ನು ಗುಜರಿಗೆ ಹಾಕುವ ಬದಲು ಅದ್ಧೂರಿಯಾಗಿ ಅಂತ್ಯಸಂಸ್ಕಾರ ಮಾಡಿದ ವ್ಯಕ್ತಿ

ಹೌದು, ಫ್ರೆಶರ್ಸ್ ಡೇಯಂದು ಆಯೋಜಿಸಲಾದ ಕಾರ್ಯಕ್ರಮದಲ್ಲಿ ಹೆಚ್​​ಒಡಿ ಸರ್​ ಅದ್ಭುತ ಪ್ರದರ್ಶನ ನೀಡಿದ್ದು, ಇತರೆ ವಿದ್ಯಾರ್ಥಿಗಳು ಶಿಳ್ಳೆ ಹಾಗೂ ಚಪ್ಪಾಳೆ ತಟ್ಟಿ ಹುರಿದುಂಬಿಸಿದ್ದಾರೆ. ಸರ್ ಡ್ಯಾನ್ಸ್ ನೋಡಿ ಮಕ್ಕಳ ಖುಷಿಗೆ ಮಿತಿಯೇ ಇಲ್ಲದಂತಾಗಿದೆ. 27 ಸೆಕೆಂಡ್​​ಗಳ ಈ ವಿಡಿಯೋ 31 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಕಂಡಿದೆ. ಈ ವಿಡಿಯೋ ನೋಡಿದ ಬಳಿಕ ಹೆಚ್​​ಒಡಿ ಸರ್​ ಡ್ಯಾನ್ಸ್​ ಬಗ್ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಳಕೆದಾರರೊಬ್ಬರು, ‘ಕೊನೆ ಬೆಂಚಿನ ವಿದ್ಯಾರ್ಥಿಗಳು ಹೆಚ್ ಓಡಿ ಯಾಗಲು ಸಾಧ್ಯ’ ಎಂದಿದ್ದಾರೆ. ಮತ್ತೊಬ್ಬರು, ‘ ‘ಅದ್ಭುತವಾಗಿ ಡಾನ್ಸ್ ಮಾಡಿದ್ದೀರಿ’ ಎಂದು ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್