AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪ್ರತಿನಿತ್ಯ ಕಾಲೇಜಿಗೆ ಹೋಗುತ್ತಿದ್ದ ಬಸ್ಸಿನ ಡ್ರೈವರ್- ಕಂಡಕ್ಟರ್​​​ಗೆ ಪ್ರೀತಿಯ ಉಡುಗೊರೆ ನೀಡಿದ ವಿದ್ಯಾರ್ಥಿನಿಯರು

ಸೋಷಿಯಲ್ ಮೀಡಿಯಾದಲ್ಲಿ ಪ್ರತಿನಿತ್ಯ ಹಲವಾರು ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಅವುಗಳಲ್ಲಿ ಕೆಲವೊಂದು ದೃಶ್ಯಗಳು ನಮ್ಮ ಮನಸ್ಸಿಗೆ ಬಹಳ ಹತ್ತಿರವಾಗುತ್ತದೆ. ಅಂತಹದ್ದೇ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ಇನ್ನೇನೂ ಕಾಲೇಜು ಮುಗಿಯುತ್ತಿದೆ ಎನ್ನುವಷ್ಟರಲ್ಲಿ ತಾವು ಪ್ರತಿನಿತ್ಯ ಕಾಲೇಜಿಗೆ ಹೋಗುತ್ತಿದ್ದ ಬಸ್ಸಿನ ಡ್ರೈವರ್ ಮತ್ತು ಕಂಡಕ್ಟರ್ ಗೆ ವಿದ್ಯಾರ್ಥಿನಿಯರು ಪ್ರೀತಿಯ ಉಡುಗೊರೆಯನ್ನು ನೀಡಿದ್ದಾರೆ. ಈ ಹೃದಯಸ್ಪರ್ಶಿ ದೃಶ್ಯ ನೆಟ್ಟಿಗರ ಮನ ಗೆದ್ದಿದೆ.

Video: ಪ್ರತಿನಿತ್ಯ ಕಾಲೇಜಿಗೆ ಹೋಗುತ್ತಿದ್ದ ಬಸ್ಸಿನ ಡ್ರೈವರ್- ಕಂಡಕ್ಟರ್​​​ಗೆ ಪ್ರೀತಿಯ ಉಡುಗೊರೆ ನೀಡಿದ ವಿದ್ಯಾರ್ಥಿನಿಯರು
ವೈರಲ್​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Aug 06, 2024 | 12:48 PM

Share

ತಾವು ಪ್ರತಿನಿತ್ಯ ಕಾಲೇಜಿಗೆ ಹೋಗುವ ಬಸ್ಸಿನ ಚಾಲಕ ಹಾಗೂ ನಿರ್ವಾಹಕನ ಜೊತೆಗೆ ಕೆಲ ವಿದ್ಯಾರ್ಥಿಗಳಿಗೆ ಅದೇನೋ ವಿಶೇಷ ಬಾಂಧವ್ಯ. ಪ್ರತಿನಿತ್ಯ ಅದೇ ಬಸ್ಸಲ್ಲಿ ಪ್ರಯಾಣಿಸುತ್ತಾ ಅಣ್ಣ ಅಣ್ಣ ಎಂದು ಅವರೊಂದಿಗೆ ವಿದ್ಯಾರ್ಥಿಗಳು ಪ್ರೀತಿಯ ಮಾತುಗಳನ್ನಾಡುತ್ತಿರುತ್ತಾರೆ, ತರ್ಲೆ ಮಾಡುತ್ತಿರುತ್ತಾರೆ. ಬಸ್ಸಿನ ನಿರ್ವಾಹಕರು ಅಷ್ಟೇ ಏನು ಕೋಪ ಮಾಡಿಕೊಳ್ಳದೆ, ಕೆಲಸದ ಒತ್ತಡವನ್ನೆಲ್ಲಾ ಮರೆತು ವಿದ್ಯಾರ್ಥಿಗಳೊಂದಿಗೆ ಬಹಳ ಖುಷಿ ಖುಷಿಯಿಂದ ಮಾತನಾಡುತ್ತಿರುತ್ತಾರೆ. ಇದೀಗ ಅಂತಹದೇ ಸುಂದರ ಬಾಂಧವ್ಯದ ವಿಡಿಯೋವೊಂದು ವೈರಲ್ ಆಗಿದ್ದು, ಇನ್ನೇನೂ ಕಾಲೇಜು ಮುಗಿಯುತ್ತಾ ಬರುತ್ತಿರುವಾಗ ತಾವು ಪ್ರತಿನಿತ್ಯ ಕಾಲೇಜಿಗೆ ಬರುತ್ತಿದ್ದ ಬಸ್ಸಿನ ಕಂಡಕ್ಟರ್ ಹಾಗೂ ಡ್ರೈವರ್ ಗೆ ವಿದ್ಯಾರ್ಥಿನಿಯರು ಪ್ರೀತಿಯ ಉಡುಗೊರೆಯನ್ನು ನೀಡಿದ್ದಾರೆ. ಈ ಹೃದಯಸ್ಪರ್ಶಿ ದೃಶ್ಯ ನೆಟ್ಟಿಗರ ಮನ ಗೆದ್ದಿದೆ.

ಈ ಘಟನೆ ಕೇರಳದಲ್ಲಿ ನಡೆದಿದ್ದು, ಇನ್ನೇನೂ ಕಾಲೇಜು ಜೀವನ ಮುಗಿಯುತ್ತಿದೆ ಎನ್ನುವಷ್ಟರಲ್ಲಿ, ಇಷ್ಟು ವರ್ಷ ಸಮಯಕ್ಕೆ ಸರಿಯಾಗಿ ಮನೆಯಿಂದ ಕಾಲೇಜಿಗೆ ಹಾಗೂ ಕಾಲೇಜಿನಿಂದ ಮನೆಗೆ ತಲುಪಿಸುತ್ತಿದ್ದ ಬಸ್ ಡ್ರೈವರ್ ಹಾಗೂ ನಿರ್ವಾಹಕನಿಗೆ ಏನಾದರೂ ಕೊಡಬೇಕು ಎಂದು ಕಾಲೇಜು ವಿದ್ಯಾರ್ಥಿನಿಯರು ಯೋಚನೆ ಮಾಡಿ ಇಬ್ಬರಿಗೂ ಹೊಸ ಬಟ್ಟೆಯನ್ನು ಉಡುಗೊರೆಯಾಗಿ ನೀಡುತ್ತಾರೆ. ವಿದ್ಯಾರ್ಥಿನಿಯರ ಈ ಪ್ರೀತಿಗೆ ಆ ಇಬ್ಬರಿಗೂ ಕಣ್ಣು ತುಂಬಿ ಬರುತ್ತದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ: ( ಫೇಸ್​​ ಬುಕ್​​)

ಈ ಕುರಿತ ಪೋಸ್ಟ್ ಒಂದನ್ನು ಪೋಸ್ಟ್ ಮ್ಯಾನ್ ನ್ಯೂಸ್ ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್ ವಿಡಿಯೋದಲ್ಲಿ ಕಾಲೇಜು ವಿದ್ಯಾರ್ಥಿನಿಯರು ತಮ್ಮ ಪ್ರೀತಿಯ ಡ್ರೈವರ್ ಅಣ್ಣ ಮತ್ತು ಕಂಡಕ್ಟರ್ ಅಣ್ಣನಿಗೆ ಪ್ರೀತಿಯಿಂದ ಹೊಸ ಬಟ್ಟೆಯನ್ನು ಗಿಫ್ಟ್ ನೀಡುತ್ತಿರುವ ದೃಶ್ಯವನ್ನು ಕಾಣಬಹುದು. ವಿದ್ಯಾರ್ಥಿನಿಯರ ಈ ಪ್ರೀತಿಗೆ ಆ ಇಬ್ಬರ ಕಣ್ಣು ತುಂಬಿದೆ.

ಇದನ್ನೂ ಓದಿ: ರಾಜಾರೋಷವಾಗಿ ದೇವಾಲಯದ ಬಳಿ ಡ್ರಗ್ಸ್‌ ಸೇವನೆ; ಎತ್ತ ಸಾಗುತ್ತಿದೆ ನಮ್ಮ ಯುವ ಸಮಾಜ

ಎರಡು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 1.8 ಮಿಲಿಯನ್ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ‘ವಿದ್ಯಾರ್ಥಿನಿಯರು ತೋರಿಸಿರುವ ಪ್ರೀತಿ ಕರುಣೆ ಇದನ್ನು ಕಂಡು ಅವರ ಕಣ್ಣಲ್ಲಿ ಆನಂದ ಉಕ್ಕಿ ಹರಿಯುತ್ತಿದೆ ಇದೆ ಅಲ್ಲವಾ, ನಾನು ಈ ದೃಶ್ಯವನ್ನು ಕಂಡು ಭಾವುಕನಾದೆ’ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ‘ಈ ವಿದ್ಯಾರ್ಥಿನಿಯರ ಪ್ರೀತಿ ಸಂಸ್ಕಾರಕ್ಕೆ ನನ್ನದೊಂದು ನಮನ’ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು