ರಸ್ತೆ ಅಪಘಾತಗಳು ಹಾಗೂ ರಸ್ತೆ ಅಪಘಾತಗಳಿಂದ ಉಂಟಾಗುವ ಸಾವು ನೋವುಗಳನ್ನು ತಡೆಯಲು ಕುಡಿದು ವಾಹನ ಚಲಾಯಿಸುವಂತಿಲ್ಲ, ವಾಹನ ಚಲಾಯಿಸುವಾಗ ಸೀಟ್ ಬೆಲ್ಟ್ ಹಾಕಬೇಕು, ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಹಾಕಬೇಕು ಎಂಬೆಲ್ಲಾ ಕಟ್ಟುನಿಟ್ಟಿನ ನಿಯಮಗಳನ್ನು ಸರ್ಕಾರ ಜಾರಿಗೊಳಿಸಿವೆ. ಹೀಗಿದ್ದರೂ ಈ ರೂಲ್ಸ್‌ಗಳನ್ನೆಲ್ಲಾ ಗಾಳಿಗೆ ತೂರಿ ಅಡ್ಡಾದಿಡ್ಡಿ ವಾಹನ ಚಲಾಯಿಸುವ ಅದೆಷ್ಟೋ ಜನರಿದ್ದಾರೆ. ಇದೇ ರೀತಿ ಇಲ್ಲೊಬ್ಬ ವ್ಯಕ್ತಿ ಕೂಡಾ ಕಂಠಪೂರ್ತಿ ಕುಡಿದು ರಸ್ತೆಯಲ್ಲಿ ಎರ್ರಾಬಿರ್ರಿ ಕಾರು ಚಲಾಯಿಸಿ ಕೊನೆಗೆ ಹೋಗಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಈ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದ್ದು, ಪಾನಮತ್ತ ವ್ಯಕ್ತಿಯೊಬ್ಬ ರಸ್ತೆಯಲ್ಲಿ ಎರ್ರಾಬಿರ್ರಿ ಕಾರು ಚಲಾಯಿಸುತ್ತಾ ಹೋಗಿ ಬೈಕ್ ಸವಾರನಿಗೆ ಗುದ್ದಿದ್ದು ಮಾತ್ರವಲ್ಲದೆ, ಸೀದಾ ಹೋಗಿ ಕರೆಂಟ್ ಕಂಬವೊಂದಕ್ಕೆ ಡಿಕ್ಕಿ ಹೊಡೆದಿದ್ದಾನೆ. ಕಾರು ಡಿಕ್ಕಿ ಹೊಡೆದ ಪರಿಣಾಮ ಕರೆಂಟ್ ಕಂಬ ನೆಲಕ್ಕುರುಳಿದೆ.
gharkekalesh ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಎಣ್ಣೆ ಏಟಲ್ಲಿ ವ್ಯಕ್ತಿಯೊಬ್ಬ ರಸ್ತೆಯಲ್ಲಿ ಎರ್ರಾಬಿರ್ರಿ ಕಾರು ಚಲಾಯಿಸುತ್ತಾ ಹೋಗುತ್ತಿರುವ ಭಯಾನಕ ದೃಶ್ಯವನ್ನು ಕಾಣಬಹುದು. ಹೀಗೆ ಅಡ್ಡಾದಿಡ್ಡಿ ಕಾರ್ ಓಡಿಸಿ ಬೈಕ್ ಸವಾರನೊಬ್ಬನಿಗೆ ಗುದ್ದಿ ನಂತರ ಸೀದಾ ಹೋಗಿ ಆ ಕಾರ್ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ: ಗುಡ್ ಕಿಸ್ಸರ್… ಉಬರ್ ಡ್ರೈವರ್‌ಗೆ ವಿಚಿತ್ರ ಕಾಂಪ್ಲಿಮೆಂಟ್ ನೀಡಿದ ಪ್ಯಾಸೆಂಜರ್
ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ವಿಡಿಯೋ 1.3 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಆ ಡ್ರೈವರ್ ತನ್ನ ಜೀವ ಮಾತ್ರವಲ್ಲದೆ ಇತರರ ಜೀವದ ಜೊತೆಗೂ ಆಟವಾಡುತ್ತಿದ್ದಾನೆʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಹೀಗೆ ಕುಡಿದು ವಾಹನ ಚಲಾಯಿಸಿ ಇನ್ನೊಬ್ಬರ ಜೀವಕ್ಕೆ ಅಪಾಯ ತಂದೊಡ್ಡುವವರ ಲೈಸನ್ಸ್ ರದ್ದು ಮಾಡಬೇಕುʼ ಎಂದು ಕಿಡಿಕಾರಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ