AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಗಂಡ ದೇವಸ್ಥಾನಕ್ಕೆ ಮಾತ್ರ ಹೋಗ್ತಾನೆ, ಆತನಿಗೆ ಲೈಂಗಿಕತೆಯಲ್ಲಿ ಆಸಕ್ತಿ ಇಲ್ಲ; ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಮಹಿಳೆ

ಕೇರಳದಲ್ಲಿ, ಮಹಿಳೆಯೊಬ್ಬರು ಪತಿ ತನ್ನೊಂದಿಗೆ ದೈಹಿಕ ಸಂಬಂಧ ಹೊಂದಿಲ್ಲಎಂದು ಹೇಳಿ ವಿಚ್ಛೇದನ ಪ್ರಕರಣ ದಾಖಲಿಸಿದ್ದರು. ತನ್ನ ಪತಿ ದಿನವಿಡೀ ಪ್ರಾರ್ಥನೆ ಮತ್ತು ಪೂಜೆಯಲ್ಲಿ ನಿರತನಾಗಿರುತ್ತಾನೆ, ಯಾವಾಗ ನೋಡಿದ್ರೂ ದೇವಸ್ಥಾನಕ್ಕೆ ಮಾತ್ರ ಹೋಗುತ್ತಾನೆ, ನನಗೂ ಕೂಡಾ ಆಧ್ಯಾತ್ಮಿಕತೆಯತ್ತ ಒಲವನ್ನು ತೋರು ಎಂದು ಒತ್ತಾಯಿಸುತ್ತಿದ್ದ ಎಂದು ಮಹಿಳೆ ಆರೋಪಿಸಿದ್ದರು. ಇದೀಗ ಹೈ ಕೋರ್ಟ್‌ ವಿಚ್ಛೇದನ ಮಂಜೂರು ಮಾಡಿ, ಈ ಕೇಸ್‌ಗೆ ಸಂಬಂಧಪಟ್ಟಂತೆ ವಿಶೇಷವಾದ ತೀರ್ಪನ್ನುಕೂಡ ನೀಡಿದೆ.

ನನ್ನ ಗಂಡ ದೇವಸ್ಥಾನಕ್ಕೆ ಮಾತ್ರ ಹೋಗ್ತಾನೆ, ಆತನಿಗೆ ಲೈಂಗಿಕತೆಯಲ್ಲಿ ಆಸಕ್ತಿ ಇಲ್ಲ; ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಮಹಿಳೆ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on:Apr 02, 2025 | 10:21 AM

Share

ಕೇರಳ, ಏ. 01: ಕೌಟುಂಬಿಕ ಕಲಹ ಸೇರಿದಂತೆ ಹಲವಾರು ಕಾರಣಗಳಿಗೆ ದಂಪತಿಗಳು (Couples) ಕೋರ್ಟ್‌ ಮೇಟ್ಟಿಲೇರುವ ಸುದ್ದಿಗಳು ಈಗಂತೂ ಪ್ರತಿನಿತ್ಯ ಕೇಳಿ ಬರುತ್ತಲೇ ಇರುತ್ತವೆ. ಇತ್ತೀಚಿಗೆ ಅಂತಹದ್ದೇ ಪ್ರಕರಣವೊಂದು ನಡೆದಿದ್ದು, ಕೇರಳ (Kerala) ಮೂಲದ ಮಹಿಳೆಯೊಬ್ಬರು ತನ್ನ ಗಂಡನಿಗೆ (husband) ದೈಹಿಕ ಸಂಪರ್ಕದಲ್ಲಿ (physical relationship) ಆಸಕ್ತಿಯೇ ಇಲ್ಲ ಎಂದು ಆರೋಪಿಸಿ ಕೇಸ್‌ ದಾಖಲಿಸಿದ್ದರು. ಆತ ಹೆಚ್ಚು ಹೊತ್ತು ಪೂಜೆ ಪುನಸ್ಕಾರದಲ್ಲಿಯೇ ನಿರತನಾಗಿರುತ್ತಾನೆ, ಯಾವಾಗ ನೋಡಿದ್ರೂ ದೇವಸ್ಥಾನ, ಮಂದಿರ ಅಂತ ಸುತ್ತುತ್ತಿರುತ್ತಾರೆ. ಅಷ್ಟೇ ಅಲ್ಲದೆ ಆಧ್ಯಾತ್ಮಿಕತೆಯನ್ನು ಮೈಗೂಡಿಸಿಕೋ ಎಂದು ನನಗೂ ಒತ್ತಾಯಿಸುತ್ತಾನೆ ಎಂದು ಮಹಿಳೆ ತನ್ನ ಗಂಡನ ವಿರುದ್ಧ ಆರೋಪ ಮಾಡಿದ್ದರು. ಇದೀಗ ಕೇರಳದ ಹೈ ಕೋರ್ಟ್‌ (high court) ವಿಚ್ಛೇದನ (divorce) ಮಂಜೂರು ಮಾಡಿ, ಈ ವಿಶಿಷ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹತ್ವದ ತೀರ್ಪನ್ನು ನೀಡಿದೆ.

ನ್ಯಾಯಾಲಯ ಕೊಟ್ಟ ತೀರ್ಪೇನು?

ಬಾರ್ ಅಂಡ್ ಬೆಂಚ್’ ವರದಿಯ ಪ್ರಕಾರ, ನ್ಯಾಯಮೂರ್ತಿಗಳಾದ ದೇವನ್ ರಾಮಚಂದ್ರನ್ ಮತ್ತು ಎಂ.ಬಿ. ಸ್ನೇಹಲತಾ ಅವರ ಪೀಠವು ಈ ಪ್ರಕರಣದ ಕುರಿತಾದ ತೀರ್ಪಿನಲ್ಲಿ, ‘ಮದುವೆಯು ಒಬ್ಬ ವ್ಯಕ್ತಿಗೆ ತನ್ನ ಸಂಗಾತಿಯ ವೈಯಕ್ತಿಕ ನಂಬಿಕೆಗಳನ್ನು, ಅದು ಆಧ್ಯಾತ್ಮಿಕವಾಗಿರಲಿ ಅಥವಾ ಬೇರೆಯದೇ ಆಗಿರಲಿ ಅದನ್ನು ನಿರ್ಧರಿಸುವ ಹಕ್ಕನ್ನು ನೀಡುವುದಿಲ್ಲ’ ಎಂದು ಹೇಳಿದೆ. ಜೊತೆಗೆ ಲೈಂಗಿಕತೆಯ ಬಗ್ಗೆ ನಿರಾಸಕ್ತಿ, ಹೆಂಡತಿಯನ್ನು ಆಧ್ಯಾತ್ಮಿಕ ಜೀವನವನ್ನು ಅಳವಡಿಸಿಕೊಳ್ಳುವಂತೆ ಒತ್ತಾಯಿಸುವುದು ಮತ್ತು ಅವಳಿಗೆ ಭಾವನಾತ್ಮಕವಾಗಿ ಕಿರುಕುಳ ನೀಡುವುದು ಮಾನಸಿಕ ಕ್ರೌರ್ಯಕ್ಕೆ ಸಮಾನ ಎಂದು ಹೇಳಿದೆ.

ಏನಿದು ಪ್ರಕರಣ?

2016 ರಲ್ಲಿ ಮದುವೆಯಾದ ಈ ಜೋಡಿಯ ನಡುವೆ ಕೆಲ ಸಮಯದ ಬಳಿಕ ಮನಸ್ತಾಪಗಳು ತಲೆ ದೂರಿವೆ. ಗಂಡನ ಅತಿಯಾದ ಧಾರ್ಮಿಕ ಆಚರಣೆಗಳಿಂದಾಗಿ ಇದೆಲ್ಲವೂ ಸಂಭವಿಸಿದೆ ಎಂದು ಆ ಮಹಿಳೆ ಹೇಳಿಕೊಂಡಿದ್ದಾರೆ. ತನ್ನ ಪತಿಗೆ ಲೈಂಗಿಕ ಕ್ರಿಯೆಯಲ್ಲಿ ಅಥವಾ ಮಕ್ಕಳನ್ನು ಹೊಂದುವಲ್ಲಿ ಯಾವುದೇ ಆಸಕ್ತಿ ಇಲ್ಲ. ಕಚೇರಿಯಿಂದ ಹಿಂತಿರುಗಿದ ನಂತರ ಆತ ದೇವಸ್ಥಾನ, ಮಂದಿರಗಳಿಗೆ ಮಾತ್ರ ಭೇಟಿ ನೀಡುತ್ತಿದ್ದ. ಜೊತೆಗೆ ನನಗೂ ಆಧ್ಯಾತ್ಮಿಕತೆಯತ್ತ ಒಲವನ್ನು ತೋರಿಸುವಂತೆ ಒತ್ತಾಯಿಸುತ್ತಿದ್ದನು ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ
Image
ಭಾರತದ ಮೊದಲ ಕಾಫಿ ತೋಟ ತಾಣದ ಕಥೆಯನ್ನು ಹಂಚಿಕೊಂಡ ಆನಂದ್‌ ಮಹೀಂದ್ರಾ
Image
ಕಾಲೇಜು ಪ್ರೊಫೆಸರ್‌ ಎನರ್ಜಿಗೆ ಫಿದಾ ಆದ ವಿದ್ಯಾರ್ಥಿಗಳು
Image
ಬೆಂಗಳೂರಿನಲ್ಲಿ ಆಟೋ ಬುಕ್ ಮಾಡುವ ಟಿಪ್ಸ್ ನೀಡಬೇಕು
Image
ಒಂದೇ ಮಂಟಪದಲ್ಲಿ, ಒಂದೇ ಸಮಯದಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾದ ವ್ಯಕ್ತಿ

ಮಹಿಳೆ ಮೊದಲು 2019 ರಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು ಆದರೆ ನಂತರ ಅವರ ಪತಿ ತನ್ನ ನಡವಳಿಕೆಯನ್ನು ಬದಲಾಯಿಸುವುದಾಗಿ ಭರವಸೆ ನೀಡಿದ ನಂತರ ಅರ್ಜಿಯನ್ನು ಹಿಂತೆಗೆದುಕೊಂಡರು. ಆದರೆ ಗಂಡನ ನಡವಳಿಕೆಯಲ್ಲಿ ಯಾವುದೇ ಬದಲಾವಣೆ ಕಂಡು ಬಾರದಿದ್ದನ್ನು ಕಂಡು ಆ ಮಹಿಳೆ 2022 ರಲ್ಲಿ ಮತ್ತೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದರು. ಮತ್ತು ತನ್ನ ಗಂಡನ ನಡವಳಿಕೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ಹೇಳಿಕೊಂಡರು. ಈ ದೂರಿನ ಆಧಾರದ ಮೇಲೆ ಕೌಟುಂಬಿಕ ನ್ಯಾಯಾಲಯವು ವಿಚ್ಛೇದನ ಮಂಜೂರು ಮಾಡಿತು.

ಇದನ್ನೂ ಓದಿ: ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿ ನಿಧನ?

ಇದಾದ ಬಳಿಕ ತನ್ನ ಮೇಲಿನ ಆರೋಪವನ್ನು ನಿರಾಕರಿಸಿ, ʼಆಕೆ ನನ್ನನ್ನು ತಪ್ಪಾಗಿ ಅರ್ಥೈಸಿಕೊಳ್ಳುತ್ತಿದ್ದಾಳೆʼ ಎಂದು ಪತಿ ಕೇರಳದ ಹೈ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾನೆ. ಇದೀಗ ಎರಡೂ ಕಡೆಯವರ ವಾದ ಆಲಿಸಿದ ನಂತರ, ನ್ಯಾಯಾಲಯವು ಮಹಿಳೆಯ ವಿಚ್ಛೇದನ ಆದೇಶವನ್ನು ಎತ್ತಿಹಿಡಿದಿದು, ಕುಟುಂಬ ಜೀವನದಲ್ಲಿ ಗಂಡನಿಗಿರುವ ನಿರಾಸಕ್ತಿಯು ಅವನು ತನ್ನ ವೈವಾಹಿಕ ಜೀವನದ ಕರ್ತವ್ಯಗಳನ್ನು ಪೂರೈಸುವಲ್ಲಿ ವಿಫಲನಾಗಿರುವುದನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:20 am, Wed, 2 April 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ