ಅಂಗನವಾಡಿಯಲ್ಲಿ ಬಿರಿಯಾನಿ, ಚಿಕನ್‌ ಫ್ರೈ ಕೊಡ್ಬೇಕೆಂದು ಮನವಿ ಮಾಡಿದ ಪುಟ್ಟ ಪೋರ; ಇದಕ್ಕೆ ಸಚಿವರ ಪ್ರತಿಕ್ರಿಯೆ ಹೇಗಿತ್ತು ನೋಡಿ…

ಪುಟಾಣಿ ಮಕ್ಕಳು ನನ್ಗೆ ಅದು ಬೇಕು, ನನ್ಗೆ ಇದು ಬೇಕು ಅಂತೆಲ್ಲಾ ತಮ್ಮ ಸಣ್ಣಪುಟ್ಟ ಆಸೆಗಳನ್ನು ಹೇಳಿಕೊಳ್ಳುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ಕೇರಳದ ಬಾಲಕ ಉಪ್ಪಿಟ್ಟು ಬೇಡ ಅಂಗನವಾಡಿಯಲ್ಲಿ ನಮ್ಗೆ ಬಿರಿಯಾನಿ ಮತ್ತು ಚಿಕನ್‌ ಫ್ರೈ ಕೊಡ್ಬೇಕು ಎಂದು ಕೇಳಿಕೊಂಡಿದ್ದಾನೆ. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್‌ ಆಗಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಕೇರಳದ ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ವೀಣಾ ಜಾರ್ಜ್‌ ಪುಟ್ಟ ಪೋರನಿಗಾಗಿ ಅಂಗನವಾಡಿಯ ಮೆನುವನ್ನು ಬದಲಾಯಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಅಂಗನವಾಡಿಯಲ್ಲಿ ಬಿರಿಯಾನಿ, ಚಿಕನ್‌ ಫ್ರೈ ಕೊಡ್ಬೇಕೆಂದು ಮನವಿ ಮಾಡಿದ ಪುಟ್ಟ ಪೋರ; ಇದಕ್ಕೆ ಸಚಿವರ ಪ್ರತಿಕ್ರಿಯೆ ಹೇಗಿತ್ತು ನೋಡಿ…
ವೈರಲ್​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:Feb 04, 2025 | 5:38 PM

ಕೆಲ ಮಂತ್ರಿಗಳು, ರಾಜಕಾರಣಿಗಳು ವರ್ಷಗಳಾದ್ರೂ ಜನರ ಸಮಸ್ಯೆಯನ್ನು ಪರಿಹರಿಸಲು, ಜನರ ಬೇಡಿಕೆಗಳನ್ನು ಈಡೇರಿಸಲು ಹಿಂದೆ ಮುಂದೆ ನೋಡುತ್ತಾರೆ. ಅಂತಹವರ ಮಧ್ಯೆ ಇಲ್ಲೊಬ್ರು ಸಚಿವೆ ಪುಟ್ಟ ಪೋರನೊಬ್ಬನ ಪುಟಾಣಿ ಆಸೆಯನ್ನು ನೆರವೇರಿಸುವ ಭರವಸೆಯನ್ನು ನೀಡಿದ್ದಾರೆ. ಹೌದು ಕೇರಳ ಮೂಲದ ಬಾಲಕನೊಬ್ಬ ಉಪ್ಪಿಟ್ಟು ಬೇಡ, ಅಂಗನವಾಡಿಯಲ್ಲಿ ನಮ್ಗೆ ಚಿಕನ್‌ ಫ್ರೈ ಮತ್ತು ಬಿರಿಯಾನಿಯೇ ಕೊಡ್ಬೇಕೆಂದು ಕೇಳಿಕೊಂಡಿದ್ದಾನೆ. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್‌ ಆಗಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಕೇರಳದ ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ವೀಣಾ ಜಾರ್ಜ್‌ ಪುಟ್ಟ ಪೋರನಿಗಾಗಿ ಅಂಗನವಾಡಿಯ ಮೆನುವನ್ನು ಮಾರ್ಪಾಡು ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಕೇರಳದ ಶಂಕು (ರಿಜುಲ್‌ ಎಸ್.‌ ಸುಂದರ್‌) ಎಂಬ ಪುಟ್ಟ ಪೋರ ಉಪ್ಪಿಟ್ಟು ಬೇಡ ಅಂಗನವಾಡಿಯಲ್ಲಿ ಬಿರಿಯಾನಿ ಮತ್ತು ಚಿಕನ್‌ ಫ್ರೈ ಕೊಡ್ಬೇಕು ಎಂದು ತಾಯಿಯ ಬಳಿ ಹೇಳಿದ್ದಾನೆ. ಈತನ ಮುದ್ದಾದ ಬೇಡಿಕೆಯ ವಿಡಿಯೋವನ್ನು ಆತನ ತಾಯಿ ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್‌ ಮಾಡಿಕೊಂಡಿದ್ದರು. ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಇದಕ್ಕೆ ಪ್ರತಿಕ್ರಿಯಿಸಿದ ಕೇರಳದ ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ವೀಣಾ ಜಾರ್ಜ್‌ ಪುಟ್ಟ ಬಾಲಕನ ಬೇಡಿಕೆಯನ್ನು ಪರಿಗಣನೆಗೆ ತೆಗೆದುಕೊಂಡು, ಶಂಕುವಿಗಾಗಿ ಅಂಗನವಾಡಿಯ ಮೆನುವನ್ನು ಮಾರ್ಪಾಡು ಮಾಡಲಾಗುವುದು ಎಂದು ಭರವಸೆಯನ್ನು ನೀಡಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ (ಕೃಪೆ: Veena George)

ಈ ಕುರಿತ ವಿಡಿಯೋವನ್ನು ವೀಣಾ ಜಾರ್ಜ್‌ (Veena George) ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ಶುಂಕುವಿನ ಮನವಿಯನ್ನು ಪರಿಗಣಿಸಿ, ಅಂಗನವಾಡಿ ಮೆನು ಮಾರ್ಪಾಡು ಕುರಿತು ಚರ್ಚಿಸಲಾಗುವುದು” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ಕೇರಳ ಸರ್ಕಾರವು ಅಂಗನವಾಡಿಗಳ ಮೂಲಕ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಉಪ್ಪಿಟ್ಟು ಜೊತೆಗೆ ಮಕ್ಕಳಿಗೆ ಸರಿಯಾದ ಪೌಷ್ಠಿಕಾಂಶ ದೊರೆಯುವುದನ್ನು ಖಚಿತಪಡಿಸಿಕೊಳ್ಳಲು ವಿವಿಧ ಊಟದ ಆಯ್ಕೆಗಳನ್ನು ನೀಡಲಾಗುತ್ತಿದೆ. ಪ್ರಸ್ತುತ ಮೊಟ್ಟೆ ಮತ್ತು ಹಾಲು ಒದಗಿಸುವ ಯೋಜನೆ ಯಶಸ್ವಿಯಾಗಿದೆ. ಇನ್ನೂ ಶಂಕುವಿನ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ಅಂಗನವಾಡಿಯ ಮೆನುವನ್ನು ಮಾರ್ಪಾಡು ಮಾಡುವ ಬಗ್ಗೆ ಚರ್ಚಿಸಲಾಗುವುದು ಎಂದು ವೀಣಾ ಜಾರ್ಜ್‌ ಹೇಳಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಮನೆಯಲ್ಲಿ ಹಾಲು ಮಿಕ್ಕರೆ ಅದನ್ನು ವೇಸ್ಟ್‌ ಮಾಡುವ ಬದಲು ಹೀಗೆ ಉಪಯೋಗಿಸಿ

ಒಂದು ದಿನದ ಹಿಂದೆ ಶೇರ್‌ ಮಾಡಲಾದ ಈ ವಿಡಿಯೋ 4.7 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಮುಗ್ಧ ಮಗುವಿನ ಬೇಡಿಕೆಯನ್ನು ಪರಿಗಣಿಸಿದ ನಿಮಗೆ ಧನ್ಯವಾದಗಳುʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼನಾವು ಅಂಗನವಾಡಿಯಲ್ಲಿದ್ದಾಗ ಈ ಸಚಿವೆ ಇರಬೇಕಿತ್ತುʼ ಎಂಬ ತಮಾಷೆಯ ಕಾಮೆಂಟ್‌ ಬರೆದುಕೊಂಡಿದ್ದಾರೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:38 pm, Tue, 4 February 25

ಸೆಲೆಬ್ರಿಟಿಗಳಿಲ್ಲದೆ ಸರಳವಾಗಿ ಮದುವೆಯಾದ ಬಿಲಿಯನೇರ್ ಮಗ ಜೀತ್ ಅದಾನಿ
ಸೆಲೆಬ್ರಿಟಿಗಳಿಲ್ಲದೆ ಸರಳವಾಗಿ ಮದುವೆಯಾದ ಬಿಲಿಯನೇರ್ ಮಗ ಜೀತ್ ಅದಾನಿ
ದೆಹಲಿ ನಾಯಕರ ಭೇಟಿ ಬಳಿಕ ಶಾಸಕ ಯತ್ನಾಳ್​ ಹೇಳಿದ್ದಿಷ್ಟು
ದೆಹಲಿ ನಾಯಕರ ಭೇಟಿ ಬಳಿಕ ಶಾಸಕ ಯತ್ನಾಳ್​ ಹೇಳಿದ್ದಿಷ್ಟು
ರಕ್ಷಿತಾರನ್ನು ಮದುವೆಯಾದಾಗ ಅಂಬರೀಶ್ ಹೇಳಿದ್ದನ್ನು ಮೆಲಕು ಹಾಕಿದ ಪ್ರೇಮ್
ರಕ್ಷಿತಾರನ್ನು ಮದುವೆಯಾದಾಗ ಅಂಬರೀಶ್ ಹೇಳಿದ್ದನ್ನು ಮೆಲಕು ಹಾಕಿದ ಪ್ರೇಮ್
ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಜನ ಸಾವು
ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಜನ ಸಾವು
ಅಪ್ಪನನ್ನು ಇಷ್ಟಪಡುವ ಕಾರಣಕ್ಕೆ ಮಗನನ್ನೂ ಇಷ್ಟಪಡುವ ಅಗತ್ಯವಿಲ್ಲ: ನಿರಾಣಿ
ಅಪ್ಪನನ್ನು ಇಷ್ಟಪಡುವ ಕಾರಣಕ್ಕೆ ಮಗನನ್ನೂ ಇಷ್ಟಪಡುವ ಅಗತ್ಯವಿಲ್ಲ: ನಿರಾಣಿ
ಆಯತಪ್ಪಿ ಬಿದ್ದಿದ್ದ ಬೈಕ್​ ಸವಾರ: ಗಾಯಾಳುಗೆ ನೆರವಾದ ಸಂತೋಷ್ ಲಾಡ್
ಆಯತಪ್ಪಿ ಬಿದ್ದಿದ್ದ ಬೈಕ್​ ಸವಾರ: ಗಾಯಾಳುಗೆ ನೆರವಾದ ಸಂತೋಷ್ ಲಾಡ್
ವಿರೋಧಪಕ್ಷಗಳ ಟೀಕೆಗೆ ಗುರಿಯಾಗದ ಬಜೆಟ್ ಮಂಡನೆ ಮುಖ್ಯಮಂತ್ರಿಗೆ ಸಾಧ್ಯವೇ?
ವಿರೋಧಪಕ್ಷಗಳ ಟೀಕೆಗೆ ಗುರಿಯಾಗದ ಬಜೆಟ್ ಮಂಡನೆ ಮುಖ್ಯಮಂತ್ರಿಗೆ ಸಾಧ್ಯವೇ?
ದೇವೇಗೌಡ ತಮ್ಮ ಮಕ್ಕಳ ಬಗ್ಗೆ ಮಾತಾಡಿದ್ದೆಲ್ಲ ಗೊತ್ತಿದೆ: ಚಲುವರಾಯಸ್ಚಾಮಿ
ದೇವೇಗೌಡ ತಮ್ಮ ಮಕ್ಕಳ ಬಗ್ಗೆ ಮಾತಾಡಿದ್ದೆಲ್ಲ ಗೊತ್ತಿದೆ: ಚಲುವರಾಯಸ್ಚಾಮಿ
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ