AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಹೆರಿಗೆಯಾದ 17 ದಿನಕ್ಕೆ ಯುಪಿಎಸ್‌ಸಿ ಪರೀಕ್ಷೆ ಬರೆದು ಐಎಎಸ್ ಅಧಿಕಾರಿಯಾದ ಕೇರಳದ ಮಹಿಳೆ

ಹೆಣ್ಣು ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯ ಎನ್ನುವುದಕ್ಕೆ ಈ ಮಹಿಳೆಯೇ ಸಾಕ್ಷಿ. ಹೌದು, ಕೇರಳದ ಆಲಪ್ಪುಳ ಜಿಲ್ಲೆಯ ಮಾಳವಿಕಾಗೆ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಹೆರಿಗೆಯಾಗಿತ್ತು. ಆದರೆ ಹೆರಿಗೆಯಾದ ಕೇವಲ 17 ದಿನಗಳ ಬಳಿಕ ಯುಪಿಎಸ್‌ಸಿ ಪರೀಕ್ಷೆಗೆ ಹಾಜರಾಗಿದ್ದು ಎಲ್ಲರಿಗೂ ಮಾದರಿಯಾಗಿದ್ದಾರೆ. ಈ ಕುರಿತಾದ ಇನ್ನಷ್ಟು ಮಾಹಿತಿ ಇಲ್ಲಿದೆ.

Viral: ಹೆರಿಗೆಯಾದ 17 ದಿನಕ್ಕೆ ಯುಪಿಎಸ್‌ಸಿ ಪರೀಕ್ಷೆ ಬರೆದು ಐಎಎಸ್ ಅಧಿಕಾರಿಯಾದ ಕೇರಳದ ಮಹಿಳೆ
ಮಾಳವಿಕಾ ಜಿ ನಾಯರ್Image Credit source: Google
ಸಾಯಿನಂದಾ
|

Updated on:Sep 25, 2025 | 4:23 PM

Share

ಕೇರಳ, ಸೆಪ್ಟೆಂಬರ್ 25: ತಾಯ್ತತನ ಹೆಣ್ಣಿನ ಜೀವನದಲ್ಲಿ ಬಹುಮುಖ್ಯ ಭಾಗ. ಹೆಣ್ಣೊಬ್ಬಳು ಮಗುವಿಗ ಜನ್ಮ ನೀಡಿದ ಬಳಿಕ ಆಕೆಗೆ ಆರೈಕೆ ಹಾಗೂ ಕಾಳಜಿ ಅತೀ ಮುಖ್ಯ. ಈ ಸಮಯದಲ್ಲಿ ಹೆಣ್ಣು ಹೆಚ್ಚು ಒತ್ತಡ ತೆಗೆದುಕೊಳ್ಳುವಂತಿಲ್ಲ. ಆದರೆ ಮಹಿಳೆಯೊಬ್ಬರು ತನ್ನ ಬಾಣಂತನದ ಸಮಯದಲ್ಲೂ ಎಲ್ಲರೂ ಅಚ್ಚರಿ ಪಡುವಂತೆ ಮಾಡಿದ್ದಾರೆ. ವಿಶ್ರಾಂತಿ ಪಡೆಯಬೇಕಾದ ಸಮಯದಲ್ಲಿ ಯಾವುದಕ್ಕೂ ಹಿಂಜರಿಯದೇಯುಪಿಎಸ್‌ಸಿ ಪರೀಕ್ಷೆಗೆ ಹಾಜರಾಗಿ, ಪರೀಕ್ಷೆಯಲ್ಲಿ ಪಾಸ್‌ ಆಗಿದ್ದಾರೆ. ಹೌದು, ಕೇರಳದ ಆಲಪ್ಪುಳ ಜಿಲ್ಲೆಯ (Alappuzha district of Kerala) ಮಾಳವಿಕಾ ಜಿ ನಾಯರ್ (Malavika G Nayar) ಹೆರಿಗೆಯಾದ 17 ದಿನಕ್ಕೆ ಯುಪಿಎಸ್‌ಸಿ ಪರೀಕ್ಷೆ ಬರೆದಿದ್ದು ತೇರ್ಗಡೆ ಹೊಂದಿರುವ ಛಲಗಾತಿ ಮಹಿಳೆ.

ಡೆಪ್ಯೂಟಿ ಕಮಿಷನರ್ ಶ್ರೇಣಿಯ ಅಧಿಕಾರಿಯಾಗಿರುವ ಮಾಳವಿಕಾ ಜಿ ನಾಯರ್ ಮಗುವಿನ ಆರೈಕೆಯ ರಜೆಯಲ್ಲಿದ್ದ ವೇಳೆ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡಿದ್ದಾರೆ. ಛಲ ಬಿಡದೇ ಹೆರಿಗೆಯಾದ 17 ದಿನಕ್ಕೆ ಯುಪಿಎಸ್‌ಸಿ ಪರೀಕ್ಷೆ ಬರೆದು ಎಲ್ಲರೂ ತಿರುಗಿ ನೋಡುವಂತೆ ಮಾಡಿದ್ದಾರೆ. ತಮ್ಮ ಆರನೇ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದು, 45 ನೇ ರ‍್ಯಾಂಕ್ ಪಡೆದು ಐಎಎಸ್ ಅಧಿಕಾರಿಯಾಗಿ ಎಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ಮಾಳವಿಕಾ ಜಿ ನಾಯರ್ ಪ್ರಸ್ತುತ ಭಾರತೀಯ ಕಂದಾಯ ಸೇವೆ (IRS) ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ:Kaliachak Village: ಇದು ಇಂಗ್ಲಿಷ್ ಟೀಚರ್​​ ವಿಲೇಜ್​​; ಇಲ್ಲಿ ಪ್ರತಿಯೊಂದು ಮನೆಯಲ್ಲೂ ಒಬ್ಬ ಆಂಗ್ಲ ಶಿಕ್ಷಕರಿದ್ದಾರೆ!

ಇದನ್ನೂ ಓದಿ
Image
ಭಾರತೀಯನ ಜೊತೆ ಮದ್ವೆ, ನನ್ನ ಜೀವನವೇ ಬದಲಾಗಿ ಹೋಯ್ತು ಎಂದ ವಿದೇಶಿ ಮಹಿಳೆ
Image
ಈ ಹಳ್ಳಿಯ ಪ್ರತಿಯೊಂದು ಮನೆಯಲ್ಲೂ ಒಬ್ಬ ಇಂಗ್ಲಿಷ್ ಶಿಕ್ಷಕರಿದ್ದಾರೆ!
Image
ಹೆತ್ತ ತಂದೆ ತಾಯಿಯನ್ನು ಅರಸುತ್ತಾ ಲಂಡನ್‌ನಿಂದ ಭಾರತಕ್ಕೆ ಬಂದ ಮಗಳು
Image
ಮಗುವನ್ನು ಮಡಿಲಲ್ಲಿ ಕೂರಿಸಿ ಆಟೋ ಓಡಿಸಿ ಜೀವನ ಸಾಗಿಸುತ್ತಿರುವ ಮಹಾತಾಯಿ

ಈ ಬಗ್ಗೆ ಖುಷಿ ವ್ಯಕ್ತಪಡಿಸಿರುವ ಮಾಳವಿಕಾ ಜಿ ನಾಯರ್‌ ನನ್ನ ಹೆಸರು ರ‍್ಯಾಂಕ್ ಪಟ್ಟಿಯಲ್ಲಿ ಕಾಣಿಸಿಕೊಂಡಿರುವುದು ಸಂತಸ ತಂದಿದೆ. ಆದರೆ ನಾನು ಐಎಎಸ್‌ಗೆ ಪ್ರವೇಶಿಸಲು ಇದು ನನ್ನ ಕೊನೆಯ ಪ್ರಯತ್ನವಾಗಿತ್ತು. ದೇವರ ಆಶಿರ್ವಾದದಿಂದ ಈ ಪರೀಕ್ಷೆಯಲ್ಲಿ ಉತ್ತೀರ್ಣರಾದದ್ದು. ಈ ವರ್ಷ ಪ್ರಿಲಿಮ್ಸ್ ಪರೀಕ್ಷೆ ಬರೆಯುವಾಗ ನಾನು ಗರ್ಭಿಣಿಯಾಗಿದೆ. ಆ ಬಳಿಕ, ಆರೋಗ್ಯದ ವಿಷಯದಲ್ಲಿ ಬಹಳಷ್ಟು ಸವಾಲುಗಳು ಎದುರಾಗಿದ್ದವು. ಸೆಪ್ಟೆಂಬರ್ 3 ರಂದು ಮಗ ಹುಟ್ಟಿದ, ಆದಾದ ಬಳಿಕ ನಾನು ಸೆಪ್ಟೆಂಬರ್ 20 ರಂದು ಮುಖ್ಯ ಪರೀಕ್ಷೆಗೆ ಹಾಜರಾದೆ. ನನ್ನ ಕುಟುಂಬವು ನನಗೆ ನೀಡಿದ ಬೆಂಬಲದಿಂದಾಗಿ ನಾನು ಪರೀಕ್ಷೆಯನ್ನು ಬರೆಯಲು ಸಾಧ್ಯವಾಯಿತು ಎಂದು ಹೇಳಿದ್ದಾರೆ. ಇದೀಗ ಬಾಣಂತನದಲ್ಲೂ ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಸ್ಫೂರ್ತಿ ಸೆಲೆಯಾಗಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:22 pm, Thu, 25 September 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!