Viral: ಬಸ್‌ ನಿಲ್ದಾಣದಲ್ಲಿ ಕುಳಿತಿದ್ದ ಯುವಕನ ಮೇಲೆಯೇ ನುಗ್ಗಿದ ಬಸ್; ಸಿಸಿ ಟಿವಿಯಲ್ಲಿ ಸೆರೆಯಾಯ್ತು ಅಪಘಾತದ ಭಯಾನಕ ದೃಶ್ಯ

ಅಪಘಾತಗಳು ನಡೆಯುವಂತಹ ಸುದ್ದಿಗಳು ಪ್ರತಿನಿತ್ಯ ಕೇಳಿಬರುತ್ತಿರುತ್ತವೆ. ಅದೇ ರೀತಿ ಇಲ್ಲೊಂದು ಕಡೆ ಬಸ್‌ ನಿಲ್ದಾಣದಲ್ಲಿಯೇ ಭಯಾನಕ ಅಪಘಾತವೊಂದು ಸಂಭವಿಸಿದ್ದು, ನಿಯಂತ್ರಣ ತಪ್ಪಿದ ಬಸ್ಸೊಂದು ನಿಲ್ದಾಣದಲ್ಲಿ ಕುಳಿತಿದ್ದ ಯುವಕನ ಮೇಲೆಯೇ ನುಗ್ಗಿದೆ. ಈ ಅಪಘಾತದಲ್ಲಿ ಯುವಕ ಪವಾಡ ಸದೃಶ ರೀತಿಯಲ್ಲಿ ಸಾವಿನ ದವಡೆಯಿಂದ ಪಾರಾಗಿದ್ದಾನೆ. ಈ ಶಾಕಿಂಗ್‌ ದೃಶ್ಯ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದೆ.

Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Dec 03, 2024 | 3:48 PM

ಅದೃಷ್ಟ ಕೈ ಕೊಟ್ಟಾಗ ಬೆನ್ನಿಗೆ ಬಿದ್ದ ಬೇತಾಳನಂತೆ ಸಮಸ್ಯೆಗಳು ಒಂದರ ಹಿಂದೆ ಒಂದರಂತೆ ಬರುವ ಹಾಗೆ ಅದೃಷ್ಟ ಕೈ ಹಿಡಿದಾಗ ಯಾವುದೇ ಗಂಡಾಂತರ ಬಂದರೂ ಅದರಿಂದ ಪಾರಾಗಿ ಸಾವನ್ನೇ ಗೆದ್ದು ಬರಬಹುದು ಎಂದು ಹೇಳ್ತಾರೆ. ಅದೇ ರೀತಿ ಇಲ್ಲೊಂದು ಘಟನೆ ನಡೆದಿದ್ದು, ಯುವಕನೊಬ್ಬ ತನ್ನ ಅದೃಷ್ಟದಿಂದಲೇ ಸಾವಿನ ದವಡೆಯಿಂದ ಪಾರಾಗಿದ್ದಾನೆ. ಹೌದು ನಿಯಂತ್ರಣ ತಪ್ಪಿದ ಬಸ್ಸೊಂದು ನಿಲ್ದಾಣದಲ್ಲಿ ಕುಳಿತಿದ್ದ ಆ ಯುವಕನ ಮೇಲೆಯೇ ನುಗ್ಗಿದ್ದು, ಈ ಭೀಕರ ಅಪಘಾತದಲ್ಲಿ ಯುವಕ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾನೆ. ಈ ಶಾಕಿಂಗ್‌ ದೃಶ್ಯ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದೆ.

ಈ ಘಟನೆ ಡಿಸೆಂಬರ್‌ 1 ಭಾನುವಾರದಂದು ಕೇರಳದ ಇಡುಕ್ಕಿ ಜಿಲ್ಲೆಯ ಕಟ್ಟಪ್ಪನ್‌ ಬಸ್‌ ನಿಲ್ದಾಣದಲ್ಲಿ ನಡೆದಿದ್ದು, ಯುವಕನೊಬ್ಬ ಭೀಕರ ಅಪಘಾತದಿಂದ ಪವಾಡ ಸದೃಶವಾಗಿ ಪಾರಾಗಿದ್ದಾನೆ. ಈ ಯುವಕ ಬಸ್‌ಸ್ಟ್ಯಾಂಡ್‌ನಲ್ಲಿ ಕುಳಿತು ಮೊಬೈಲ್‌ ನೋಡುತ್ತಿದ್ದಂತಹ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಬಂದ ಬಸ್ಸೊಂದು ಆತನ ಮೇಲೆಯೇ ನುಗ್ಗಿದೆ.

ವರದಿಗಳ ಪ್ರಕಾರ ಚಾಲಕ ಬಸ್ಸನ್ನು ರಿವರ್ಸ್‌ ತೆಗೆಯಲು ಯತ್ನಿಸಿದಾಗ ನಿಯಂತ್ರಣ ತಪ್ಪಿ, ಬಸ್‌ ಸೀದಾ ಬಂದು ಬಸ್‌ಸ್ಟಾಂಡ್‌ನಲ್ಲಿ ಕುಳಿತಿದ್ದ ಯುವಕನ ಮೇಲೆ ನುಗ್ಗಿದೆ. ಅದೃಷ್ಟವಶಾತ್‌ ಯುವಕ ಅಪಾಯದಿಂದ ಪಾರಾಗಿದ್ದು, ಆತನ ಮೊಣಕಾಲಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇದನ್ನೂ ಓದಿ: ಮದುವೆ ಮಂಟಪದಿಂದ ಹತ್ತಾರು ಬಾರಿ ಹೋಗ್ತಿದ್ದ ವರ, ಅನುಮಾನ ಬಂದು ಹಿಂದೆ ಹೋದಾಗ ಕಂಡಿದ್ದೇನು?

TheSiasatDaily ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಯುವಕನೊಬ್ಬ ಬಸ್‌ಸ್ಟ್ಯಾಂಡ್‌ನಲ್ಲಿ ಮೊಬೈಲ್‌ ನೋಡುತ್ತಾ ತನ್ನ ಪಾಡಿಗೆ ಕುಳಿತಿರುವ ದೃಶ್ಯವನ್ನು ಕಾಣಬಹುದು. ಇದೇ ಸಂದರ್ಭದಲ್ಲಿ ಏಕಾಏಕಿ ಬಂದಂತಹ ಬಸ್ಸೊಂದು ನಿಯಂತ್ರಣ ತಪ್ಪಿ ಆ ಯುವಕನ ಮೇಲೆಯೇ ನುಗ್ಗಿದೆ. ತಕ್ಷಣ ಅಲ್ಲಿದ್ದ ಜನರೆಲ್ಲಾ ಯುವಕನ ರಕ್ಷಣೆಗೆ ಧಾವಿಸಿದ್ದಾರೆ. ಈ ಭೀಕರ ಅಪಘಾತದ ದೃಶ್ಯವನ್ನು ಕಂಡು ನೋಡುಗರು ಬೆಚ್ಚಿ ಬಿದ್ದಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ