AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1000 ಬಸ್ಕಿ ಹೊಡಿಸಿದ ಶಿಕ್ಷಕ, ಕಾಲಿನ ಸ್ವಾಧೀನ ಕಳೆದುಕೊಂಡ ವಿದ್ಯಾರ್ಥಿ

ಶಿಕ್ಷಕ ವಿದ್ಯಾರ್ಥಿಗೆ 1000 ಬಸ್ಕಿ ಹೊಡಿಯುವಂತೆ ಶಿಕ್ಷೆ ನೀಡಿದ್ದು, ಪರಿಣಾಮ 13ವರ್ಷದ ಬಾಲಕ ಕಾಲಿನ ಸ್ವಾಧೀನ ಕಳೆದುಕೊಂಡಿದ್ದಾನೆ. ಬಾಲಕನ ಪೋಷಕರು ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪ್ರಕರಣ ನ್ಯಾಯಾಲಯದಲ್ಲಿದೆ. ಈ ಘಟನೆ ಚೀನಾದಲ್ಲಿ ನಡೆದಿದೆ.

1000 ಬಸ್ಕಿ ಹೊಡಿಸಿದ ಶಿಕ್ಷಕ, ಕಾಲಿನ ಸ್ವಾಧೀನ ಕಳೆದುಕೊಂಡ ವಿದ್ಯಾರ್ಥಿ
ಅಕ್ಷತಾ ವರ್ಕಾಡಿ
|

Updated on:Oct 08, 2024 | 2:56 PM

Share

ಶಾಲೆಗಳಲ್ಲಿ ಕಲಿಕೆ ಮತ್ತು ಶಿಸ್ತಿನ ವಿಷಯದಲ್ಲಿ ಶಿಕ್ಷಕರ ಕಟ್ಟುನಿಟ್ಟು ಸಾಮಾನ್ಯವಾಗಿದೆ. ಅನೇಕ ಬಾರಿ ಶಿಕ್ಷಕರು ಮಕ್ಕಳಿಗೆ ಬೈದು ಹೊಡೆದು ಪಾಠ ಕಲಿಸಲು ಪ್ರಯತ್ನಿಸುತ್ತಾರೆ. ಆದರೆ ಇಲ್ಲೊಂದು ಶಿಕ್ಷಕ ವಿದ್ಯಾರ್ಥಿಗೆ 1000 ಬಸ್ಕಿ ಹೊಡಿಯುವ ಶಿಕ್ಷೆ ನೀಡಿದ್ದು, ಪರಿಣಾಮ 13ವರ್ಷದ ಬಾಲಕ ಕಾಲಿನ ಸ್ವಾಧೀನ ಕಳೆದುಕೊಂಡಿದ್ದಾನೆ. ಈ ಘಟನೆ ಚೀನಾದ ಶಾನ್‌ಡಾಂಗ್ ಪ್ರಾಂತ್ಯದ ಮಿಡ್ಲ್ ಸ್ಕೂಲ್‌ನಲ್ಲಿ ನಡೆದಿದೆ.

ತೀವ್ರ ಕಾಲು ನೋವಿನಿಂದ ಬಳಲುತ್ತಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಪ್ರಾರಂಭದಲ್ಲಿ ಸ್ನಾಯು ನೋವು ಎಂದು ಭಾವಿಸಿ ಔಷಧಿ ನೀಡಲಾಗಿದೆ. ಆದರೆ ಬಾಲಕನಿಗೆ ನೋವು ಜಾಸ್ತಿಯಾಗಿದ್ದು, ವೈದ್ಯಕೀಯ ಪರೀಕ್ಷೆಯ ವೇಳೆ ಬಾಲಕ ರಾಬ್ಡೋಮಿಯೊಲಿಸಿಸ್ ಎಂಬ ಗಂಭೀರ ವೈದ್ಯಕೀಯ ಸ್ಥಿತಿಯಿಂದ ಬಳಲುತ್ತಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಒಂದಲ್ಲ ಎರಡಲ್ಲ ಬರೋಬ್ಬರಿ 20 ಗಿನ್ನೆಸ್‌ ದಾಖಲೆ ಮಾಡಿದ ಕುಟುಂಬ

1000 ಬಸ್ಕಿ ಹೊಡೆದ ಪರಿಣಾಮ ಬಾಲಕನ ಸ್ನಾಯುಗಳಿಗೆ ಗಂಭೀರ ಹಾನಿಯನ್ನುಂಟುಮಾಡಿದೆ. ಇನ್ನು ಜೀವನ ಪರ್ಯಂತ ಕಾಲ ಮೇಲೆ ನಿಲ್ಲುವಂತಿಲ್ಲ. ಈ ಘಟನೆಯು ಮಗುವಿಗೆ ದೈಹಿಕ ಹಾಗೂ ಮಾನಸಿಕವಾಗಿ ಆಳವಾದ ಪ್ರಭಾವವನ್ನು ಬೀರಿದೆ ಎಂದು ಬಾಲಕನ ಪೋಷಕರು ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪ್ರಕರಣ ನ್ಯಾಯಾಲಯದಲ್ಲಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:54 pm, Tue, 8 October 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ