ಚಳಿಯಲ್ಲಿ ನಡುಗಿ ಹೋಗಿದ್ದ ನಾಯಿ ಮರಿಗಳಿಗಾಗಿ ಬೆಂಕಿ ಕಾಯಿಸಿದ ಯುವಕ; ಮುದ್ದಾದ ದೃಶ್ಯ ವೈರಲ್‌

ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುವ ಕೆಲವೊಂದು ದೃಶ್ಯಗಳು ಬಹು ಬೇಗನೇ ನಮ್ಮ ಗಮನವನ್ನು ಸೆಳೆಯುತ್ತವೆ. ಇದೀಗ ಅಂತಹದ್ದೇ ಮತ್ತೊಂದು ದೃಶ್ಯ ವೈರಲ್‌ ಆಗಿದ್ದು, ಯುವಕನೊಬ್ಬ ಕೊರೆಯುವ ಚಳಿಯಲ್ಲಿ ನಡುಗುತ್ತಿದ್ದ ನಾಯಿ ಮರಿಗಳಿಗೆ ಚಳಿ ಕಾಯಿಸಿಕೊಳ್ಳಲು ಬೆಂಕಿ ಕಾಯಿಸಿಕೊಟ್ಟಿದ್ದಾನೆ. ಈತನ ಈ ಮಾನವೀಯ ಕಾರ್ಯಕ್ಕೆ ಭಾರೀ ಶ್ಲಾಘನೆ ವ್ಯಕ್ತವಾಗುತ್ತಿದೆ.

Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 06, 2025 | 12:27 PM

ಈಗಂತೂ ಎಲ್ಲಿ ನೋಡಿದ್ರೂ ಸಿಕ್ಕಾಪಟ್ಟೆ ಚಳಿ. ಈ ತಂಪು ವಾತಾವರಣದಲ್ಲಿ ಬೆಚ್ಚಗಿರಲು ಹೆಚ್ಚಿನವರು ಸ್ವೆಟ್ಟರ್‌, ದಪ್ಪನೆಯ ಬಟ್ಟೆ, ಕೈಗಳಿಗೆ ಗೌಸ್‌ ಧರಿಸಿದರೆ ಇನ್ನೂ ಕೆಲವರು ಕೊರೆಯುವ ಚಳಿಯಲ್ಲಿ ಬೆಂಕಿ ಹಚ್ಚಿ ಚಳಿ ಕಾಯಿಸಿಕೊಳ್ಳುತ್ತಾರೆ. ಆದ್ರೆ ಬೀಡಾಡಿ ಪ್ರಾಣಿಗಳು ಪಾಪ ಚಳಿ ತಡೆಯಲಾರದೆ ಕಷ್ಟ ಅನುಭವಿಸುತ್ತವೆ. ಹೆಚ್ಚಿನವರು ಇವುಗಳ ಬಗ್ಗೆ ಅಷ್ಟಾಗಿ ತಲೆ ಕೆಡಿಸಿಕೊಳ್ಳಲು ಹೋಗುವುದಿಲ್ಲ. ಆದರೆ ಇಲ್ಲೊಬ್ಬ ಯುವಕ ಮಾತ್ರ ನಾಯಿ ಮರಿಗಳು ಕೂಡಾ ಬೆಚ್ಚಗಿರಬೇಕೆಂದು ಕೊರೆಯುವ ಚಳಿಯಲ್ಲಿ ನಡುಗುತ್ತಿದ್ದ ನಾಯಿ ಮರಿಗಳಿಗೆ ಚಳಿ ಕಾಯಿಸಲು ಬೆಂಕಿ ಕಾಯಿಸಿಕೊಟ್ಟಿದ್ದಾನೆ. ಈತನ ಈ ಮಾನವೀಯ ಕಾರ್ಯಕ್ಕೆ ಭಾರೀ ಶ್ಲಾಘನೆ ವ್ಯಕ್ತವಾಗುತ್ತಿದೆ.

ಬಹುಪಾಲು ಮಾನವೀಯತೆ ಮರೆಯಾಗಿರುವ ಈ ಕಾಲದಲ್ಲಿಯೂ ದಯೆ, ಕರುಣೆ, ಕಾಳಜಿ ಸಹಾನೂಭೂತಿಯನ್ನು ಹೊಂದಿದವರು, ಪರರ ಕಷ್ಟಕ್ಕೆ ಸಹಾಯವಾಗುವ ಒಂದಷ್ಟು ಜನ ಇದ್ದಾರೆ. ಇದಕ್ಕೆ ಉದಾಹರಣೆಯಂತಿರುವ ವಿಡಿಯೋವೊಂದು ಇದೀಗ ವೈರಲ್‌ ಆಗಿದ್ದು, ಸತ್ಯಮ್ ಸೂರ್ಯವಂಶಿ ಎಂಬ ಯುವಕ ಕೊರೆಯುವ ಚಳಿಯಲ್ಲಿ ನಡುಗಿ ಹೋಗಿದ್ದ ನಾಯಿ ಮರಿಗಳಿಗೆ ಚಳಿ ಕಾಯಿಸಲು ಬೆಂಕಿ ಹಾಕಿಕೊಟ್ಟಿದ್ದಾನೆ.

ಈ ಕುರಿತ ವಿಡಿಯೋವನ್ನು satyam_suryanshi123‌ ಹೆಸರಿನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ಈ ವಿಡಿಯೋದಲ್ಲಿ ಸತ್ಯಮ್‌ ಜೊತೆ ಕುಳಿತಿರುವ ಪುಟ್ಟ ಪುಟ್ಟ ನಾಯಿ ಮರಿಗಳು ಬೆಂಕಿಯ ಪಕ್ಕ ಕುಳಿತು ಚಳಿ ಕಾಯಿಸಿಕೊಳ್ಳುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ರೀಲ್ಸ್‌ ಗಾಗಿ ಚಲಿಸುವ ಕಾರಿನಲ್ಲಿ ಸ್ಟಂಟ್‌ ಮಾಡಿದ ಯುವಕರು, ಈ ಹುಚ್ಚಾಟಕ್ಕೆ ಬಿತ್ತು 33 ಸಾವಿರ ದಂಡ

ಏಳು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 10.9 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಎಂತಹ ಸಹೃದಯಿ ವ್ಯಕ್ತಿಯಿವʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಸಹೋದರ ನಿನ್ನ ಈ ಕಾರ್ಯಕ್ಕೆ ನನ್ನದೊಂದು ಸಲಾಂʼ ಎಂದು ಹೇಳಿದ್ದಾರೆ. ಇನ್ನೂ ಅನೇಕರು ಯುವಕನ ಈ ಮಾನವೀಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್