Viral: ಮೆಟ್ರೋ ನಿಲ್ದಾಣದಲ್ಲಿ ಎಲ್ಲರೆದುರಲ್ಲೇ ಲಿಪ್ ಟು ಲಿಪ್ ಕಿಸ್ ಮಾಡುತ್ತಾ ನಿಂತ ಜೋಡಿ; ವಿಡಿಯೋ ವೈರಲ್
ಮೆಟ್ರೋ, ರೈಲು, ಬಸ್ಸು ಹೀಗೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರೇಮಿಗಳು ಮಿತಿ ಮೀರಿ ವರ್ತಿಸುವಂತಹ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಇದೀಗ ಮತ್ತೊಂದು ಇಂತಹದ್ದೇ ಘಟನೆ ನಡೆದಿದ್ದು, ಮೆಟ್ರೋ ನಿಲ್ದಾಣದಲ್ಲಿ ಪ್ರೇಮಿಗಳಿಬ್ಬರು ಲೋಕದ ಪರಿವೇ ಇಲ್ಲದೆ, ಎಲ್ಲರೆದುರಲ್ಲೇ ಪರಸ್ಪರ ಬಿಗಿಯಾಗಿ ತಬ್ಬಿಕೊಂಡು ಲಿಪ್ ಟು ಲಿಪ್ ಕಿಸ್ ಮಾಡಿದ್ದಾರೆ. ಈ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಪ್ರೇಮಕ್ಕೆ ಕಣ್ಣಿಲ್ಲ ಅಂತ ಹೇಳ್ತಾರೆ ಅದೇ ರೀತಿ ರೀತಿಯಲ್ಲಿ ಬಿದ್ದವರೂ ಕೂಡಾ ಜಗತ್ತಿನ ಪರಿಜ್ಞಾನವೇ ಇಲ್ಲದೆ ಎಲ್ಲೆಂದರಲ್ಲಿ ಮಿತಿ ಮೀರಿ ವರ್ತಿಸುತ್ತಿರುತ್ತಾರೆ. ಹೌದು ಕೆಲ ಪ್ರೇಮಿಗಳು, ರೈಲು, ಮೆಟ್ರೋ, ಬಸ್, ಪಾರ್ಕ್ ಇತ್ಯಾದಿ ಸಾರ್ವಜನಿಕ ಸ್ಥಳಗಳಲ್ಲಿ ಯಾರಿಗೂ ಕ್ಯಾರೇ ಅನ್ನದೇ ಅಸಭ್ಯ ವರ್ತನೆಯನ್ನು ತೋರುತ್ತಿರುತ್ತಾರೆ. ಇಂತಹ ಸಾಕಷ್ಟು ಘಟನೆಗಳು ಈ ಹಿಂದೆಯೂ ನಡೆದಿವೆ. ಇದೀಗ ಮತ್ತೊಂದು ಇಂತಹದ್ದೇ ಘಟನೆ ನಡೆದಿದ್ದು, ಮೆಟ್ರೋ ನಿಲ್ದಾಣದಲ್ಲಿ ಪ್ರೇಮಿಗಳಿಬ್ಬರು ಲೋಕದ ಪರಿವೇ ಇಲ್ಲದೆ, ಎಲ್ಲರೆದುರಲ್ಲೇ ಪರಸ್ಪರ ಬಿಗಿಯಾಗಿ ತಬ್ಬಿಕೊಂಡು ಲಿಪ್ ಟು ಲಿಪ್ ಕಿಸ್ ಮಾಡಿದ್ದಾರೆ. ಈ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಪ್ರೇಮಿಗಳಿಬ್ಬರ ಈ ಅತಿಯಾದ ವರ್ತನೆ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ.
ಕೋಲ್ಕತ್ತಾದ ಕಾಳಿಘಾಟ್ ಮೆಟ್ರೋ ಸ್ಟೇಷನ್‌ನಲ್ಲಿ ಈ ಘಟನೆ ನಡೆದಿದ್ದು, ಪ್ರೇಮಿಗಳಿಬ್ಬರು ಲೋಕದ ಪರಿವೇ ಇಲ್ಲದೆ ಪರಸ್ಪರ ತಬ್ಬಿಕೊಂಡು ಲಿಪ್ ಲಾಕ್ ಮಾಡಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಇವರ ರೊಮ್ಯಾನ್ಸ್ ಕಂಡು ಅಲ್ಲಿದ್ದವರು ಫುಲ್ ಶಾಕ್ ಆಗಿದ್ದಾರೆ.
ವೈರಲ್ ವಿಡಿಯೋ ಇಲ್ಲಿದೆ ನೋಡಿ:
Kolkata Metro Station.
कुछ नागरिकों ने इन्हे मना भी किया लेकिन लड़की-लड़का फिर भी नही मानें
इनको पता चल गया कि लोग इनकी Video Record कर रहे हैं। pic.twitter.com/e64G1ajE3m
— Shubhangi Pandit (@Babymishra_) December 15, 2024
ಶುಭಾಂಗಿ ಪಂಡಿತ್ (Babymishra_) ಪಂಡಿತ್ ಎಂಬವರು ಈ ಕುರಿತ ವಿಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಮೆಟ್ರೋ ಸ್ಟೇಷನ್‌ನಲ್ಲಿ ಇತರೆ ಪ್ರಯಾಣಿಕರ ಎದುರಲ್ಲೇ ಪ್ರೇಮಿಗಳಿಬ್ಬರು ಪರಸ್ಪರ ತಬ್ಬಿಕೊಂಡು ಲಿಪ್ ಲಾಕ್ ಮಾಡುತ್ತಾ ರೊಮ್ಯಾನ್ಸ್ ಮಾಡುತ್ತಿರುವಂತಹ ದೃಶ್ಯವನ್ನು ಕಾಣಬಹುದು.
ಇದನ್ನೂ ಓದಿ: ಅಯ್ಯಯ್ಯೋ… ನಾಯಿ ಮೊಲೆ ಚೀಪಿ ಹಾಲು ಕುಡಿದ ಯುವತಿ; ವಿಡಿಯೋ ವೈರಲ್
ಡಿಸೆಂಬರ್ 15 ರಂದು ಹಂಚಿಕೊಳ್ಳಲಾದ ಈ ವಿಡಿಯೋ 8.3 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ವರ್ತಿಸುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಸಾರ್ವಜನಿಕ ಸ್ಥಳಗಳಲ್ಲಿ ಸಭ್ಯ ರೀತಿಯಲ್ಲಿ ವರ್ತಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಈಗೀಗ ಜನರ ಹುಚ್ಚಾಟಗಳು ತೀರಾ ಹೆಚ್ಚಾಗ್ತಿದೆʼ ಎಂದು ಹೇಳಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ