Viral Video: ಶಾಲಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬರೀ ಟವೆಲ್‌ ಸುತ್ತಿ ವಿದ್ಯಾರ್ಥಿನಿಯರ ಬೋಲ್ಡ್‌ ಡ್ಯಾನ್ಸ್; ವಿಡಿಯೋ ವೈರಲ್‌

ಕೋಲ್ಕತ್ತಾದ ಶಾಲೆಯೊಂದರಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಭಾರಿ ವಿವಾದಕ್ಕೆ ಕಾರಣವಾಗಿದೆ. ವಿದ್ಯಾರ್ಥಿನಿಯರು ಟವೆಲ್ ಸುತ್ತಿ ವೇದಿಕೆಯ ಮೇಲೆ ನೃತ್ಯ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. @HateDetectors ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು,ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ.

Viral Video: ಶಾಲಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬರೀ ಟವೆಲ್‌ ಸುತ್ತಿ ವಿದ್ಯಾರ್ಥಿನಿಯರ ಬೋಲ್ಡ್‌ ಡ್ಯಾನ್ಸ್; ವಿಡಿಯೋ ವೈರಲ್‌
ವಿದ್ಯಾರ್ಥಿನಿಯರು ಟವೆಲ್ ಸುತ್ತಿ ವೇದಿಕೆಯ ಮೇಲೆ ನೃತ್ಯ
Image Credit source: Twitter

Updated on: Mar 15, 2026 | 5:08 PM

ಕೋಲ್ಕತ್ತಾ: ಶಾಲಾ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾಮಾನ್ಯವಾಗಿ ವಿದ್ಯಾರ್ಥಿಗಳ ಪ್ರತಿಭೆ ಮತ್ತು ಸಂಪ್ರದಾಯವನ್ನು ಬಿಂಬಿಸುವ ವೇದಿಕೆಗಳಾಗಿರುತ್ತವೆ. ಆದರೆ, ಪಶ್ಚಿಮ ಬಂಗಾಳದ ಶಾಲೆಯೊಂದರಲ್ಲಿ ನಡೆದ ವಿಲಕ್ಷಣ ಪ್ರದರ್ಶನವೊಂದು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೆ ಮತ್ತು ಟೀಕೆಗೆ ಗುರಿಯಾಗಿದೆ. ಸೋಶಿಯಲ್​ ಮಿಡಿಯಾಗಳಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ.

ಏನಿದು ಘಟನೆ?

ಕೋಲ್ಕತ್ತಾದ ಜೀಬನ್ ಜ್ಯೋತಿ ಮಾದರಿ ಶಾಲೆಯಲ್ಲಿ (Jeeban Jyoti Model School) ನಡೆದ ಕಾರ್ಯಕ್ರಮವೊಂದರ ವಿಡಿಯೋ ವೈರಲ್ ಆಗಿದ್ದು, ಅದರಲ್ಲಿ ಶಾಲಾ ವಿದ್ಯಾರ್ಥಿನಿಯರು ಟವೆಲ್ ಸುತ್ತಿ ವೇದಿಕೆಯ ಮೇಲೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ವಿದ್ಯಾರ್ಥಿನಿಯರು ಅಸಭ್ಯವಾಗಿ ನೃತ್ಯ ಪ್ರದರ್ಶನ ನೀಡುತ್ತಿರುವುದು ನೋಡುಗರ ಹುಬ್ಬೇರಿಸುವಂತೆ ಮಾಡಿದೆ.

@HateDetectors ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು,ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ. ವಿಡಿಯೋ ಇಲ್ಲಿದೆ ನೋಡಿ:

ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಟೀಕೆ:

ವೀಡಿಯೊದಲ್ಲಿ ಶಾಲೆಯ ಹೆಸರಿರುವ ಬ್ಯಾನರ್ ಸ್ಪಷ್ಟವಾಗಿ ಕಾಣಿಸುತ್ತಿದ್ದು, ನೂರಾರು ವಿದ್ಯಾರ್ಥಿಗಳು ಪ್ರೇಕ್ಷಕರ ಸಾಲಿನಲ್ಲಿ ಕುಳಿತು ಈ ಪ್ರದರ್ಶನವನ್ನು ವೀಕ್ಷಿಸುತ್ತಿದ್ದಾರೆ. ಈ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿದ್ದಂತೆ ನೆಟ್ಟಿಗರು ಶಾಲಾ ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಶಾಲಾ ಸಾಂಸ್ಕೃತಿಕ ಕಾರ್ಯಕ್ರಮಗಳು ಶಿಕ್ಷಣ, ಶಿಸ್ತು ಮತ್ತು ನೈತಿಕ ಮೌಲ್ಯಗಳನ್ನು ಕಲಿಸಬೇಕು. ಇಂತಹ ಪ್ರದರ್ಶನಗಳಿಗೆ ಅನುಮತಿ ನೀಡಿದ್ದು ಹೇಗೆ?” ಎಂದು ಅನೇಕರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್

ಈ ವಿವಾದಾತ್ಮಕ ವಿಡಿಯೋ ಬಗ್ಗೆ ಶಾಲಾ ಆಡಳಿತ ಮಂಡಳಿಯಿಂದ ಇದುವರೆಗೆ ಯಾವುದೇ ಅಧಿಕೃತ ಸ್ಪಷ್ಟನೆ ಬಂದಿಲ್ಲ. ಈ ಕಾರ್ಯಕ್ರಮ ನಡೆದ ನಿಖರ ದಿನಾಂಕ ಯಾವುದು? ವೇದಿಕೆಯ ಮೇಲೆ ಪ್ರದರ್ಶನ ನೀಡಿದವರು ಶಾಲೆಯ ವಿದ್ಯಾರ್ಥಿಗಳೇ ಅಥವಾ ಹೊರಗಿನಿಂದ ಬಂದ ಕಲಾವಿದರೇ? ಎಂಬ ಬಗ್ಗೆ ಇನ್ನೂ ಗೊಂದಲಗಳಿವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us