AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪ್ರವಾಹದ ನಡುವೆ ಹಾವಿಗೆ ಸಿಕ್ತು ಭರ್ಜರಿ ಬೇಟೆ: ಮೀನನ್ನು ಬಾಯಲ್ಲಿ ಕಚ್ಚಿಕೊಂಡು ಈಜಿದ ಹಾವು

ಕೋಲ್ಕತ್ತಾದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಆದರೆ ಈ ಪ್ರವಾಹ ಪೀಡಿತ ಮನೆಯೊಳಗೆ ಬಾಯಲ್ಲಿ ಮೀನನ್ನು ಹಿಡಿದು ನೀರಿನಲ್ಲಿ ಈಜುತ್ತಿರುವ ಹಾವಿನ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರನ್ನು ಹುಬ್ಬೇರಿಸುವಂತೆ ಮಾಡಿದೆ.

Video: ಪ್ರವಾಹದ ನಡುವೆ ಹಾವಿಗೆ ಸಿಕ್ತು ಭರ್ಜರಿ ಬೇಟೆ: ಮೀನನ್ನು ಬಾಯಲ್ಲಿ ಕಚ್ಚಿಕೊಂಡು ಈಜಿದ ಹಾವು
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Sep 25, 2025 | 1:43 PM

Share

ಕೋಲ್ಕತ್ತಾ, ಸೆಪ್ಟೆಂಬರ್ 25: ಕೋಲ್ಕತ್ತಾದಲ್ಲಿ (Kolkata) ಕಳೆದ ಒಂದೆರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಮಳೆಯಿಂದಾಗಿ ಮನೆಯೊಳಗೆ ನೀರು ತುಂಬಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಕೋಲ್ಕತ್ತಾ ಪ್ರವಾಹ ಪೀಡಿತ ಪ್ರದೇಶಗಳ (flooded area) ವಿಡಿಯೋಗಳು ವೈರಲ್ ಆಗುತ್ತಿದೆ. ಹಾವೊಂದು ಬಾಯಲ್ಲಿ ಮೀನನ್ನು ಹಿಡಿದು ಈಜುತ್ತಿರುವ ದೃಶ್ಯವು ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅತ್ರೇಯಿ ಮಿಶ್ರ (Atreyi mishra) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾಗಿದ್ದು, ದುರ್ಗಾ ಪೂಜೆಗೂ ಮುನ್ನ ಕೋಲ್ಕತ್ತಾ ಹಾಗೂ ಅದರ ಸಣ್ಣ ಸವಲತ್ತುಗಳು ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ. ಈ ವಿಡಿಯೋದಲ್ಲಿ ಹಾವೊಂದು ಬಾಯಲ್ಲಿ ಮೀನು ಹಿಡಿದುಕೊಂಡು ಈಜುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ
Image
ಇದು ವಾಹನಕ್ಕಲ್ಲ, ಕೋಣ ಓಡಿಸಲು ಸೂಕ್ತವಾದ ರಸ್ತೆ
Image
ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ನದಿಯಂತಾದ ಬೆಂಗಳೂರಿನ ಫ್ಲೈಓವರ್​!
Image
ಈಜುಕೊಳದಂತಾದ ಬೆಂಗಳೂರು ಡಬಲ್ ಡೆಕ್ಕರ್ ಫ್ಲೈಓವರ್: ವಿಡಿಯೋ ವೈರಲ್
Image
ಪ್ರವಾಹದಲ್ಲಿ ಸಿಲುಕಿದ್ದ ಕರುವಿನ ರಕ್ಷಣೆ ಮಾಡಿದ ವ್ಯಕ್ತಿ

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ:ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ನದಿಯಂತಾದ ಬೆಂಗಳೂರಿನ ಫ್ಲೈಓವರ್​, ವಿಡಿಯೋ ವೈರಲ್

ಈ ವಿಡಿಯೋ ಏಳು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು ಬಳಕೆದಾರರೊಬ್ಬರು, ಇದು ಕೋಲ್ಕತ್ತಾ, ಇಲ್ಲಿ ಎಲ್ಲವೂ ಸಾಧ್ಯ ಎಂದಿದ್ದಾರೆ. ಇನ್ನೊಬ್ಬರು, ಕೋಲ್ಕತ್ತಾದಲ್ಲಿ ಹಾವುಗಳು ಅನ್ನ ಹಾಗೂ ಮೀನು ತಿನ್ನುತ್ತವೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಇಂದು ಹಾವಿಗೆ ಭರ್ಜರಿ ಭೋಜನ ಎಂದು ತಮಾಷೆಯಾಗಿ ಕಾಮೆಂಟ್ ನಲ್ಲಿ ಬರೆದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?