AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

6ನೇ ವಯಸ್ಸಿನಲ್ಲಿ ಪ್ರಾಥಮಿಕ ಶಿಕ್ಷಣ, 12ನೇ ವಯಸ್ಸಿನಲ್ಲಿ ಸ್ನಾತಕೋತ್ತರ ಪದವಿ, 15ನೇ ವಯಸ್ಸಿನಲ್ಲಿ ಪಿಹೆಚ್​​​ಡಿ ಮಾಡಿದ ಬಾಲಕ

ಬೆಲ್ಜಿಯಂನ 15 ವರ್ಷದ ಲಾರೆಂಟ್ ಸೈಮನ್ಸ್ ಕ್ವಾಂಟಮ್ ಭೌತಶಾಸ್ತ್ರದಲ್ಲಿ ಪಿಎಚ್‌ಡಿ ಪೂರ್ಣಗೊಳಿಸಿ ಇತಿಹಾಸ ನಿರ್ಮಿಸಿದ್ದಾನೆ. 'ಬೆಲ್ಜಿಯಂ ಐನ್‌ಸ್ಟೈನ್' ಎಂದೇ ಖ್ಯಾತಿ ಪಡೆದಿರುವ ಈ ಬಾಲಕ, ಮಾನವನ ಜೀವಿತಾವಧಿಯನ್ನು ವಿಸ್ತರಿಸುವ ಗುರಿ ಹೊಂದಿದ್ದಾರೆ. ತಮ್ಮ ಅಸಾಮಾನ್ಯ ಬುದ್ಧಿಮತ್ತೆ ಮತ್ತು ಶೈಕ್ಷಣಿಕ ಸಾಧನೆಯಿಂದ ಇವರು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದಾರೆ. ಕಿರಿಯ ವಯಸ್ಸಿನಲ್ಲಿ ಇಂತಹ ಮಹತ್ವದ ಸಾಧನೆಗೈದ ಇವರು ಯುವ ಪೀಳಿಗೆಗೆ ಸ್ಫೂರ್ತಿಯಾಗಿದ್ದಾರೆ.

6ನೇ ವಯಸ್ಸಿನಲ್ಲಿ ಪ್ರಾಥಮಿಕ ಶಿಕ್ಷಣ, 12ನೇ ವಯಸ್ಸಿನಲ್ಲಿ ಸ್ನಾತಕೋತ್ತರ ಪದವಿ, 15ನೇ ವಯಸ್ಸಿನಲ್ಲಿ ಪಿಹೆಚ್​​​ಡಿ ಮಾಡಿದ ಬಾಲಕ
ಲಾರೆಂಟ್ ಸೈಮನ್ಸ್
ಅಕ್ಷಯ್​ ಪಲ್ಲಮಜಲು​​
|

Updated on: Dec 05, 2025 | 2:31 PM

Share

ಸಾಧನೆ ಮಾಡಲು ವಯಸ್ಸು ಅಡ್ಡಿಯಾಗುವುದಿಲ್ಲ. ಯಾವ ವಯಸ್ಸಿನಲ್ಲೂ ಬೇಕಾದರೂ ಸಾಧನೆಯನ್ನು (Laurent Simons) ಮಾಡಬಹುದು. ಇದೀಗ ಬೆಲ್ಜಿಯಂನ ಪುಟ್ಟ ಬಾಲಕನೊಬ್ಬ ಚಿಕ್ಕ ವಯಸ್ಸಿನಲ್ಲಿ ಮಹತ್ವದ ಸಾಧನೆಯನ್ನು ಮಾಡಿದ್ದಾನೆ. ಇದೀಗ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗಿದೆ. ಈ ಬಾಲಕನನ್ನು ಬೆಲ್ಜಿಯಂನ ಪುಟ್ಟ ಐನ್‌ಸ್ಟೈನ್ ಎಂದು ಕರೆಯಲಾಗುತ್ತದೆ. 15 ವರ್ಷದ ಲಾರೆಂಟ್ ಸೈಮನ್ಸ್, ಬೆಲ್ಜಿಯಂನ ಆಂಟ್ವೆರ್ಪ್ ವಿಶ್ವವಿದ್ಯಾಲಯದಲ್ಲಿ ಕ್ವಾಂಟಮ್ ಭೌತಶಾಸ್ತ್ರದಲ್ಲಿ ಪಿಎಚ್‌ಡಿ ಪೂರ್ಣಗೊಳಿಸಿದ್ದಾನೆ. ಫ್ಲೆಮಿಶ್ (ಬೆಲ್ಜಿಯಂ) ಪ್ರಸಾರಕ ವಿಟಿಎಂ ವರದಿ ಪ್ರಕಾರ ಲಾರೆಂಟ್ ಕಳೆದ ವಾರ ತನ್ನ ಪ್ರಬಂಧವನ್ನು ಯಶಸ್ವಿಯಾಗಿ ಮಂಡಿಸಿದ್ದಾನೆ. ಇದೀಗ ಈ ಪ್ರಬಂಧ ಆತನಿಗೆ ಡಾಕ್ಟರೇಟ್ ಪದವಿ ದೊರೆಯುವಂತೆ ಮಾಡಿದೆ.

ಲಾರೆಂಟ್ ತನ್ನ ಪ್ರಾಥಮಿಕ ಶಿಕ್ಷಣವನ್ನು ನಾಲ್ಕನೇ ವಯಸ್ಸಿನಲ್ಲಿ ಪ್ರಾರಂಭಿಸಿ, ಆರನೇ ವಯಸ್ಸಿನಲ್ಲಿ ಮುಗಿಸಿದ್ದಾನೆ. 12 ನೇ ವಯಸ್ಸಿನಲ್ಲಿ ಭೌತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ್ದಾನೆ. ಬೋಸಾನ್‌ಗಳು ಮತ್ತು ಕಪ್ಪು ಕುಳಿಗಳಂತಹ ವಿಷಯಗಳ ಬಗ್ಗೆ ಅಧ್ಯಯನ ಮಾಡಿದ್ದಾರೆ. ವೈಜ್ಞಾನಿಕ ವಿಚಾರಗಳ ಹಾಗೂ ಅದರ ಬಗ್ಗೆ ಆಸಕ್ತಿಯನ್ನು ಹೊಂದಿರುವ ಈ ಬಾಲಕ, ಲಾರೆಂಟ್ ಛಾಯಾಗ್ರಹಣದ ಸ್ಮರಣೆ ಮತ್ತು 145 ಐಕ್ಯೂ (Intelligence Quotient) ಹೊಂದಿದ್ದಾನೆ ಎಂದು ವರದಿಗಳು ಹೇಳುತ್ತವೆ. ಅವನ ಹೆತ್ತವರು ಚಿಕ್ಕ ವಯಸ್ಸಿನಲ್ಲಿಯೇ ಲಾರೆಂಟ್ ಆಸಕ್ತಿಯನ್ನು ಹಾಗೂ ಸಾಮರ್ಥ್ಯವನ್ನು ಗುರುತಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಲಾರೆಂಟ್ ” 11 ನೇ ವಯಸ್ಸಿನಲ್ಲಿ, ತನ್ನ ಅಜ್ಜ-ಅಜ್ಜಿಯನ್ನು ಕಳೆದುಕೊಂಡ ನಂತರ, ಮಾನವ ಜೀವಿತಾವಧಿಯನ್ನು ವಿಸ್ತರಿಸುವ ಕೆಲಸ ಮಾಡಲು ಬಯಸುತ್ತೇನೆ. ಈ ಗುರಿ ತನಗಾಗಿ ಅಲ್ಲ, ಬದಲಾಗಿ ಇತರರಿಗಾಗಿ, ಜನರು ದೀರ್ಘಕಾಲ ಮತ್ತು ಆರೋಗ್ಯಕರವಾಗಿ ಬದುಕಲು ಸಹಾಯ ಮಾಡಲು ಭವಿಷ್ಯದಲ್ಲಿ ವೈದ್ಯಕೀಯ ವಿಜ್ಞಾನವನ್ನು ಅಧ್ಯಯನ ಮಾಡುವ ಉದ್ದೇಶದಿಂದ ಇದನ್ನು ಮಾಡುತ್ತಿದ್ದೇನೆ” ಎಂದು ಹೇಳಿದ್ದಾನೆ.

ಇದನ್ನೂ ಓದಿ: ಈ ದೇಶದಲ್ಲಿ ಕಾಂಡೋಮ್​​ಗೆ ತೆರಿಗೆ, ಗರ್ಭನಿರೋಧಕಗಳಿಗೆ ನಿಷೇಧ, ಕಾರಣ ಇಲ್ಲಿದೆ

ಇನ್ನು ಲಾರೆಂಟ್ ಈ ಸಾಧನೆಯನ್ನು ಮಾಡಿದ ಮೊದಲು ಬಾಲಕ ಅಲ್ಲ. ಈ ಹಿಂದೆ ಅಂದರೆ 1814ರಲ್ಲಿ ಜರ್ಮನ್ ಪ್ರತಿಭೆ ಕಾರ್ಲ್ ವಿಟ್ಟೆ ಎಂಬ ಬಾಲಕ 13ನೇ ವಯಸ್ಸಿನಲ್ಲಿ ಪಿಎಚ್‌ಡಿ ಪೂರ್ಣಗೊಳಿಸಿದ್ದ, ಈ ಸಾಧನೆ ಗಿನ್ನೆಸ್ ವಿಶ್ವ ದಾಖಲೆಗಳು ಪಟ್ಟಿಗೆ ಸೇರಿತ್ತು. ಇತ್ತೀಚಿನ ವರ್ಷಗಳಲ್ಲಿ ಅತ್ಯಂತ ಕಿರಿಯ ವಯಸ್ಸಿನ ಕಾರ್ಸನ್ ಹುಯೆ-ಯು ಎಂಬುವವರು 21 ನೇ ವಯಸ್ಸಿನಲ್ಲಿ ಡಾಕ್ಟರೇಟ್ ಪಡೆದರು. ಎರಡು ವರ್ಷ ವಯಸ್ಸಿನಿಂದಲೇ ಪುಸ್ತಕ ಓದಲು ಶುರು ಮಾಡಿದ್ದರು. ಲಾರೆಂಟ್ ಈಗ ಜಾಗತಿಕವಾಗಿ ಗುರುತಿಸಲ್ಪಟ್ಟಿದ್ದಾರೆ . ಇದೀಗ ಹಲವು ಐಟಿ ಕಂಪನಿಗಳ ಗಮನವನ್ನು ಸೆಳೆಯುತ್ತಿದ್ದಾನೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ