Sign In

By signing in or creating an account, you agree with Associated Broadcasting Company's Terms & Conditions and Privacy Policy.

Fuel Price Hike: ಇಂಧನ ಬೆಲೆ ಏರಿಕೆ ಬಗ್ಗೆ ಅಮೂಲ್ ಡೂಡಲ್, ನೆಟ್ಟಿಗರ ಶ್ಲಾಘನೆ

Amul's Doodle: ಅಮೂಲ್ ಹುಡುಗಿ ತನ್ನ ಕಾರಿಗೆ ಇಂಧನ ತುಂಬಿಸುತ್ತಾ ಏರಿಕೆಯಾಗಿರುವ ದರವನ್ನು ದಿಟ್ಟಿಸುತ್ತಿರುವ ಡೂಡಲ್ ಇದಾಗಿದೆ. ಪೋಸ್ಟರ್ ನಲ್ಲಿ Painfuel increase ಎಂದು ಬೆಲೆ ಏರಿಕೆ ಬಗ್ಗೆ ಬರೆಯಲಾಗಿದೆ.

Fuel Price Hike: ಇಂಧನ ಬೆಲೆ ಏರಿಕೆ ಬಗ್ಗೆ ಅಮೂಲ್ ಡೂಡಲ್, ನೆಟ್ಟಿಗರ ಶ್ಲಾಘನೆ
ಅಮೂಲ್ ಡೂಡಲ್
Follow us
ರಶ್ಮಿ ಕಲ್ಲಕಟ್ಟ
|

Updated on: Feb 19, 2021 | 6:10 PM

ನವದೆಹಲಿ: ಸತತ 11ನೇ ದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದ್ದು, ಇಂಧನ ಬೆಲೆ ಏರಿಕೆ ಬಗ್ಗೆ ದೇಶದಾದ್ಯಂತ ಚರ್ಚೆಯಾಗಿದೆ. ಈ ನಡುವೆ ಖ್ಯಾತ ಬ್ರಾಂಡ್ ಅಮೂಲ್ ಬೆಲೆ ಏರಿಕೆಯ ಬಗ್ಗೆ ಡೂಡಲ್ ಪ್ರಕಟಿಸಿ ಜನಮೆಚ್ಚುಗೆ ಗಳಿಸಿದೆ.

ಅಮೂಲ್ ಹುಡುಗಿ ತನ್ನ ಕಾರಿಗೆ ಇಂಧನ ತುಂಬಿಸುತ್ತಾ ಏರಿಕೆಯಾಗಿರುವ ದರವನ್ನು ದಿಟ್ಟಿಸುತ್ತಿರುವ ಡೂಡಲ್ ಇದಾಗಿದೆ. ಪೋಸ್ಟರ್ ನಲ್ಲಿ Painfuel increase ಎಂದು ಬೆಲೆ ಏರಿಕೆ ಬಗ್ಗೆ ಹೇಳಿದ್ದು, ಅಮೂಲ್ ಕೈಗೆಟುಕುವ ರುಚಿ (Amul Affordable taste) ಎಂದು ಬರೆಯಲಾಗಿದೆ.

ಈ ಡೂಡಲ್ ಟ್ವೀಟ್ ಮಾಡಿರುವ ಅಮೂಲ್ ಕಾರ್ಪೊರೇಷನ್ #Amul Topical: The steeply rising fuel prices ಎಂದು ಬರೆದುಕೊಂಡಿದೆ. ಸಾಮಾನ್ಯ ಜನರ ಪರವಾಗಿ ದನಿಯೆತ್ತಿದ್ದಕ್ಕೆ ನೆಟ್ಟಿಗರು ಅಮೂಲ್ ಕಂಪನಿಯನ್ನು ಶ್ಲಾಘಿಸಿದ್ದಾರೆ.

ಏರಿಕೆಯಾಗುತ್ತಲೇ ಇದೆ ಇಂಧನ ಬೆಲೆ ದೆಹಲಿಯಲ್ಲಿ ಮತ್ತೆ ಪೆಟ್ರೋಲ್​ ದರ ಏರಿಕೆಯತ್ತ ಜಿಗಿದಿದ್ದು 31 ಪೈಸೆ ಏರಿಕೆ ಕಂಡಿದೆ. ಇದೀಗ ಪ್ರತಿ ಲೀಟರ್ ಪೆಟ್ರೋಲ್ ದರ ₹90.19 ಆಗಿದೆ. ಹಾಗೆಯೇ ಡೀಸೆಲ್ ದರ ಕೂಡಾ ಏರಿಕೆಯತ್ತ ಮುಖ ಮಾಡಿದ್ದು, 33 ಪೈಸೆ ಏರಿಕೆಯಾಗಿದೆ. ಡೀಸೆಲ್​ ದರ ₹80.60 ಆಗಿದೆ. ಮಹಾರಾಷ್ಟ್ರ, ರಾಜಸ್ಥಾನ, ಮಧ್ಯಪ್ರದೇಶ ರಾಜ್ಯಗಳಲ್ಲಿ ಪೆಟ್ರೋಲ್​ ದರ ನೂರರ ಗಡಿ ದಾಟಿದ್ದು ಬೆಂಗಳೂರಿನಲ್ಲೂ ಶೀಘ್ರವೇ ಶತಕ ಬಾರಿಸಲಿದೆ ಎಂದು ಅಂದಾಜಿಸಲಾಗಿದೆ.

ಮುಂಬೈಯಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಕ್ರಮವಾಗಿ 35 ಪೈಸೆ ಮತ್ತು 30 ಪೈಸೆ ಹೆಚ್ಚಾಗಿದೆ. ಹೆಚ್ಚಳದ ನಂತರ ಡೀಸೆಲ್ ಬೆಲೆ ಲೀಟರ್‌ಗೆ 87.67 ರೂ ಮತ್ತು ಪೆಟ್ರೋಲ್ ಪ್ರತಿ ಲೀಟರ್‌ಗೆ 96.62 ರೂ ಆಗಿದೆ. ರಾಜಸ್ಥಾನದಲ್ಲಿ ಪೆಟ್ರೋಲ್​ ದರ ಶತಕದ ಹಾದಿಯನ್ನು ತಲುಪಿ ಗರಿಷ್ಠ ಮಟ್ಟ ತಲುಪಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್‌ ಲೀಟರ್‌ಗೆ 92.37 ರೂ, ಡೀಸೆಲ್ ಲೀಟರ್‌ಗೆ 85.74 ರೂ. ಬೆಲೆಗಳ ಪಟ್ಟುಹಿಡಿದ ಏರಿಕೆಯನ್ನು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಟೀಕಿಸಿದ್ದು, ಸಾಮಾನ್ಯ ಜನರ ಮೇಲಿನ ಹೊರೆ ಯನ್ನು ತಪ್ಪಿಸಲು ತೆರಿಗೆಯನ್ನು ತಕ್ಷಣ ಕಡಿತಗೊಳಿಸಬೇಕೆಂದು ಒತ್ತಾಯಿಸುವ ಪ್ರಯತ್ನಗಳು ನಡೆಯುತ್ತಲೇ ಇವೆ. ಇಂದೂ ಕೂಡಾ ದರ ಏರಿಕೆಯತ್ತ ಸಾಗಿದ್ದು, ಪೆಟ್ರೋಲ್​ ದರ ₹93.21 ಹಾಗೂ ಡೀಸೆಲ್ ₹85.44 ಆಗಿದೆ.

ದಿನೇ ಏರುತ್ತಿರುವ ಪೆಟ್ರೋಲ್​ ಮತ್ತು ಡೀಸೆಲ್ ದರ ಏರಿಕೆಯ ಬಗ್ಗೆ ಹಾಗೂ 100ರ ಗಡಿ ದಾಟಿರುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ನಿನ್ನೆಯಷ್ಟೇ ಪ್ರತಿಕ್ರಿಯೆ ನೀಡಿದ್ದರು. ಹಿಂದಿನ ಸರಕಾರಗಳು ಇಂಧನ ಆಮದು ಅವಲಂಬನೆಯ ಬಗ್ಗೆ ಕಡಿಮೆ ಮಾಡುವ ಬಗ್ಗೆ ಗಮನ ಹರಿಸಿರಲಿಲ್ಲ. ಇದೀಗ ಇದು ಮಧ್ಯಮ ವರ್ಗದವರಿಗೆ ಹೊರೆಯಾದಂತಾಗಿದೆ. ಇದಕ್ಕೆ ಹಿಂದಿನ ಸರಕಾರಗಳೇ ಹೊಣೆ ಎಂದು ಪ್ರತಿಕ್ರಿಯೆ ನೀಡಿದ್ದರು.

ಇದನ್ನೂ ಓದಿ: ಅಮಿತಾಬ್ ಬಚ್ಚನ್, ಅಕ್ಷಯ್ ಕುಮಾರ್ ಸಿನಿಮಾ ಪ್ರದರ್ಶನಕ್ಕೆ ತಡೆ: ಮಹಾರಾಷ್ಟ್ರ ಕಾಂಗ್ರೆಸ್ ಬೆದರಿಕೆ

ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ