Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: 20 ಅಡಿ ಆಳದ ಬಾವಿಯಲ್ಲಿ ಮುಖವನ್ನಷ್ಟೆ ಮೇಲೆತ್ತಿ ನೋಡುತ್ತಿದೆ ಚಿರತೆ! ಅದ್ಭುತ ಚಿತ್ರ ವೈರಲ್​

ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್​ ಆಗುತ್ತಿದ್ದಂತೆಯೇ ವನ್ಯಜೀವಿಯನ್ನು ಸಂರಕ್ಷಿಸಿದ್ದಕ್ಕಾಗಿ ಅಧಿಕಾರಿಗಳಿಗೆ ಶ್ಲಾಘನೆ ವ್ಯಕ್ತವಾಗಿದೆ. ಅರಣ್ಯ ಸಿಬ್ಬಂದಿ ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ಪಾಲಿಸಿದ್ದಾರೆ ಅಭಿನಂದನೆಗಳು ಎಂದು ಇನ್ನೋರ್ವರು ಹೇಳಿದ್ದಾರೆ.

Viral Photo: 20 ಅಡಿ ಆಳದ ಬಾವಿಯಲ್ಲಿ ಮುಖವನ್ನಷ್ಟೆ ಮೇಲೆತ್ತಿ ನೋಡುತ್ತಿದೆ ಚಿರತೆ! ಅದ್ಭುತ ಚಿತ್ರ ವೈರಲ್​
20 ಅಡಿ ಆಳದ ಬಾವಿಯಲ್ಲಿ ಮುಖವನ್ನಷ್ಟೇ ಮೇಲೆತ್ತಿ ನೋಡುತ್ತಿದೆ ಚಿರತೆ!
Follow us
TV9 Web
| Updated By: shruti hegde

Updated on:Jul 02, 2021 | 11:25 AM

20 ಅಡಿ ಆಳದ ಬಾವಿಯಲ್ಲಿ ಚಿರತೆಯು ಸಿಕ್ಕಿಬಿದ್ದ ಘಟನೆ ಆಸ್ಸಾಂನಲ್ಲಿ ನಡೆದಿದೆ. ಈ ಮಧ್ಯೆ ನೀರಿನಲ್ಲಿ ಇಡೀ ದೇಹವನ್ನು ಮುಳುಗಿಸಿಕೊಂಡು ಮುಖವನ್ನಷ್ಟೇ ಮೇಲಕ್ಕೆತ್ತಿ ಭಯಂಕರ ಕಣ್ಣುಗಳನ್ನು ಬಿಟ್ಟು ನಿಂತಿರುವ ಅದ್ಭುತ ಚಿತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಬಾವಿಯಲ್ಲಿ ಅಚಾನಕ್​ಆಗಿ ಚಿರತೆ ಬಿದ್ದುಬಿಟ್ಟಿದೆ. ಅರಣ್ಯ ಇಲಾಖೆ ಮತ್ತು ವನ್ಯ ಜೀವಿ ಸಂರಕ್ಷಣೆ ಅಧಿಕಾರಿಗಳು ಸೇರಿ ಚಿರತೆಯನ್ನು ರಕ್ಷಿಸಿದ್ದಾರೆ. ಮರಳಿ ಅದರ ವಾಸಸ್ಥಾನಕ್ಕೆ ಹಿಂತಿರುಗಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.

ಅದು ತೆರೆದ ಬಾವಿಯಾಗಿತ್ತು. ಅಲೆದಾಡುತ್ತಿದ್ದ ಚಿರತೆ ಹೇಗೋ ಬಾವಿಯಲ್ಲಿ ಬಿದ್ದುಬಿಟ್ಟಿದೆ. ಚಿರತೆಯು ಘರ್ಜಿಸುತ್ತಿರುವುದು ಕೇಳಿ ಬರುತ್ತಿತ್ತು. ಧ್ವನಿಯು ಕರ್ಕಶವಾಗಿದ್ದರಿಂದ ಒಮ್ಮೆಲೆ ಭಯವಾಯಿತು. ತಕ್ಷಣವೇ ಅರಣ್ಯ ಇಲಾಖೆ ಸಿಬ್ಬಂದಿಗೆ ಕರೆ ಮಾಡಿದ್ದೇವೆ ಎಂದು ಗ್ರಾಮಸ್ಥರೋರ್ವರು ಹೇಳಿದ್ದಾರೆ. ಬಲೆಯ ಮೂಲಕ ಸುರಕ್ಷಿತವಾಗಿ ಚಿರತೆಯನ್ನು ಅರಣ್ಯ ಇಲಾಖೆ ಮತ್ತು ವನ್ಯಜೀವಿ ಸಂರಕ್ಷಕರು ರಕ್ಷಿಸಿದ್ದಾರೆ. ಚಿರತೆಯನ್ನು ಅರಣ್ಯಕ್ಕೆ ಬಿಡಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್​ ಆಗುತ್ತಿದ್ದಂತೆಯೇ ವನ್ಯಜೀವಿಯನ್ನು ಸಂರಕ್ಷಿಸಿದ್ದಕ್ಕಾಗಿ ಅಧಿಕಾರಿಗಳಿಗೆ ಶ್ಲಾಘನೆ ವ್ಯಕ್ತವಾಗಿದೆ. ಅರಣ್ಯ ಸಿಬ್ಬಂದಿ ತನ್ನ ಕರ್ತವ್ಯವನ್ನು ನಿಷ್ಠೆಯಿಂದ ಪಾಲಿಸಿದ್ದಾರೆ ಅಭಿನಂದನೆಗಳು ಎಂದು ಇನ್ನೋರ್ವರು ಹೇಳಿದ್ದಾರೆ. ಬಾವಿಯಲ್ಲಿ ಕುತ್ತಿಗೆಯನ್ನಷ್ಟೇ ಮೇಲಕ್ಕೆತ್ತಿ ಚಿರತೆ ನೋಡತ್ತಿರುವ ಚಿತ್ರ ಅದ್ಭುತವಾಗಿದೆ.. ಅಪರೂಪದ ದೃಶ್ಯ ಎಂದು ಅಭಿಪ್ರಾಯ ಕೇಳಿಬಂದಿದೆ.

ಇದನ್ನೂ ಓದಿ:

ಮಗನ ಬರ್ತ್​ಡೇಗೆ ಕೇಕ್ ತರಲು ಹೋಗಿದ್ದ ಅವರನ್ನು ಚಿರತೆ ಬೆನ್ನಟ್ಟಿತು, ಜೀವ ಉಳಿಸಲು ಕೇಕ್ ನೆರವಾಯಿತು!

ಬೆಂಗಳೂರಿನಲ್ಲಿ ಚಿರತೆ ದಾಳಿಗೆ ಎರಡು ಕರುಗಳು ಬಲಿ.. ದೊಡ್ಡೇರಿ ಗ್ರಾಮಸ್ಥರಲ್ಲಿ ಆತಂಕ

Published On - 11:12 am, Fri, 2 July 21

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ