Viral Video: ಲಿಫ್ಟ್​ ಕುಸಿದು ರೋಗಿ ತಲೆಕೆಳಗಾಗಿ ಬಿದ್ದ ದೃಶ್ಯ ವೈರಲ್

Elevator : ರೋಗಿಯನ್ನು ಸ್ಟ್ರೆಚರ್ ಮೇಲೆ ಮಲಗಿಸಿಕೊಂಡು ಲಿಫ್ಟಿನೊಳಗೆ ಕರೆದೊಯ್ಯುವಾಗ ಈ ಘಟನೆ ಸಂಭವಿಸಿದೆ. ಅಕ್ಟೋಬರ್​ನಲ್ಲಿ ಈ ಘಟನೆ ನಡೆದಿದ್ದು ಇದೀಗ ವೈರಲ್ ಆಗಿದೆ. ನೆಟ್ಟಿಗರು ಕಂಗಾಲಾಗಿ ಪ್ರತಿಕ್ರಿಯಿಸುತ್ತಿದ್ದಾರೆ.

Viral Video: ಲಿಫ್ಟ್​ ಕುಸಿದು ರೋಗಿ ತಲೆಕೆಳಗಾಗಿ ಬಿದ್ದ ದೃಶ್ಯ ವೈರಲ್
ಲಿಫ್ಟ್​ನೊಳಗೆ ರೋಗಿಯನ್ನು ಕರೆದೊಯ್ಯುತ್ತಿರುವ ದೃಶ್ಯ
Follow us
TV9 Web
| Updated By: Digi Tech Desk

Updated on:Dec 27, 2022 | 5:44 PM

ಈ ವಿಡಿಯೋ ನೋಡಿ ಅನೇಕ ನೆಟ್ಟಿಗರು ದಂಗಾಗಿದ್ದಾರೆ. ಇಂಥ ಗತಿ ಸ್ವತಃ ತಮಗೇ ಬಂದರೆ ಏನು ಮಾಡೋದು ಎಂದು ಕಂಗಾಲಾಗಿದ್ದಾರೆ. ಆಸ್ಪತ್ರೆ ಚೆನ್ನಾಗಿದೆ, ವೈದ್ಯರು ಸಹಾಯಕರು ಚೆನ್ನಾಗಿ ನೋಡಿಕೊಳ್ಳುತ್ತಾರೆ ಎಂದು ನಿಟ್ಟುಸಿರು ಬಿಡಲೂ ಆಗದಂಥ ಕಾಲದಲ್ಲಿದ್ದೇವೆಯೇ? ಎಂಬ ಆತಂಕ ಉಂಟಾಗುತ್ತದೆ ಈ ವಿಡಿಯೋ ನೋಡಿದಾಕ್ಷಣ. ಆಸ್ಪತ್ರೆಯಲ್ಲಿ ಸ್ಟ್ರೆಚರ್ ಮೂಲಕ ರೋಗಿಯನ್ನು ಲಿಫ್ಟ್​ ಬಳಿ ಕರೆತರಲಾಗುತ್ತದೆ. ಆದರೆ ಸ್ಟ್ರೆಚರ್ ಲಿಫ್ಟ್​ನೊಳಗೆ ಅರ್ಧ ಹೋಗುತ್ತಿರುವಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದುಬಿಡುತ್ತದೆ. ರೋಗಿ ಮತ್ತು ಆಸ್ಪತ್ರೆಯ ಸಿಬ್ಬಂದಿ ಕೆಳಮುಖವಾಗಿ ಬಿದ್ದುಬಿಡುತ್ತಾರೆ.

ನಿನ್ನೆ ಹಂಚಿಕೊಂಡ ಈ ವಿಡಿಯೋ ಅನ್ನು ಈತನಕ 10.5 ಮಿಲಿಯನ್ ಜನರು ನೋಡಿದ್ದಾರೆ. ಆದರೆ ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಅಕ್ಟೋಬರ್ 8ರಂದು. ಈ ಆಘಾತಕಾರಿ ವಿಡಿಯೋದ ಬಗ್ಗೆ ಅನೇಕರು ರೀಟ್ವೀಟ್ ಮಾಡಿದ್ದಾರೆ. ಲಿಫ್ಟ್​ ಸರಿಯಾಗಿ ಕಾರ್ಯ ನಿರ್ವಹಿಸದೇ ಇರುವ ಬಗ್ಗೆ ಅನೇಕರು ತಕರಾರು ಎತ್ತಿದ್ದಾರೆ. ಅನೇಕರು ಈ ದೃಶ್ಯ ತಮಗೆ ದುಃಸ್ವಪ್ನದಂತೆ ಕಾಡುತ್ತಿದೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ : ತಾಯಿಯ ಕೊನೆಯ ಆಸೆ ಪೂರೈಸಲು ಐಸಿಯುನಲ್ಲಿಯೇ ಮಗಳ ಮದುವೆ

ನಂತರ ಆ ರೋಗಿ ಮತ್ತು ಒಳಗಿದ್ದ ಸಹಾಯಕರಿಗೆ ಏನಾಯಿತೆಂದು ತಿಳಿಯಿತೇ? ಎಂದು ಪ್ರಶ್ನಿಸಿದ್ದಾರೆ ಅನೇಕರು. ಇಂಥ ಸಂದರ್ಭದಲ್ಲಿ ಯಾರನ್ನು ದೂರುವುದು ಎಂದು ಪ್ರಶ್ನಿಸಿದ್ದಾರೆ ಹಲವರು. ಆಸ್ಪತ್ರೆಯ ಆಡಳಿತ ಸಿಬ್ಬಂದಿಯ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ ಅನೇಕರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:26 pm, Tue, 27 December 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ