AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video : ಯಮನೇ ಒಂದು ಬಾರಿ ವಿಚಾರಿಸಿ ಹೋದಂಗಾಯ್ತು, ಈತನ ಆಯಸ್ಸು ಎಷ್ಟು ಗಟ್ಟಿಯಿದೆ ನೋಡಿ

ಸೋಶಿಯಲ್ ಮೀಡಿಯಾದಲ್ಲಿ ದಿನನಿತ್ಯ ಒಂದಲ್ಲ ಒಂದು ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಕೆಲವು ವಿಡಿಯೋಗಳನ್ನು ನೋಡಿದಾಗ ಎದೆಯಲ್ಲಿ ನಡುಕ ಉಂಟಾಗುತ್ತದೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಪುಟ್‌ಪಾತ್‌ನಲ್ಲಿ ಮಲಗಿದ್ದ ವ್ಯಕ್ತಿಯೊಬ್ಬನ ಪಕ್ಕದಲ್ಲಿ ಸಿಂಹವೊಂದು ನಡೆದುಕೊಂಡು ಹೋಗಿದ್ದು ಈ ದೃಶ್ಯವು ಎಂತಹವರ ಎದೆ ಝಲ್ ಎನಿಸುತ್ತದೆ. ಈ ವಿಡಿಯೋಗೆ ನೆಟ್ಟಿಗರು ಪ್ರತಿಕ್ರಿಯೆಗಳನ್ನು ನೀಡಿದ್ದು, ಈ ವ್ಯಕ್ತಿಯ ಅದೃಷ್ಟ ಚೆನ್ನಾಗಿದ್ದೀರಬೇಕು ಎಂದು ಕಾಮೆಂಟ್‌ಗಳನ್ನು ಮಾಡಿದ್ದಾರೆ.

ಸಾಯಿನಂದಾ
|

Updated on: Jun 08, 2025 | 12:21 PM

Share

ಮನುಷ್ಯನ ಸ್ವಾರ್ಥದಿಂದ ಕಾಡು (forest) ಸಂಪೂರ್ಣವಾಗಿ ನಾಶವಾಗಿದೆ. ಈ ಕಾಡಿನ ವಿನಾಶದಿಂದ ಅರಣ್ಯದಲ್ಲಿನ ಪ್ರಾಣಿಗಳೆಲ್ಲಾ ಆಹಾರವನ್ನರಸುತ್ತಾ ನಾಡಿನ ಕಡೆಗೆ ಬರುವುದು ಹೊಸದೇನಲ್ಲ. ಹೀಗೆ ಆಹಾರವನ್ನರಸುತ್ತಾ ಬರುವ ಈ ಪ್ರಾಣಿಗಳು ಜನರು, ಶ್ವಾನ ಮತ್ತು ದನಕರುಗಳ ಮೇಲೆ ದಾಳಿ ಮಾಡುತ್ತವೆ. ಆದರೆ ಇದೀಗ ಎದೆ ಝಲ್ ಎನಿಸುವ ವಿಡಿಯೋವೊಂದು ಸೋಶಿಯಲ್ ಮೀಡಿಯಾ (social media) ದಲ್ಲಿ ವೈರಲ್ ಆಗಿದ್ದು, ಪುಟ್‌ಪಾತ್‌ನಲ್ಲಿ ಮಲಗಿದ್ದ ವ್ಯಕ್ತಿಯೊಬ್ಬನ ಪಕ್ಕದಲ್ಲೇ ರಾಜಾರೋಷವಾಗಿ ಸಿಂಹಿಣಿಯೊಂದು ನಡೆದುಕೊಂಡು ಹೋಗಿದೆ. ಈ ಬಗ್ಗೆ ಅರಿವಿಲ್ಲದೇ ವ್ಯಕ್ತಿಯೂ ಗಾಢ ನಿದ್ರೆಯಲ್ಲಿ ಮುಳುಗಿದ್ದಾನೆ. ಈ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ ಬಳಕೆದಾರರು ಈ ದೃಶ್ಯ ಕಂಡು ಬೆಚ್ಚಿ ಬಿದ್ದಿದ್ದಾರೆ.

ವೈರಲ್  ವಿಡಿಯೋದಲ್ಲಿ ಏನಿದೆ? @KreatelyMedia ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ಈ ವಿಡಿಯೋದಲ್ಲಿ ಪುಟ್ ಪಾತ್ ನಲ್ಲಿ ವ್ಯಕ್ತಿಯೊಬ್ಬನು ಮಲಗಿರುವುದನ್ನು ಕಾಣಬಹುದು. ಆದರೆ ಇತ್ತ ಸಿಂಹಿಣಿಯೊಂದು ಅವನ ಪಕ್ಕದಲ್ಲೇ ನಡೆದುಕೊಂಡು ಹೋಗಿದ್ದು, ಆದರೆ ಇದ್ಯಾವುದರ ಪರಿವೇ ಇಲ್ಲದೇ ಆತನು ಗಡದ್ದಾಗಿ ನಿದ್ದೆ ಮಾಡುತ್ತಿದ್ದಾನೆ.

ಇದನ್ನೂ ಓದಿ
Image
ಸಮುದ್ರದ ಅಡಿಯಿಂದ ಶ್ರೀರಾಮನ ಬಿಲ್ಲನ್ನು ತೆಗೆಯಲಾಗಿದೆಯೇ?
Image
ಕೇವಲ 180 ಮೀಟರ್‌ ದೂರ ಕ್ರಮಿಸಲು ಬೈಕ್‌ ಟ್ಯಾಕ್ಸಿ ಬುಕ್‌ ಮಾಡಿದ ಯುವತಿ
Image
ಕೊಳದಲ್ಲಿ ಬಿದ್ದ ಚಿಂಕಾರವನ್ನು ರಕ್ಷಿಸಿದ ಆನೆ
Image
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ

ಇದನ್ನೂ ಓದಿ :Viral: ಕೊಳದಲ್ಲಿ ಬಿದ್ದ ಚಿಂಕಾರವನ್ನು ರಕ್ಷಿಸಿದ ಆನೆ; ಗಜರಾಜನ ಒಳ್ಳೆಯತನಕ್ಕೆ ಒಂದು ಮೆಚ್ಚುಗೆ ಇರಲಿ

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಜೂನ್ 7 ರಂದು ಶೇರ್ ಮಾಡಲಾದ ಈ ವಿಡಿಯೋ 1.2 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು ಬಳಕೆದಾರರು ಕಾಮೆಂಟ್ ಗಳನ್ನು ಮಾಡಿದ್ದಾರೆ. ಒಬ್ಬ ಬಳಕೆದಾರರು, ಇದು ಎಐನಿಂದ ರಚಿಸಲಾದ ವಿಡಿಯೋ ಎಂದಿದ್ದಾರೆ. ಮತ್ತೊಬ್ಬರು, ಆ ವ್ಯಕ್ತಿಯೂ ಈ ವಿಡಿಯೋ ನೋಡಿದರೆ ಇನ್ನು ಜನ್ಮದಲ್ಲಿಯೂ ಈ ಪುಟ್ ಪಾತ್ ನಲ್ಲಿ ಮಲಗುವ ಸಾಹಸಕ್ಕೆ ಕೈ ಹಾಕಲ್ಲ ಎಂದು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ. ಇನ್ನೊಬ್ಬ ಬಳಕೆದಾರ, ಈ ಸ್ಥಳ ಗುಜರಾತ್ ಆಗಿರಬೇಕು, ಅಲ್ಲಿ ಇಂತಹ ದೃಶ್ಯಗಳು ಆಗಾಗ ಕಾಣಸಿಗುತ್ತದೆ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ