Viral: ನಮ್‌ ಮರಿಗಳ ತಂಟೆಗೆ ಬಂದ್ರೆ ಜೋಕೆ; ಕಾಡಿನ ರಾಜನನ್ನೇ ಅಟ್ಟಾಡಿಸಿಕೊಂಡು ಹೋದ ಸಿಂಹಿಣಿಯರು

ಪ್ರಾಣಿ ಸಾಮ್ರಾಜ್ಯಗಳಿಗೆ ಸಂಬಂಧಿಸಿದ ಕುತೂಹಲಕಾರಿ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಪ್ರತಿನಿತ್ಯ ಕಾಣ ಸಿಗುತ್ತಿರುತ್ತವೆ. ಅವುಗಳಲ್ಲಿ ಕೆಲವು ದೃಶ್ಯಗಳು ಹಾಸ್ಯಮಯವಾಗಿದ್ದರೆ, ಇನ್ನೂ ಕೆಲವು ದೃಶ್ಯಗಳು ಬೆಚ್ಚಿ ಬೀಳಿಸುತ್ತವೆ. ಇದೀಗ ಅಂತಹದ್ದೇ ವಿಡಿಯೋವೊಂದು ವೈರಲ್‌ ಆಗಿದ್ದು, ನಮ್‌ ಮರಿಗಳ ತಂಟೆಗೆ ಬಂದ್ರೆ ಜಾಗ್ರತೆ ಎಂದು ಸಿಂಹಿಣಿಯರ ಗುಂಪೊಂದು ಒಂಟಿ ಸಿಂಹದ ಮೇಲೆ ದಾಳಿ ನಡೆಸಿವೆ. ಈ ಶಾಕಿಂಗ್‌ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 01, 2025 | 5:05 PM

ಕಾಡಿನ ರಾಜ ಸಿಂಹ ತುಂಬಾನೇ ಬಲಿಷ್ಟ ಪ್ರಾಣಿ. ಈ ಸಿಂಹಗಳೇ ಕಾಡಿನ ಇತರ ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿರುತ್ತವೆ. ಇವುಗಳ ಘರ್ಜನೆಯನ್ನು ಕೇಳಿದ್ರೆ ಸಾಕು ಇತರ ಪ್ರಾಣಿಗಳು ಓಡಿ ಹೋಗುತ್ತವೆ. ಹೀಗೆ ಕಾಡಿನ ರಾಜ ಇತರ ಪ್ರಾಣಿಗಳ ಮೇಲೆ ಅಟ್ಯಾಕ್‌ ಮಾಡುವಂತಹ ಶಾಕಿಂಗ್‌ ದೃಶ್ಯಗಳನ್ನು ನೋಡಿರುತ್ತೀರಿ ಅಲ್ವಾ. ಆದ್ರೆ ನೀವು ಎಂದಾದರೂ ಸಿಂಹದ ಮೇಲೆ ಸಿಂಹಿಣಿ ದಾಳಿ ನಡೆಸುವುದನ್ನು ನೋಡಿದ್ದೀರಾ? ಇದೀಗ ಇಲ್ಲೊಂದು ಇಂತಹ ವಿಡಿಯೋ ವೈರಲ್‌ ಆಗಿದ್ದು, ಸಿಂಹಿಣಿಯರ ಗುಂಪೊಂದು ಒಂಟಿ ಸಿಂಹದ ಮೇಲೆ ಅಟ್ಯಾಕ್‌ ಮಾಡಿವೆ. ಹೌದು ನಮ್‌ ಮಕ್ಕಳ ತಂಟೆಗೆ ಬಂದ್ರೆ ಹುಷಾರ್‌ ಎನ್ನುತ್ತಾ ಮರಿಗಳನ್ನು ಜೋಪಾನ ಮಾಡುವ ಸಲುವಾಗಿ ಸಿಂಹವನ್ನು ಸಿಂಹಿಣಿಯರ ತಂಡ ಅಟ್ಟಾಡಿಸಿಕೊಂಡು ಹೋಗಿವೆ.

ಸಿಂಹಿಣಿಯರ ಗುಂಪೊಂದು ತಮ್ಮ ಮರಿಗಳ ಜೊತೆ ಕುಳಿತು ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಒಂಟಿ ಸಿಂಹವೊಂದು ಅಲ್ಲಿಗೆ ಎಂಟ್ರಿ ಕೊಟ್ಟಿದ್ದು, ಇದು ಮರಿಗಳ ಮೇಲೆ ದಾಳಿ ಮಾಡಿದ್ರೆ ಏನಪ್ಪಾ ಮಾಡೋದು ಎಂದು ಸಿಂಹಿಣಿಯರು ಮರಿಗಳನ್ನು ರಕ್ಷಿಸುವ ಸಲುವಾಗಿ ಆ ಸಿಂಹವನ್ನು ಅಟ್ಟಾಡಿಸಿಕೊಂಡು ಹೋಗಿವೆ. ಇವುಗಳ ದಾಳಿಗೆ ಎದರಿ ಕಾಡಿನ ರಾಜ ಭಯದಿಂದ ಕಾಲ್ಕಿತ್ತಿದೆ.

ಈ ಕುರಿತ ವಿಡಿಯೋವನ್ನು AMAZINGNATURE ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಸಿಂಹಿಣಿಯರ ಗುಂಪು ಒಂಟಿ ಸಿಂಹವನ್ನು ಅಟ್ಟಾಡಿಸಿಕೊಂಡು ಹೋಗುತ್ತಿರುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ವಿವಾಹಿತ ಮಹಿಳೆಯೊಂದಿಗೆ ಯುವಕನ ರೊಮ್ಯಾನ್ಸ್; ಗಂಡನ ಕೈಯಿಂದ ಹೆಂಡ್ತಿ ಲವರ್‌ಗೆ ಬಿತ್ತು ಗೂಸಾ

ಜನವರಿ 1 ರಂದು ಹಂಚಿಕೊಳ್ಳಲಾದ ಈ ವಿಡಿಯೋ 8.4 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಈ ದೃಶ್ಯವಂತೂ ತುಂಬಾನೇ ಅದ್ಭುತವಾಗಿದೆʼ ಎಂದು ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼತಾಯಂದಿರೇ ಹಾಗೇ ತಮ್ಮ ಮಕ್ಕಳಿಗೆ ಯಾರು ತೊಂದ್ರೆ ಕೊಟ್ಟರೂ ಸುಮ್ನೆ ಇರೋಲ್ಲʼ ಎಂದು ಹೇಳಿದ್ದಾರೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು