AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಪರಿಚಿತ ವ್ಯಕ್ತಿ ನೀಡಿದ ಚಾಕಲೇಟ್​ಗೆ ಮಕ್ಕಳ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ? ವಿಡಿಯೋ ನೋಡಿ

ಸಾಮಾಜಿಕ ಜಾಲತಾಣದಲ್ಲಿ ಸದ್ಯ ಈ ವಿಡಿಯೋ ವೈರಲ್ ಆಗಿದ್ದು, 8.3 ಮಿಲಿಯನ್ ವಿವ್ಸ್ ಪಡೆದಿದೆ. ನೆಟ್ಟಿಗರು ಕಮೆಂಟ್ ಮೂಲಕ ಶ್ಲಾಘಿಸಿದ್ದಾರೆ. ಅವರ ಅಮೂಲ್ಯವಾದ ನಗುವನ್ನು ನೋಡಿದ ನಂತರ, ಕಣ್ಣುಗಳಿಂದ ಕಣ್ಣೀರು ಹರಿಯುತ್ತಿದೆ ಎಂದು ಕಮೆಂಟ್ ಮಾಡಿದ್ದಾರೆ.

Viral Video: ಅಪರಿಚಿತ ವ್ಯಕ್ತಿ ನೀಡಿದ ಚಾಕಲೇಟ್​ಗೆ ಮಕ್ಕಳ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ? ವಿಡಿಯೋ ನೋಡಿ
ಪುಟಾಣಿ ಮಕ್ಕಳಿಗೆ ಚಾಕ್ಲೇಟ್​ ನೀಡಿದ ದೃಶ್ಯ
TV9 Web
| Edited By: |

Updated on: Dec 01, 2021 | 9:43 AM

Share

ಎಲ್ಲಿಯವರೆಗೂ ಕರುಣೆ, ದಯೆ ಅಥವಾ ಇನ್ನೊಬ್ಬರ ನೋವಿಗೆ ಸ್ಪಂದಿಸುವ ಗುಣ ನಮ್ಮಲ್ಲಿರುತ್ತದೆಯೋ ಅಲ್ಲಿಯವರೆಗೂ ಈ ಜಗತ್ತು ಹೆಚ್ಚು ಸುಂದರವಾಗಿರುತ್ತದೆ. ನಮ್ಮ ಮೊಗದಲ್ಲಿರುವ ಖುಷಿಯನ್ನು ನಾವು ಇನ್ನೊಬ್ಬರೊಂದಿಗೂ ಕೂಡ ಹಂಚಿಕೊಳ್ಳಬೇಕು. ಆಗ ಮಾತ್ರ ನೆಮ್ಮದಿ ಸಾಧ್ಯ ಎನ್ನುವ ಮಾತಿದೆ ಮತ್ತು ಇಂತಹ ಕಾರ್ಯಗಳಿಂದ ನಮ್ಮ ಮನಸ್ಸಿಗೆ ಕೂಡ ಹೆಚ್ಚು ಖುಷಿ ಸಿಗುತ್ತದೆ. ಈ ಮಾತಿಗೆ ಪುಷ್ಠಿ ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ವೈರಲ್ ಆಗಿದೆ. ರಸ್ತೆಗಳಲ್ಲಿ ಆಭರಣಗಳನ್ನು ಮಾರಾಟ ಮಾಡುವ ಇಬ್ಬರು ಪುಟಾಣಿ ಮಕ್ಕಳಿಗೆ ಚಾಕಲೇಟ್ (chocolate)​ ನೀಡಿದ್ದು, ಆ ಮುಗ್ದ ಮನಸ್ಸುಗಳ ಮೊಗದಲ್ಲಿ ಮಂದಹಾಸ ಉಂಟುಮಾಡಿದೆ. ಸದ್ಯ ಈ ದೃಶ್ಯವನ್ನು ಕಂಡ ನೆಟ್ಟಿಗರು ಕೂಡ ಮೆಚ್ಚಿಕೊಂಡಿದ್ದಾರೆ.

ಚೀಸ್ ಅಡಿಕ್ಟ್ (the Cheese Addict) ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಪೋಸ್ಟ್ ಮಾಡಲಾಗಿದೆ. ಅದರಲ್ಲಿ ಇಬ್ಬರು ಚಿಕ್ಕ ಹುಡುಗರು ತಮ್ಮ ಕುತ್ತಿಗೆಗೆ ನೇತಾಡುವ ಪ್ಲಾಸ್ಟಿಕ್ ಬುಟ್ಟಿಯನ್ನು ಹಾಕಿಕೊಂಡು ನಿತ್ಯ ಬಳಸುವ ಕೃತಕ ಆಭರಣಗಳ ಪ್ಯಾಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದರು. ಇದನ್ನು ಕಂಡ ವ್ಯಕ್ತಿಯೊಬ್ಬರು ಇಬ್ಬರಿಗೂ ಚಾಕಲೇಟ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದನ್ನು ಸ್ವೀಕರಿಸಿದ ನಂತರ ಆ ಮಕ್ಕಳ ಮುಖದಲ್ಲಿ ಅರಳಿದ ನಗು ಸದ್ಯ ಎಲ್ಲರನ್ನು ಆಕರ್ಷಿಸಿದೆ.

ಈ ರೀತಿಯ ಅನುಭವವನ್ನು ನಾನು ಎಂದಿಗೂ ಪಡೆದಿಲ್ಲ. ಹೀಗೆ ಉತ್ತಮ ಕಾರ್ಯಗಳನ್ನು ಮಾಡಲು ನಾನು ನಿಮಗೂ ಈ ಮೂಲಕ ಕೇಳುತ್ತಿದ್ದೇನೆ. ಚಿಕ್ಕದಾಗಿರಬಹುದು ಅಥವಾ ದೊಡ್ಡ ಮಟ್ಟದಲ್ಲಾಗಿರಬಹುದು ಆದಷ್ಟು ಇತರರಿಗೆ ನೆರವಾಗಿ ಎಂಬ ಶೀರ್ಷಿಕೆಯೊಂದಿಗೆ ಈ ವಿಡಿಯೋವನ್ನು ಪೋಸ್ಟ್ ಮಾಡಲಾಗಿದೆ.

View this post on Instagram

A post shared by @thecheeseaddict_2193

ಸಾಮಾಜಿಕ ಜಾಲತಾಣದಲ್ಲಿ ಸದ್ಯ ಈ ವಿಡಿಯೋ ವೈರಲ್ ಆಗಿದ್ದು, 8.3 ಮಿಲಿಯನ್ ವಿವ್ಸ್ ಪಡೆದಿದೆ. ನೆಟ್ಟಿಗರು ಕಮೆಂಟ್ ಮೂಲಕ ಶ್ಲಾಘಿಸಿದ್ದಾರೆ. ಅವರ ಅಮೂಲ್ಯವಾದ ನಗುವನ್ನು ನೋಡಿದ ನಂತರ, ಕಣ್ಣುಗಳಿಂದ ಕಣ್ಣೀರು ಹರಿಯುತ್ತಿದೆ ಎಂದು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: Samantha: ಡಿವೋರ್ಸ್​ ಬಳಿಕ ಸಮಂತಾ ಗುಡ್​ ನ್ಯೂಸ್​; ಇಂಗ್ಲಿಷ್​ ಸಿನಿಮಾ ನಿರ್ದೇಶಕನನ್ನು ತಬ್ಬಿಕೊಂಡ ಫೋಟೋ ವೈರಲ್​

Viral Video: ಹೇರ್ ಡ್ರೈಯರ್ ಬದಲು ಕುಕ್ಕರ್​ ಬಳಸಿದ ಯುವಕ; ಅಪರೂಪದ ವಿಡಿಯೋ ನೋಡಿ ಅಚ್ಚರಿಗೊಂಡ ನೆಟ್ಟಿಗರು!

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ