AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಇದು 90ರ ದಶಕದ ಸವಿ ನೆನಪು; ಅಡುಗೆ ಮನೆಯಾಟ ಆಡಿ ಖುಷಿ ಪಟ್ಟ ಪುಟಾಣಿಗಳು

ನಾವು ಸಣ್ಣವರು ಇದ್ದಾಗ ಆಡುತ್ತಿದ್ದ ಅದೆಷ್ಟೋ ಆಟಗಳ ಬಗ್ಗೆ ಈಗಿನ ಮಕ್ಕಳಿಗೆ ತಿಳಿದೇ ಇಲ್ಲ. ಅಂದು ಶಾಲೆ ಬಿಟ್ಟ ಕೂಡಲೇ ಮನೆಗೆ ಬಂದು ನಾನಾ ರೀತಿಯ ಆಟಗಳನ್ನು ಆಡುತ್ತಿದ್ದೆವು. ಇದೀಗ ಬಾಲ್ಯ ನೆನೆಪಿಸುವ ವಿಡಿಯೋವೊಂದು ಸದ್ಯ ವೈರಲ್ ಆಗಿದೆ. ಪುಟಾಣಿಗಳು ಅಡುಗೆ ಮನೆಯಾಟ ಆಡಿ ಸಂಭ್ರಮಿಸಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಇದು 90ರ ದಶಕದ ಸವಿ ನೆನಪು; ಅಡುಗೆ ಮನೆಯಾಟ ಆಡಿ ಖುಷಿ ಪಟ್ಟ ಪುಟಾಣಿಗಳು
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Sep 17, 2026 | 6:09 PM

Share

ಸಿಟಿಯಲ್ಲಿ ಬೆಳೆದ ಮಕ್ಕಳಿಗೆ ಸೊಪ್ಪಾಟ, ಚೊಂಕಾಟ, ಕೆರೆದಡ, ಹುಲಿದನ ಹಾಗೂ ಅಡುಗೆಯಾಟ ಇದ್ಯಾವುದು ತಿಳಿದೇ ಇಲ್ಲ. ಆದರೆ, ಈ ಹಳ್ಳಿಯ ಕೆಲ ಮಕ್ಕಳು ಈ ಆಟಗಳನ್ನೆಲ್ಲಾ (games) ಇವತ್ತಿಗೂ ಆಡುತ್ತಾರೆ. ಈ ವಿಡಿಯೋ ನೋಡಿದ್ರೆ ನಿಮಗೆ ಖಂಡಿತ ನಿಮ್ಮ ಬಾಲ್ಯ ನೆನಪಾಗುತ್ತದೆ. ಇದೀಗ ಸೀರೆಯಿಂದ ಪುಟ್ಟ ಮನೆ ಕಟ್ಟಿಕೊಂಡು ಪುಟಾಣಿಗಳೆಲ್ಲ ಸೇರಿ ಅಡುಗೆ ಆಟ ಆಡುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೆಟ್ಟಿಗರ ಗಮನ ಸೆಳೆದಿದೆ.

ಅಡುಗೆಯಾಟ ಆಡಿ ಖುಷಿ ಪಟ್ಟ ಪುಟಾಣಿಗಳು

ದೋಮ್ ಅಮೀನ್ (dom.ameen) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಹಚ್ಚ ಹಸಿರಿನ ನಡುವೆ ಪುಟ್ಟ ಮನೆ ಕಟ್ಟಿ, ಅಡುಗೆಯಾಟ ಆಡಿ ಸಂಭ್ರಮಿಸಿದ್ದಾರೆ. ಸೀರೆಯಿಂದ ಕಟ್ಟಿದ ಪುಟ್ಟ ಮನೆ, ತೆಂಗಿನ ಗೆರಟೆಗಳೇ ಪಾತ್ರೆಗಳ ಜಾಗ ತುಂಬಿದೆ. ಬಾಲ್ಯವನ್ನು ನೆನಪಿಸುವ ಈ ದೃಶ್ಯವನ್ನು ವ್ಯಕ್ತಿಯೊಬ್ಬರು ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ.

ವೈರಲ್‌ ವಿಡಿಯೋ ಇಲ್ಲಿದೆ

ಇದನ್ನೂ ಓದಿ: “ನಾವು ಚೈನೀಸ್ ಅಲ್ಲ, ಭಾರತೀಯರು”: 4 ವರ್ಷದ ಪುಟಾಣಿ ನೀಡಿದ ಖಡಕ್ ಉತ್ತರ ವೈರಲ್

ಈ ವಿಡಿಯೋ 1.2 ಮಿಲಿಯನ್ ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಬಾಲ್ಯ ನೆನಪಾಯ್ತು ಎಂದಿದ್ದಾರೆ. ಮತ್ತೊಬ್ಬರು, ನವು ಯಾಕೆ ಬೇಗ ದೊಡ್ಡದಾದೆವು, ಆ ದಿನಗಳೇ ಚೆನ್ನಾಗಿತ್ತು ಎಂದು ಹೇಳಿದ್ದಾರೆ. ಇನ್ನೊಬ್ಬರು, ಆ ದಿನಗಳೇ ಚಂದ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ