AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Love Story: ಕತ್ತಲೆಯಲ್ಲಿ ಪ್ರೇಯಸಿಯನ್ನು ಭೇಟಿಯಾಗಲು ಇಡೀ ಗ್ರಾಮದ ಕರೆಂಟ್ ತೆಗೆದ ಭೂಪ; ಕೋಪಗೊಂಡ ಜನರು ಮಾಡಿದ್ದೇನು?

Viral News: ಕೆಲವು ತಿಂಗಳುಗಳಿಂದ ಆ ಗ್ರಾಮದ ಜನರು ಆಗಾಗ ವಿದ್ಯುತ್ ಕಡಿತವನ್ನು ಅನುಭವಿಸುತ್ತಿದ್ದರು. ಇದಕ್ಕೆ ನಿಖರವಾದ ಸಮಸ್ಯೆ ಏನೆಂದು ಕಂಡುಹಿಡಿಯಲು ಅವರು ನಿರ್ಧರಿಸಿದರು. ಆಗ ಅಚ್ಚರಿಯ ಸಂಗತಿ ಬೆಳಕಿಗೆ ಬಂದಿದೆ.

Love Story: ಕತ್ತಲೆಯಲ್ಲಿ ಪ್ರೇಯಸಿಯನ್ನು ಭೇಟಿಯಾಗಲು ಇಡೀ ಗ್ರಾಮದ ಕರೆಂಟ್ ತೆಗೆದ ಭೂಪ; ಕೋಪಗೊಂಡ ಜನರು ಮಾಡಿದ್ದೇನು?
ಸಾಂದರ್ಭಿಕ ಚಿತ್ರImage Credit source: India.com
TV9 Web
| Edited By: |

Updated on:May 11, 2022 | 4:24 PM

Share

ಪ್ರೀತಿಯಲ್ಲಿದ್ದಾಗ ಜನರು ಕೆಲವೊಮ್ಮೆ ಹುಚ್ಚರಂತೆ ವರ್ತಿಸುತ್ತಾರೆ. ಪ್ರೀತಿಗಾಗಿ ಚಂದ್ರನನ್ನು ಬೇಕಾದರೂ ತಂದುಕೊಡುತ್ತೇನೆ, ನಕ್ಷತ್ರವನ್ನು ಬೇಕಾದರೂ ಹಿಡಿದುಕೊಡುತ್ತೇನೆ, ಪ್ರಾಣ ಬೇಕಾದರೂ ಬಿಡುತ್ತೇನೆ ಎಂದು ಹೇಳುವವರು ಬೇಕಾದಷ್ಟು ಜನರಿದ್ದಾರೆ. ಜನರು ಪ್ರೀತಿಯಲ್ಲಿದ್ದಾಗ ಎಲ್ಲಾ ರೀತಿಯ ಹುಚ್ಚುತನದ ಕೆಲಸಗಳನ್ನು ಮಾಡುತ್ತಾರೆ. ಆದರೆ, ಅವರ ಕಾರ್ಯಗಳು ಇತರರಿಗೆ ಹಾನಿಯಾಗಬಹುದು ಎಂಬುದನ್ನು ಮರೆತುಬಿಡುತ್ತಾರೆ. ಬಿಹಾರದ (Bihar) ಪುರ್ನಿಯಾದಲ್ಲಿ ನಡೆದ ಒಂದು ವಿಲಕ್ಷಣ ಘಟನೆಯಲ್ಲಿ, ಕತ್ತಲೆಯಲ್ಲಿ ತನ್ನ ಪ್ರೇಯಸಿಯನ್ನು ಭೇಟಿಯಾಗಿ ಸರ್​ಪ್ರೈಸ್ ಕೊಡಲು ಎಲೆಕ್ಟ್ರಿಷಿಯನ್ ಒಬ್ಬ ಹಳ್ಳಿಯೊಂದಕ್ಕೆ ವಿದ್ಯುತ್ ಪೂರೈಕೆಯನ್ನೇ (Power Supply) ಕಡಿತಗೊಳಿಸಿದ ಘಟನೆ ನಡೆದಿದೆ.

ಪುರ್ನಿಯಾ ಜಿಲ್ಲೆಯ ಗಣೇಶ್‌ಪುರ ಗ್ರಾಮದ ಜನರು ಅಕ್ಕಪಕ್ಕದ ಹಳ್ಳಿಗಳಲ್ಲಿ ಯಾವುದೇ ವಿದ್ಯುತ್ ಸಮಸ್ಯೆಯಿಲ್ಲ ಎಂದು ಗೊತ್ತಾದ ಬಳಿಕ ಜನರು ಇದರ ಹಿನ್ನೆಲೆಯಲ್ಲಿ ಭೇದಿಸಿದಾಗ ಇದೆಲ್ಲದರ ಹಿಂದೆ ಎಲೆಕ್ಟ್ರಿಷಿಯನ್‌ನ ಕೈವಾಡ ಇರುವುದು ಗೊತ್ತಾಗಿದೆ. ಕೆಲವು ತಿಂಗಳುಗಳಿಂದ ಆ ಗ್ರಾಮದ ಜನರು ಆಗಾಗ ವಿದ್ಯುತ್ ಕಡಿತವನ್ನು ಅನುಭವಿಸುತ್ತಿದ್ದರು. ಇದಕ್ಕೆ ನಿಖರವಾದ ಸಮಸ್ಯೆ ಏನೆಂದು ಕಂಡುಹಿಡಿಯಲು ಅವರು ನಿರ್ಧರಿಸಿದರು. ಅವರು ವಿಷಯವನ್ನು ಪರಿಶೀಲಿಸಿದ ನಂತರ, ಎಲೆಕ್ಟ್ರಿಷಿಯನ್ ತನ್ನ ಗೆಳತಿಯನ್ನು ಕತ್ತಲೆಯಲ್ಲಿ ಭೇಟಿಯಾಗಲು ಹಳ್ಳಿಯ ವಿದ್ಯುತ್ ಸರಬರಾಜನ್ನು ಕಡಿತಗೊಳಿಸಿದ್ದಾನೆ ಎಂದು ತಿಳಿದು ಆಘಾತಕ್ಕೊಳಗಾದರು. ನಂತರ ಗ್ರಾಮಸ್ಥರು ಆತನನ್ನು ಹಿಡಿಯಲು ಯೋಜನೆ ರೂಪಿಸಿ, ಆ ಎಲೆಕ್ಟ್ರಿಷಿಯನ್​ನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. (Source)

ಈ ಘಟನೆಯಿಂದ ಕೋಪಗೊಂಡ ಗ್ರಾಮಸ್ಥರು ಎಲೆಕ್ಟ್ರಿಷಿಯನ್‌ಗೆ ಥಳಿಸಿದರು. ಅಲ್ಲಿ ಗಲಾಟೆ ಮಾಡಿ ಗ್ರಾಮದಲ್ಲಿ ಮೆರವಣಿಗೆ ಮಾಡಲಾಯಿತು. ಇದಕ್ಕೆ ಪರಿಹಾರ ಕಂಡುಕೊಳ್ಳಲು ಗ್ರಾಮಸ್ಥರು ಸರಪಂಚ್ ಹಾಗೂ ಇತರ ಗ್ರಾಮಸಭೆ ಸದಸ್ಯರ ಸಮ್ಮುಖದಲ್ಲಿ ಆತನ ಗೆಳತಿಯೊಂದಿಗೆ ವಿವಾಹವಾಗುವಂತೆ ಮಾಡಿದರು. ಇದರಿಂದಾದರೂ ಆತ ಇನ್ನು ತಮ್ಮ ಊರಿನಲ್ಲಿ ಕರೆಂಟ್ ಕಟ್ ಮಾಡುವುದನ್ನು ನಿಲ್ಲಿಸಬಹುದು ಎಂಬುದು ಅವರ ಉದ್ದೇಶವಾಗಿತ್ತು.

ಇದನ್ನೂ ಓದಿ
Image
Smriti Irani: ವೈರಲ್ ವಿಡಿಯೋ ಹಂಚಿಕೊಂಡು ಕುತೂಹಲಕಾರಿ ಕ್ಯಾಪ್ಶನ್ ನೀಡಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ
Image
Viral Video: 28 ಹೆಂಡತಿಯರು, 135 ಮಕ್ಕಳು, 126 ಮೊಮ್ಮಕ್ಕಳ ಮುಂದೆ 37ನೇ ಮದುವೆಯಾದ ವೃದ್ಧ; ವಿಡಿಯೋ ವೈರಲ್!
Image
Viral Video: ಚೆನಾಬ್ ನದಿಯಲ್ಲಿ ಸಿಲುಕಿದ್ದ ಯುವಕರನ್ನು ಪ್ರಾಣದ ಹಂಗು ತೊರೆದು ಕಾಪಾಡಿದ ಸೈನಿಕರು; ವಿಡಿಯೋ ವೈರಲ್
Image
Viral News: ಮದುವೆಯಲ್ಲಿ ಹಾಡಿನ ವಿಚಾರಕ್ಕೆ ಗಲಾಟೆ; ಅತಿಥಿಗೆ ಶೂಟ್ ಮಾಡಿ ಕೊಂದ ಮದುಮಗ!

“ಸರಪಂಚ್ ಮತ್ತು ಇತರ ಗ್ರಾಮ ಕೌನ್ಸಿಲ್ ಸದಸ್ಯರ ಸಮ್ಮುಖದಲ್ಲಿ ವ್ಯಕ್ತಿ ಹುಡುಗಿಯನ್ನು ಮದುವೆಯಾಗಿದ್ದಾನೆ” ಎಂದು ಗ್ರಾಮಸ್ಥ ಮಾರಾರ್ ರಾಮ್ ಮುರ್ಮು ಗುರುವಾರ ಸ್ಥಳೀಯ ಮಾಧ್ಯಮಕ್ಕೆ ತಿಳಿಸಿದ್ದಾರೆ. ಗ್ರಾಮಸ್ಥರು ಎಲೆಕ್ಟ್ರಿಷಿಯನ್ ವಿರುದ್ಧ ಯಾವುದೇ ಪೊಲೀಸ್ ಕೇಸ್ ದಾಖಲಿಸಿಲ್ಲ ಮತ್ತು ದೂರು ಬಂದರೆ ಮಾತ್ರ ಕ್ರಮಕೈಗೊಳ್ಳುವುದಾಗಿ ಪೊಲೀಸರು ಹೇಳಿದ್ದಾರೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:22 pm, Wed, 11 May 22

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ