AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕಾಲೇಜ್ ಬಂಕ್ ಮಾಡಿ ಗಲ್ಲಿಯಲ್ಲಿ ರೊಮ್ಯಾನ್ಸ್ ಮಾಡ್ತಾ ನಿಂತ ಸ್ಟೂಡೆಂಟ್

ಈಗಿನ ಕೆಲ ಯುವಕ ಯುವತಿಯರು ಸಾರ್ವಜನಿಕ ಸ್ಥಳಗಳಲ್ಲಿ ಅತಿರೇಕವಾಗಿ ವರ್ತಿಸುವ ಮೂಲಕ ಸಾರ್ವಜನಿಕರಿಗೆ ಮುಜುಗರವಾಗುವಂತೆ ನಡೆದುಕೊಳ್ಳುತ್ತಾರೆ. ಇಂತಹ ಸಾಕಷ್ಟು ವಿಡಿಯೋಗಳು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಆದರೆ ಇದೀಗ ಹಾಡಹಗಲೇ ನಡುಬೀದಿಯಲ್ಲಿ ಜೋಡಿ ಹಕ್ಕಿಗಳು ರೋಮ್ಯಾನ್ಸ್ ಮಾಡುತ್ತಿದ್ದು, ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

Video: ಕಾಲೇಜ್ ಬಂಕ್ ಮಾಡಿ ಗಲ್ಲಿಯಲ್ಲಿ ರೊಮ್ಯಾನ್ಸ್ ಮಾಡ್ತಾ ನಿಂತ ಸ್ಟೂಡೆಂಟ್
ವೈರಲ್ ವಿಡಿಯೋImage Credit source: Twitter
ಸಾಯಿನಂದಾ
|

Updated on:Jun 05, 2025 | 4:02 PM

Share

ಪ್ರೀತಿ (love) ಕುರುಡು, ಈ ಪ್ರೀತಿಯಲ್ಲಿ ಬಿದ್ದವರಿಗೆ ಲೋಕ ಪರಿಜ್ಞಾನವೇ ಇಲ್ಲದೇ ತಮ್ಮದೇ ಲೋಕದಲ್ಲಿ ವಿಹರಿಸುತ್ತಾರೆ ಎಂದು ಹೇಳುವುದನ್ನು ನೀವು ಕೇಳಿರಬಹುದು. ನಮ್ಮ ಸುತ್ತಮುತ್ತಲಿನಲ್ಲಿ ನಡೆಯುವ ಕೆಲವು ಘಟನೆಗಳನ್ನು ನೋಡಿದಾಗ ಈ ಮಾತು ನಿಜವೆನಿಸುತ್ತದೆ. ಚಲಿಸುತ್ತಿರುವ ರೈಲಿನಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಕಾಲೇಜ್‌ ಕ್ಯಾಂಪಸ್‌ನಲ್ಲಿ  ಅಸಭ್ಯವಾಗಿ ವರ್ತಿಸುವ ವಿಡಿಯೋಗಳು  ಆಗಾಗ ವೈರಲ್ ಆಗುತ್ತಿರುತ್ತದೆ. ಆದರೆ ಇದೀಗ ಪ್ರೇಮಿಗಳಿಬ್ಬರ ಅತಿರೇಕದ ವರ್ತನೆಯ ವಿಡಿಯೋವೊಂದು ವೈರಲ್‌ ಆಗಿದ್ದು, ಕಾಲೇಜ್ ಬಂಕ್ ಮಾಡಿ ಪ್ರೇಮಿಗಳಿಬ್ಬರೂ ನಡುಬೀದಿಯಲ್ಲೇ ರೊಮ್ಯಾನ್ಸ್ (romance) ಮಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾ (social media) ದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಖಾರವಾಗಿಯೇ ಕಾಮೆಂಟ್ ಮಾಡಿ ಚಳಿ ಬಿಡಿಸಿದ್ದಾರೆ.

ವೈರಲ್ ವಿಡಿಯೋದಲ್ಲಿ ಏನಿದೆ?

@manojsh28986262 ಎಂಬ ಎಕ್ಸ್ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಕಾಲೇಜ್ ಬಂಕ್ ಮಾಡಿ ಪಬ್ಲಿಕ್‌ನಲ್ಲೇ  ರೊಮ್ಯಾನ್ಸ್ ಮಾಡುತ್ತಿರುವುದನ್ನು ಕಾಣಬಹುದು. ಕಿರಿದಾದ ಜನಸಂದಣಿಯಿಲ್ಲದ ಪ್ರದೇಶದಲ್ಲಿ ಯುವಕನೊಬ್ಬನು ತನ್ನ ಗೆಳತಿಯನ್ನು ಅಪ್ಪಿಕೊಳ್ಳುತ್ತಿರುವುದನ್ನು ಕಾಣಬಹುದು. ಆ ಬಳಿಕ ಯುವಕನು ಯುವತಿಯನ್ನು ಎತ್ತಿಕೊಂಡು ತಿರುಗಿಸಿದ್ದು, ಈ ದೃಶ್ಯವನ್ನು ಅಲ್ಲಿನ ನಿವಾಸಿಗಳು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.

ಇದನ್ನೂ ಓದಿ
Image
ಅಪ್ಪನಿಗೆ ನೆರಳಾದ ಮುದ್ದಿನ ಮಗಳು
Image
ನಮ್ಮ ಜನರೇಷನ್‌ ಲಕ್ಕಿ ಎನ್ನಲು ಇವೆ ಕಾರಣ ನೋಡಿ
Image
ಆರ್‌ಸಿಬಿ ಗೆದ್ದ ಖುಷಿಗೆ ಪಬ್ಲಿಕ್‌ನಲ್ಲಿ ಕಿಸ್ ಮಾಡಿದ ಪ್ರೇಮಿಗಳು
Image
ಪ್ಲೀಸ್ ನನ್ನ ಬಿಟ್ಟೋಗ್ಬೇಡ, ನಿನ್ನ ಜತೆ ನಾನು ಬರ್ತೀನಿ

ಇದನ್ನೂ ಓದಿ : ಆರ್‌ಸಿಬಿ ಗೆದ್ದ ಖುಷಿಗೆ ಪಬ್ಲಿಕ್‌ನಲ್ಲಿ ಲಿಪ್ ಟು ಲಿಪ್ ಕಿಸ್ ಮಾಡಿದ ಪ್ರೇಮಿಗಳು

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಜೂನ್ 2 ರಂದು ಶೇರ್ ಮಾಡಲಾದ ಈ ವಿಡಿಯೋವೊಂದು ಈಗಾಗಲೇ ಮೂರು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, ಬಳಕೆದಾರರು ಖಾರವಾಗಿಯೇ ಕಾಮೆಂಟ್ ಮಾಡಿದ್ದಾರೆ. ಬಳಕೆದಾರರೊಬ್ಬರು, ಇದು ಅವರವರ ವೈಯುಕ್ತಿಕ ಸಮಸ್ಯೆ, ನಿಮಗೇನು ಸಮಸ್ಯೆ ಎಂದಿದ್ದಾರೆ. ಮತ್ತೊಬ್ಬರು, ಈಗ ಇವನಿಗೆ ಸಿಲಿಂಡರ್ ಎತ್ತಲು ಹೇಳಿದರೆ ಅಳುತ್ತಾನೆ, ಆದರೆ ಆ ಹುಡುಗಿಯನ್ನು ಹೇಗೆ ಎತ್ತುತ್ತಿದ್ದಾನೆ ನೋಡಿ ಎಂದು ಕಾಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು, ಭಾರತದಲ್ಲಿ ಮಾತ್ರ ಈ ರೀತಿ ನಡೆಯಲು ಸಾಧ್ಯ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿ ಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:59 pm, Thu, 5 June 25

Follow Us
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ