AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನೆರೆಹೊರೆಯವರಿಂದ ಜೀವ ಬೆದರಿಕೆ; ರಕ್ಷಣೆಗಾಗಿ ಹೆಲ್ಮೆಟ್‌ಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ ವ್ಯಕ್ತಿ

ಸೋಷಿಯಲ್‌ ಮೀಡಿಯಾದಲ್ಲಿ ಪ್ರತಿನಿತ್ಯ ಹಲವಾರು ವಿಡಿಯೋಗಳು ಹರಿದಾಡುತ್ತಿರುತ್ತವೆ. ಅವುಗಳಲ್ಲಿ ಕೆಲವೊಂದು ದೃಶ್ಯಗಳನ್ನು ಕಂಡಾಗ ಇದೇನಪ್ಪಾ ವಿಚಿತ್ರ ಎಂದು ಭಾಸವಾಗುತ್ತದೆ. ಇದೀಗ ಇಂತಹದ್ದೊಂದು ವಿಡಿಯೋ ವೈರಲ್‌ ಆಗಿದ್ದು, ವ್ಯಕ್ತಿಯೊಬ್ಬ ಹೆಲ್ಮೆಟ್‌ಗೆ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿ ಓಡಾಡುವ ಮೂಲಕ ಗಮನ ಸೆಳೆದಿದ್ದಾನೆ. ನೆರೆಹೊರೆಯವರಿಂದ ಜೀವ ಬೆದರಿಕೆ ಇರುವ ಕಾರಣ ನನ್ನ ರಕ್ಷಣೆಗಾಗಿ ಈ ರೀತಿ ಮಾಡಿದ್ದು ಎಂದು ಆತ ಹೇಳಿಕೊಂಡಿದ್ದಾನೆ.

Video: ನೆರೆಹೊರೆಯವರಿಂದ ಜೀವ ಬೆದರಿಕೆ; ರಕ್ಷಣೆಗಾಗಿ ಹೆಲ್ಮೆಟ್‌ಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ ವ್ಯಕ್ತಿ
ಹೆಲ್ಮೆಟ್‌ಗೆ ಸಿಸಿಟಿವಿ ಅಳವಡಿಸಿ ಓಡಾಡುತ್ತಿರುವ ವ್ಯಕ್ತಿ Image Credit source: Social Media
ಮಾಲಾಶ್ರೀ ಅಂಚನ್​
|

Updated on:Jul 14, 2025 | 3:18 PM

Share

ಮಧ್ಯಪ್ರದೇಶ, ಜುಲೈ 14: ಈಗಂತೂ ಟೆಕ್ನಾಲಜಿ ತುಂಬಾನೇ ಮುಂದುವರೆದಿದ್ದು, ಕಳ್ಳಕಾಕರಿಂದ ಮನೆ, ಬೆಳೆಗಳನ್ನು ರಕ್ಷಿಸಲು ಹೆಚ್ಚಿನವರು ಮನೆ ಹಾಗೂ ಜಮೀನಿನ ಅಲ್ಲಲ್ಲಿ ಸಿಸಿ ಟಿವಿ ಕ್ಯಾಮೆರಾ (CCTV Camera) ಅಳವಡಿಸುತ್ತಾರೆ. ಅದರಲ್ಲೂ ನಗರ ಪ್ರದೇಶದಲ್ಲಂತೂ ಪ್ರತಿ ಅಂಗಡಿ ಮುಂಗಟ್ಟು, ಮನೆಗಳಲ್ಲಿ ಸಿಸಿ ಟಿವಿ ಇದ್ದೇ ಇರುತ್ತದೆ. ಹೀಗೆ ಎಲ್ಲರೂ ಮನೆ ಹಾಗೂ ಅಂಗಡಿಗಳ ರಕ್ಷಣೆಗಾಗಿ ಸಿಸಿ ಟಿವಿ ಅಳವಡಿಸಿದ್ರೆ, ಇಲ್ಲೊಬ್ಬ ವ್ಯಕ್ತಿ ತನ್ನ ರಕ್ಷಣೆಗಾಗಿ ಹೆಲ್ಮೆಟ್‌ಗೆ ಸಿಸಿ ಟಿವಿ ಕ್ಯಾಮೆರಾವನ್ನು (Man installs CCTV camera on helmet) ಅಳವಡಿಸಿಕೊಂಡಿದ್ದಾನೆ. ಇಂದೋರ್‌ ಸತೀಶ್‌ ಚೌಹಾನ್‌ ಎಂಬಾತ ನೆರೆಹೊರೆಯವರಿಂದ ಜೀವ ಬೆದರಿಕೆ ಇದೆ ಎಂಬ ಕಾರಣಕ್ಕೆ ರಕ್ಷಣೆಗಾಗಿ ತನ್ನ ಹೆಲ್ಮೆಟ್‌ ಮೇಲೆ ಸಿಸಿ ಟಿವಿ ಅಳವಡಿಸಿಕೊಂಡು ಓಡಾಡುತ್ತಿದ್ದು, ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಅಗುತ್ತಿದೆ.

ತನ್ನ ರಕ್ಷಣೆಗಾಗಿ ಹೆಲ್ಮೆಟ್‌ಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ ವ್ಯಕ್ತಿ:

ಈ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದ್ದು, ನೆರೆಹೊರೆಯವರಿಂದ ಪ್ರಾಣ ಉಳಿಸಿಕೊಳ್ಳುವ ಸಲುವಾಗಿ ವ್ಯಕ್ತಿಯೊಬ್ಬ ತನ್ನ ಹೆಲ್ಮೆಟ್‌ಗೆ ಸಿಸಿ ಟಿವಿ ಕ್ಯಾಮೆರಾವನ್ನು ಅಳವಡಿಸಿಕೊಂಡಿದ್ದಾನೆ. ಸತೀಶ್‌ ಚೌಹಾಣ್‌ ಎಂಬಾತ ನೆರೆಹೊರೆಯವರಿಂದ ಜೀವ ಬೆದರಿಕೆ ಇರುವ ಕಾರಣ ತನ್ನ ಸುರಕ್ಷತೆಗಾಗಿ ಮತ್ತು ಯಾವುದೇ ದುಷ್ಕೃತ್ಯಗಳು ನಡೆದರೆ ಅದಕ್ಕೆ ಸಾಕ್ಷಿ ಲಭಿಸುತ್ತದೆ ಎಂಬ ಕಾರಣಕ್ಕೆ ತನ್ನ ಹೆಲ್ಮೆಟ್‌ಗೆ ಸಿಸಿ ಟಿವಿ ಕ್ಯಾಮೆರಾವನ್ನು ಅಳವಡಿಸಿಕೊಂಡಿದ್ದಾನೆ.

ಇದನ್ನೂ ಓದಿ
Image
ವಿಚ್ಛೇದನ ನೀಡಿ ಹಾಲಿನಲ್ಲಿ ಸ್ನಾನ ಮಾಡಿದ ಪತಿ
Image
ಆರೋಗ್ಯ ಸಮಸ್ಯೆ ಅಂದ್ರು ವಿಚಿತ್ರ ಬೇಡಿಕೆ ಇಡ್ತಾರಂತೆ ಬಾಸ್
Image
ಬೆಂಗಳೂರಿನಲ್ಲಿ ನಡೆದ ವಿಚಿತ್ರ ಘಟನೆ ಬಗ್ಗೆ ಹಂಚಿಕೊಂಡ ಯುವತಿ
Image
ಉದ್ಯಾನವನಕ್ಕೆ ಭೇಟಿ ನೀಡಿದ ಮಹಿಳೆಯ ಕೆನ್ನೆಗೆ ಚುಂಬಿಸಿದ ಮರಿಯಾನೆ

ಜಾಗ, ಆಸ್ತಿಯ ವಿಚಾರವಾಗಿ ನೆರೆಹೊರೆಯವರ ನಡುವೆ ತಕರಾರು ಎದ್ದಿದ್ದು, ಪರಿಸ್ಥಿತಿ ತೀರಾ ಹದಗೆಟ್ಟ ಕಾರಣ ಪ್ರಾಣ ರಕ್ಷಣೆಗಾಗಿ ಸತೀಶ್‌ ಹೆಲ್ಮೆಟ್‌ಗೆ ಸಿಸಿಟಿವಿ ಅಳವಡಿಸಿಕೊಂಡಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋವನ್ನು ಅನುರಾಗ್‌ ದ್ವಾರಿ (Anurag Dwary) ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವೈರಲ್‌  ವಿಡಿಯೋ ಇಲ್ಲಿದೆ ನೋಡಿ:

ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಬೈಕ್‌ನಲ್ಲಿ ಓಡಾಡುವಂತಹ ವ್ಯಕ್ತಿಯೊಬ್ಬ ತನ್ನ ಹೆಲ್ಮೆಟ್‌ಗೆ ಸಿಸಿ ಟಿವಿ ಅಳವಡಿಸಿಕೊಂಡಿರುವ ದೃಶ್ಯವನ್ನು ಕಾಣಬಹುದು. ಜಾಗದ ವಿಚಾರವಾಗಿ ಜಗಳ ಎದ್ದಿದ್ದು, ಇದೀಗ ಪರಿಸ್ಥಿತಿ ತೀರಾ ಹದಗೆಟ್ಟಿದೆ. ನೆರೆಹೊರೆಯವರು ಮನೆಗೆ ನುಗ್ಗಿ ಜಗಳ ಮಾಡಿದ್ದು ಮಾತ್ರವಲ್ಲದೆ ಅವರು ಮನೆಗೆ ಅಳವಡಿಸಿದ್ದ ಸಿಸಿ ಟಿವಿ ಕ್ಯಾಮೆರಾವನ್ನು ಸಹ ತೆಗೆದುಹಾಕಿದ್ದಾರೆ. ಇದೀಗ ಅವರಿಂದ ನನ್ನ ಕುಟುಂಬಕ್ಕೆ ಪ್ರಾಣ ಬೆದರಿಕೆಯಿದ್ದು, ನಮ್ಮ ರಕ್ಷಣೆಗಾಗಿ ಹಾಗೂ ಸಾಕ್ಷ್ಯಗಳನ್ನು ಸಂಗ್ರಹಿಸುವ ಸಲುವಾಗಿಯೇ ನಾನು ಹೆಲ್ಮೆಟ್‌ಗೆ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿದ್ದು ಎಂದು ಸತೀಶ್‌ ತನ್ನ ಸ್ಥಿತಿಯ ಬಗ್ಗೆ ವಿವರಿಸುತ್ತಿರುವ ದೃಶ್ಯವನ್ನು ವಿಡಿಯೋದಲ್ಲಿ ಕಾಣಬಹುದು.

ಅಲ್ಲದೆ ಪೊಲೀಸ್‌ ಅಧಿಕಾರಿಗಳು ಕೂಡ ನಮ್ಮ ಕುಟುಂಬಕ್ಕೆ ಯಾವುದೇ ಭದ್ರತೆ ಒದಗಿಸಿಲ್ಲ. ದೂರು ದಾಖಲಿಸಲು ಪ್ರಯತ್ನಿಸಿದರೂ ಸಹಾಯಕ್ಕೆ ನಿರಾಕರಿಸಿದ್ದಾರೆ. ಈ ಎಲ್ಲಾ ಪ್ರಯತ್ನಗಳ ನಂತರ ನಮ್ಮ ರಕ್ಷಣೆಗಾಗಿ ಹೆಲ್ಮೆಟ್‌ಗೆ ಸಿಸಿ ಟಿಟಿ ಕ್ಯಾಮೆರಾ ಅಳವಡಿಸಬೇಕಾಯಿತು. ಭವಿಷ್ಯದಲ್ಲಿ ಕಾನೂನು ಕ್ರಮ ಕೈಗೊಳ್ಳಲು ಸಾಕ್ಷ್ಯಗಳನ್ನು ಸಂಗ್ರಹಿಸಲು ಇದು ಸಹಾಯವಾಗಬಹುದು ಎಂದು ಸತೀಶ್‌ ಹೇಳಿದ್ದಾನೆ.

ಇದನ್ನೂ ಓದಿ: ಜ್ಯೂಸ್‌ಗೆ ಮೂತ್ರ ಮಿಕ್ಸ್‌ ಮಾಡಿ ಮಾರಾಟ; ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದ ಅಂಗಡಿಯಾತ

ಜುಲೈ 13 ರಂದು ಹಂಚಿಕೊಳ್ಳಲಾದ ಈ ವಿಡಿಯೋ 9 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಸಮಾನತೆ ಇನ್ನೂ ವಾಸ್ತವದಿಂದ ದೂರವಿದೆ, ಈ ವ್ಯಕ್ತಿಯ ಸಹಾಯಕ್ಕೆ ಯಾರು ಇಲ್ವೇʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಇಂದೋರ್‌ನಲ್ಲಿ ಏನು ಬೇಕಾದರೂ ನಡೆಯುತ್ತೆ ನೋಡಿʼ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:12 pm, Mon, 14 July 25

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ