AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಉದ್ಯೋಗ ಕೊಡಿಸುವ ನೆಪದಲ್ಲಿ ಯುವತಿಗೆ ಕಿರುಕುಳ; ಪಿಡಬ್ಲ್ಯೂಡಿ ಇಂಜಿನಿಯರ್‌ಗೆ ಬಿತ್ತು ಚಪ್ಪಲಿ ಏಟು

ಉದ್ಯೋಗ ಕೊಡಿಸುವ ನೆಪದಲ್ಲಿ ಪಿಡಬ್ಲ್ಯೂಡಿ ಸಬ್‌ ಇಂಜಿನಿಯರ್‌ ಯುವತಿಯೊಬ್ಬಳನ್ನು ತನ್ನ ವಿಶ್ರಾಂತಿ ಗೃಹಕ್ಕೆ ಕರೆಸಿ ಕಿರುಕುಳ ನೀಡಲು ಯತ್ನಿಸಿದ್ದಾನೆ. ಈತನ ನಿಜ ಬಣ್ಣ ತಿಳಿದ ಯುವತಿ ಇಂಜಿನಿಯರ್‌ಗೆ ಸರಿಯಾಗಿ ಚಪ್ಪಲಿ ಏಟು ನೀಡಿದ್ದಾಳೆ. ಈ ಘಟನೆಯ ವಿಡಿಯೋ ದೃಶ್ಯಾವಳಿಗಳು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದೆ.

Viral: ಉದ್ಯೋಗ ಕೊಡಿಸುವ ನೆಪದಲ್ಲಿ ಯುವತಿಗೆ ಕಿರುಕುಳ; ಪಿಡಬ್ಲ್ಯೂಡಿ ಇಂಜಿನಿಯರ್‌ಗೆ ಬಿತ್ತು ಚಪ್ಪಲಿ ಏಟು
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Dec 10, 2024 | 10:47 AM

Share

ಬಸ್ಸಿನಲ್ಲಿ, ಟ್ರೈನ್‌ನಲ್ಲಿ, ಉದ್ಯೋಗ ಕೊಡಿಸುವ ನೆಪದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುವಂತಹ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಇಲ್ಲೊಂದು ಇಂತಹದ್ದೇ ಘಟನೆ ನಡೆದಿದ್ದು, ಪಿಡಬ್ಲ್ಯೂಡಿ ಸಬ್‌ ಇಂಜಿನಿಯರ್‌ ಉದ್ಯೋಗ ಕೊಡಿಸುವ ನೆಪದಲ್ಲಿ ಯುವತಿಯೊಬ್ಬಳನ್ನು ತನ್ನ ವಿಶ್ರಾಂತಿ ಗೃಹಕ್ಕೆ ಕರೆಸಿ ಆಕೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾನೆ. ಇದರಿಂದ ಕೋಪಗೊಂಡ ಯುವತಿ ಇಂಜಿನಿಯರ್‌ಗೆ ಚಪ್ಪಲಿಯಿಂದ ಥಳಿಸಿದ್ದಾಳೆ. ಈ ಘಟನೆಯ ವಿಡಿಯೋ ದೃಶ್ಯಾವಳಿಗಳು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದ್ದು, ಯುವತಿಯ ಈ ಧೈರ್ಯದ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಈ ಘಟನೆ ನಡೆದಿದ್ದು, ಕೆಲಸ ಕೊಡಿಸುವ ನೆಪದಲ್ಲಿ ಕಿರುಕುಳ ನೀಡಿದ ಪಿಡಬ್ಲ್ಯೂಡಿ ಸಬ್ ಇಂಜಿನಿಯರ್‌ಗೆ ಯುವತಿಯೊಬ್ಬಳು ಚಪ್ಪಲಿಯಿಂದ ಥಳಿಸಿದ್ದಾಳೆ. ಭಾನುವಾರ (ಡಿಸೆಂಬರ್‌ 8) ಈ ಘಟನೆ ನಡೆದಿದ್ದು, ದಾಬ್ರಾದಲ್ಲಿ ಸಬ್‌ ಇಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದ ರಾಮ್ ಸ್ವರೂಪ್ ಕುಶ್ವಾಹ ಎಂಬಾತ ಕೆಲಸ ಕೊಡಿಸುವ ನೆಪದಲ್ಲಿ ಯುವತಿಯೊಬ್ಬಳನ್ನು ತನ್ನ ವಿಶ್ರಾಂತಿ ಗೃಹಕ್ಕೆ ಕರೆಸಿಕೊಂಡಿದ್ದಾನೆ. ನಂತರ ಆಕೆಗೆ ಕಿರುಕುಳ ನೀಡಲು ಯತ್ನಿಸಿದ್ದು, ಇದರಿಂದ ಕೆರಳಿದ ಯುವತಿ ಆತನಿಗೆ ಹಿಗ್ಗಾಮುಗ್ಗಾ ಚಪ್ಪಲಿ ಏಟು ನೀಡಿದ್ದಾಳೆ.

ಈ ಘಟನೆಯ ಬಗ್ಗೆ ಯುವತಿ ಯಾವುದೇ ದೂರನ್ನು ದಾಖಲಿಸಿಲ್ಲ. ದೂರು ಸ್ವೀಕರಿಸಿದ ನಂತರ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದಾಬ್ರಾ ಎಸ್‌ಡಿಒಪಿ ವಿವೇಕ್ ಶರ್ಮಾ ತಿಳಿಸಿದ್ದಾರೆ.

ಇದನ್ನೂ ಓದಿ: ಫುಡ್‌ ಡೆಲಿವರಿ ಆ್ಯಪ್‌ನ ಬಿಲ್‌ಬೋರ್ಡ್‌ ಬೆನ್ನಿಗೆ ಕಟ್ಟಿ ಬೀದಿಯಲ್ಲಿ ಅಡ್ಡಾಡಿದ ಬೆಂಗಳೂರು ಯುವಕರು

FreePressMP ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಕೆಲಸ ಕೊಡಿಸುವ ನೆಪದಲ್ಲಿ ವಿಶ್ರಾಂತಿ ಗೃಹಕ್ಕೆ ಕರೆಸಿಕೊಂಡ ಪಿಡಬ್ಲ್ಯೂಡಿ ಸಬ್ ಇಂಜಿನಿಯರ್‌ಗೆ ಚಪ್ಪಲಿಯಿಂದ ಥಳಿಸುತ್ತಿರುವ ದೃಶ್ಯವನ್ನು ಕಾಣಬಹುದು. ಈತ ಕಿರುಕುಳ ನೀಡಿದ್ದು ಮಾತ್ರವಲ್ಲದೆ ಪೊಲೀಸರಿಗೆ ಕರೆ ಮಾಡುವುದಾಗಿ ಬೆದರಿಕೆ ಹಾಕ್ತೀಯಾ ಅಂತ ಹೇಳುತ್ತಾ ಆತನಿಗೆ ಚಪ್ಪಲಿ ಏಟು ನೀಡಿದ್ದಾಳೆ. ಯುವತಿಯ ಈ ದಿಟ್ಟ ನಡೆಗೆ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?