AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral : ಕುನೊ ರಾಷ್ಟ್ರೀಯ ಉದ್ಯಾನವನದ ಚೀತಾಗಳ ಬಾಯಾರಿಕೆ ನೀಗಿಸಲು ಹೋಗಿ ಫಜೀತಿಗೆ ಸಿಲುಕಿದ ಸಿಬ್ಬಂದಿ

ಪ್ರಾಣಿ ಸಾಮ್ರಾಜ್ಯಗಳಿಗೆ ಸಂಬಂಧಪಟ್ಟ ಕೆಲವೊಂದು ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುತ್ತವೆ. ಪ್ರಾಣಿಗಳ ವಿಡಿಯೋಗಳನ್ನು ಚಿತ್ರೀಕರಿಸಲು ಹೋಗಿ ಅಪಾಯವನ್ನು ಮೈ ಮೇಲೆ ಎಳೆದುಕೊಂಡವರು ಇದ್ದಾರೆ. ಇದೀಗ ಬಾಯಾರಿಕೆಯಿಂದ ಬಳಲುತ್ತಿದ್ದ ಚೀತಾ ಹಾಗೂ ಅದರ ನಾಲ್ಕು ಮರಿಗಳಿಗೆ ಸಿಬ್ಬಂದಿಯೊಬ್ಬರು ಕುಡಿಯಲು ನೀರು ನೀಡಿದ್ದು, ಈ ವಿಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಕೆಲವು ಸೂಚನೆ ಉಲ್ಲಂಘಿಸಿ ಸಿಬ್ಬಂದಿಯೂ ಈ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದು ಫಜೀತಿಗೆ ಸಿಲುಕಿದ್ದಾರೆ.

Viral : ಕುನೊ ರಾಷ್ಟ್ರೀಯ ಉದ್ಯಾನವನದ ಚೀತಾಗಳ ಬಾಯಾರಿಕೆ ನೀಗಿಸಲು ಹೋಗಿ ಫಜೀತಿಗೆ ಸಿಲುಕಿದ ಸಿಬ್ಬಂದಿ
ವೈರಲ್​​ ವಿಡಿಯೋ
ಸಾಯಿನಂದಾ
| Edited By: |

Updated on:Apr 07, 2025 | 3:23 PM

Share

ಮಧ್ಯಪ್ರದೇಶ ಏಪ್ರಿಲ್ 07: ಮನುಷ್ಯರಂತೆ ಪ್ರಾಣಿಗಳಿಗೆ ಈ ಬೇಸಿಗೆ (summer) ಬಿಸಿ ಸಹಿಸಲು ಆಗುವುದಿಲ್ಲ. ಈ ಋತುವಿನಲ್ಲಿ ಪ್ರಾಣಿಗಳಿಗೂ ಬಾಯಾರಿಕೆಯಾಗುವುದು ಸಹಜ. ಕೆಲವೊಮ್ಮೆ ಕಾಡಿನಲ್ಲಿರುವ ಕೊಳ, ಹಳ್ಳಗಳಲ್ಲಿನ ನೀರು ಕುಡಿದು ಬಾಯಾರಿಕೆ ನೀಗಿಸಿಕೊಳ್ಳುತ್ತವೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಮಧ್ಯಪ್ರದೇಶ (Madhya Pradesh) ದ ಕುನೋ ರಾಷ್ಟ್ರೀಯ ಉದ್ಯಾನವನ (Kuno’s national park) ದಲ್ಲಿ ಸಿಬ್ಬಂದಿಯೊಬ್ಬರು ಚೀತಾ ಹಾಗೂ ಅದರ ಮರಿಗಳಿಗೆ ಅದರ ಮರಿಗಳಿಗೆ ಕುಡಿಯಲು ನೀರು ಇಟ್ಟು ಬಾಯಾರಿಕೆ ನೀಗಿಸುವ ಪ್ರಯತ್ನ ಮಾಡಿದ್ದಾರೆ. ಈ ಸಿಬ್ಬಂದಿಯನ್ನು ಅರಣ್ಯ ಇಲಾಖೆಯ ಚಾಲಕ ಸತ್ಯನಾರಾಯಣ್ ಗುರ್ಜರ್ (satyanarayan gurjar) ಎಂದು ಗುರುತಿಸಲಾಗಿದೆ. ಈ ವಿಡಿಯೋ ವೈರಲ್ (viral) ಆಗುತ್ತಿದ್ದಂತೆ ಸಿಬ್ಬಂದಿಯ ಅಶಿಸ್ತಿನ ವರ್ತನೆ ಕಂಡು ಅಧಿಕಾರಿಗಳು ಆತನನ್ನು ಚಾಲಕನ ಹುದ್ದೆಯಿಂದ ತೆಗೆದುಹಾಕಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ (Time of india) ವರದಿ ಮಾಡಿದೆ.

ಹೌದು, ಇತ್ತೀಚೆಗಷ್ಟೇ ಚೀತಾ ಜ್ವಾಲಾ ಹಾಗೂ ಅದರ ನಾಲ್ಕು ಮರಿಗಳನ್ನು ಸ್ವತಃ ಗ್ರಾಮಸ್ಥರೇ ಕಲ್ಲುಗಳಿಂದ ಹೊಡೆದಿದ್ದರು. ಈ ಘಟನೆ ನಡೆದ ಎರಡು ವಾರಗಳ ಬಳಿಕವೇ ಸಿಬ್ಬಂದಿಯೊಬ್ಬರು ಚೀತಾಗಳಿಗೆ ಕುಡಿಯಲು ನೀರು ನೀಡುವುದನ್ನು ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಡಿಯೋಗೆ ಸಂಬಂಧ ಪಟ್ಟಂತೆ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಎಪಿಸಿಸಿಎಫ್) ಉತ್ತಮ್ ಕುಮಾರ್ ಶರ್ಮಾ ಭಾನುವಾರ ಪ್ರತಿಕ್ರಿಯೆ ನೀಡಿದ್ದು, ಸಿಬ್ಬಂದಿ ಕೆಲವು ಸೂಚನೆಗಳನ್ನು ಉಲ್ಲಂಘಿಸಿದ್ದು ಅಶಿಸ್ತು ತೋರಿದ್ದಾರೆ. ಈ ವೀಡಿಯೊವನ್ನು ಸೆರೆ ಹಿಡಿದು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು, ಈ ಸಿಬ್ಬಂದಿಯ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ತಿಳಿಸಿದ್ದರು.

ಇದನ್ನೂ ಓದಿ
Image
ಭಾರತದ ಮೊದಲ ಕಾಫಿ ತೋಟ ತಾಣದ ಕಥೆಯನ್ನು ಹಂಚಿಕೊಂಡ ಆನಂದ್‌ ಮಹೀಂದ್ರಾ
Image
ಕಾಲೇಜು ಪ್ರೊಫೆಸರ್‌ ಎನರ್ಜಿಗೆ ಫಿದಾ ಆದ ವಿದ್ಯಾರ್ಥಿಗಳು
Image
ಬೆಂಗಳೂರಿನಲ್ಲಿ ಆಟೋ ಬುಕ್ ಮಾಡುವ ಟಿಪ್ಸ್ ನೀಡಬೇಕು
Image
ಒಂದೇ ಮಂಟಪದಲ್ಲಿ, ಒಂದೇ ಸಮಯದಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾದ ವ್ಯಕ್ತಿ

ಇದನ್ನೂ ಓದಿ: ಇದು ಅಮ್ಮ ಪ್ರೀತಿ: ಹೇ ನನ್ನ ಕಂದಮ್ಮನನ್ನು ಎಲ್ಲಿಗೆ ಹೊತ್ಕೊಂಡು ಹೋಗ್ತಾ ಇದ್ದೀಯಾ, ಬಿಟ್ಟು ಬಿಡೋ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಹೌದು, ಈ ಘಟನೆಗೆ ಸಂಬಂಧ ಪಟ್ಟ ವಿಡಿಯೋವನ್ನು @Ajaydubey9 ಹೆಸರಿನ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ, ಪ್ರಾರಂಭದಲ್ಲಿ ವ್ಯಕ್ತಿ ಚೀತಾ ಹಾಗೂ ಮರಿಗಳ ಹತ್ತಿರ ಹೋಗಲು ಹಿಂಜರಿಯುತ್ತಿರುವಂತೆ ಕಂಡುಬಂದಿದೆ. ಆದರೆ, ವಿಡಿಯೋ ಚಿತ್ರೀಕರಿಸುತ್ತಿರುವವರು ಆ ಸಿಬ್ಬಂದಿಯನ್ನು ಮುಂದಕ್ಕೆ ಹೋಗುವಂತೆ ಹೇಳುತ್ತಿರುವುದನ್ನು ಕಾಣಬಹುದು. ಆ ಬಳಿಕ ಮುಂದಕ್ಕೆ ಹೋದ ಸಿಬ್ಬಂದಿ ಹಳದಿ ಪ್ಲಾಸ್ಟಿಕ್ ಬಾಟಲಿನ ನೀರನ್ನು ತಟ್ಟೆಗೆ ಸುರಿಯುತ್ತಿದ್ದಾನೆ. ಸ್ವಲ್ಪ ಸೆಕೆಂಡುಗಳ ನಂತರದಲ್ಲಿ ಅಲ್ಲೇ ಇದ್ದ ಚೀತಾ ಮತ್ತು ಅದರ ನಾಲ್ಕು ಮರಿಗಳು ನಿಧಾನವಾಗಿ ತಟ್ಟೆಯ ಕಡೆಗೆ ನಡೆದುಕೊಂಡು ಬಂದು ನೀರನ್ನು ಕುಡಿಯುತ್ತವೆ. ಆದರೆ ಈ ವೇಳೆ ಸಿಬ್ಬಂದಿ ಮಾತ್ರ ಅಲ್ಲೇ ನಿಂತುಕೊಂಡಿದ್ದು, ನಲವತ್ತು ಸೆಕೆಂಡುಗಳ ವಿಡಿಯೋವು ಅಧಿಕ ವೀಕ್ಷಣೆ ಕಂಡಿದ್ದು ಬಳಕೆದಾರರು ಕಾಮೆಂಟ್ ಗಳನ್ನು ಮಾಡಿದ್ದಾರೆ.

ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:21 pm, Mon, 7 April 25

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್