Video Viral: ಗ್ರಾಮಸ್ಥರ ಮುಂದೆಯೇ ಮಹಿಳಾ ಪೊಲೀಸ್ ಅಧಿಕಾರಿಗೆ ಕೆನ್ನೆಗೆ ಬಾರಿಸಿದ ಯುವಕ

ಮಧ್ಯಪ್ರದೇಶದ ಟಿಕಮ್‌ಗಢ್‌ನಲ್ಲಿ ರಸ್ತೆ ಅಪಘಾತದ ನಂತರ ನಡೆದ ಪ್ರತಿಭಟನೆಯ ವೇಳೆ ಯುವಕನೊಬ್ಬ ಮಹಿಳಾ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಯಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರು ಮಧ್ಯ ಪ್ರವೇಶಿಸಿ ಘಟನಾ ಸ್ಥಳವನ್ನು ನಿಯಂತ್ರಿಸಿದ್ದಾರೆ.

Follow us
ಅಕ್ಷತಾ ವರ್ಕಾಡಿ
|

Updated on:Nov 19, 2024 | 10:47 AM

ಮಧ್ಯಪ್ರದೇಶ: ಯುವಕನೊಬ್ಬ ಮಹಿಳಾ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಧ್ಯಪ್ರದೇಶದ ಟಿಕಮ್‌ಗಢ್ ಜಿಲ್ಲೆಯಲ್ಲಿ ಸೋಮವಾರ ಈ ಘಟನೆ ನಡೆದಿದ್ದು, ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ.

ಮಾಹಿತಿ ಪ್ರಕಾರ, ಬಡಗಾಂವ್ ಧಸನ್ ಪೊಲೀಸ್ ಠಾಣಾ ವ್ಯಾಪ್ತಿಯ ದರಗ್ವಾನ್ ಗ್ರಾಮದಲ್ಲಿ ಭಾನುವಾರ ರಾತ್ರಿ ರಸ್ತೆ ಅಪಘಾತದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು 50 ವರ್ಷದ ಘುರ್ಕಾ ಲೋಧಿ ಎಂಬ ರೈತ ಸಾವನ್ನಪ್ಪಿದ್ದರು. ಸೋಮವಾರ ಬೆಳಗ್ಗೆ ಅವರ ಕುಟುಂಬಕ್ಕೆ ಈ ಸುದ್ದಿ ತಿಳಿದಿದ್ದು ಸ್ಥಳೀಯರಲ್ಲಿ ಆಕ್ರೋಶ ವ್ಯಕ್ತವಾಗಿದೆ. ಪ್ರತಿಭಟನೆಯಲ್ಲಿ ಗ್ರಾಮಸ್ಥರು ಖರ್ಗಾಪುರ-ಬಡಗಾಂವ ರಸ್ತೆ ತಡೆ ನಡೆಸಿ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದರು.

ಮಾಹಿತಿ ಪಡೆದ ಬಡಗಾಂವ್ ಪೊಲೀಸ್ ಠಾಣೆ ಪ್ರಭಾರಿ ಅನು ಮೇಘಾ ಗುಪ್ತಾ ದುಬೆ ಘಟನಾ ಸ್ಥಳಕ್ಕೆ ಆಗಮಿಸಿ ರಸ್ತೆ ತಡೆ ತೆರವುಗೊಳಿಸಿದ್ದರು.ಆದರೆ, ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು, ವಾಗ್ವಾದದ ನಡುವೆ ಮಹಿಳಾ ಪೊಲೀಸ್​ ಅಧಿಕಾರಿ ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಇದರಿಂದ ಕೋಪಗೊಂಡ ಯುವಕ ಪೊಲೀಸ್​ ಎಂದೂ ಕೂಡ ನೋಡದೇ ತಿಗುರಿಸಿ ಕೆನ್ನೆಗೆ ಹೊಡೆದಿದ್ದಾನೆ. ಈ ಘಟನೆಯಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರು ಮಧ್ಯ ಪ್ರವೇಶಿಸಿ ಘಟನಾ ಸ್ಥಳವನ್ನು ನಿಯಂತ್ರಿಸಿದ್ದಾರೆ.

ಇದನ್ನೂ ಓದಿ: ಹೀಗೆ ಬಟ್ಟೆ ತೊಡುವುದು ಸುರಕ್ಷಿತವೇ; ಅರೆಬರೆ ಬಟ್ಟೆ ತೊಟ್ಟು ಗಂಡಸರ ಬಳಿ ಅಭಿಪ್ರಾಯ ಕೇಳಿದ ಯುವತಿ

ಪೊಲೀಸರ ತಡವಾದ ಸ್ಪಂದನೆಯಿಂದ ಗಾಯಗೊಂಡ ರೈತನಿಗೆ ಸಕಾಲದಲ್ಲಿ ವೈದ್ಯಕೀಯ ನೆರವು ದೊರೆಯದೇ ಆತ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸದ್ಯ ವಿಡಿಯೋ ವೈರಲ್​ ಆಗುತ್ತಿದ್ದು,ವೈರಲ್ ಆಗಿರುವ ವಿಡಿಯೋದಲ್ಲಿ ಅಧಿಕಾರಿ ಮತ್ತು ಯುವಕರ ನಡುವಿನ ವಾಗ್ವಾದ ಮತ್ತು ಕಪಾಳ ಮೋಕ್ಷವನ್ನು ಸ್ಪಷ್ಟವಾಗಿ ಸೆರೆಹಿಡಿಯಲಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:40 am, Tue, 19 November 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ