AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ತನ್ನ ಪತಿಯೊಂದಿಗೆ ಸುತ್ತಾಡುತ್ತಿದ್ದ ಯುವತಿಗೆ ನಡುರಸ್ತೆಯಲ್ಲೇ ಥಳಿಸಿದ ಮಹಿಳೆ

ಇಂದೋರ್‌ನ ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯೊಂದಿಗೆ ಕಾರಿನಲ್ಲಿ ಸುತ್ತಾಡುತ್ತಿರುವ ವೇಳೆ ರೆಡ್​ ಹ್ಯಾಂಡ್​ ಆಗಿ ಪತ್ನಿಯ ಕೈಗೆ ಸಿಕ್ಕಿಬಿದ್ದಿದ್ದಾನೆ. ಪತಿಯೊಂದಿಗೆ ಬೇರೊಬ್ಬ ಯುವತಿಯನ್ನು ಕಂಡು ಕೋಪಗೊಂಡ ಮಹಿಳೆ ನಡುರಸ್ತೆಯಲ್ಲೇ ಆಕೆಗೆ ಮನಬಂದಂತೆ ಥಳಿಸಿದ್ದಾಳೆ. ಈ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Video: ತನ್ನ ಪತಿಯೊಂದಿಗೆ ಸುತ್ತಾಡುತ್ತಿದ್ದ ಯುವತಿಗೆ ನಡುರಸ್ತೆಯಲ್ಲೇ ಥಳಿಸಿದ ಮಹಿಳೆ
ಅಕ್ಷತಾ ವರ್ಕಾಡಿ
|

Updated on: Nov 15, 2024 | 11:09 AM

Share

ಮಧ್ಯಪ್ರದೇಶ: ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯೊಂದಿಗೆ ಕಾರಿನಲ್ಲಿ ಸುತ್ತಾಡುತ್ತಿರುವ ವೇಳೆ ರೆಡ್​ ಹ್ಯಾಂಡ್​ ಆಗಿ ಪತ್ನಿಯ ಕೈಗೆ ಸಿಕ್ಕಿಬಿದ್ದಿರುವ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ತನ್ನ ಪತಿಯೊಂದಿಗೆ ಬೇರೊಬ್ಬ ಯುವತಿಯನ್ನು ಕಂಡು ಕೋಪಗೊಂಡ ಮಹಿಳೆ ನಡುರಸ್ತೆಯಲ್ಲೇ ಆಕೆಗೆ ಮನಬಂದಂತೆ ಥಳಿಸಿದ್ದಾರೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯ ಮೊಬೈನಲ್ಲಿ ಸೆರೆಯಾಗಿದ್ದು, ಸೋಶಿಯಲ್​ ಮೀಡಿಯಾಗಳಲ್ಲಿ ಹರಿಬಿಡಲಾಗಿದೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ.

ಉಷಾ ಆರ್ಯ ಎಂದು ಗುರುತಿಸಲಾದ ಮಹಿಳೆ ಕೆಲವು ದಿನಗಳ ಹಿಂದೆ ತನ್ನ ಪತಿ ಜಿತೇಂದ್ರ ಮಾಲಿ ಪ್ರೇಯಸಿ ಪೂಜಾ ಜೊತೆಗೆ ಓಡಾಡುತ್ತಿರುವುದನ್ನು ಗಮನಿಸಿದ್ದಾಳೆ. ಸರಿಯಾದ ಸಮಯಕ್ಕಾಗಿ ಕಾದು ಕುಳಿತಿದ್ದ ಉಷಾ ಮೊನ್ನೆಯಷ್ಟೇ ರೆಡ್​ ಹ್ಯಾಂಡ್​ ಹಿಡಿದಿದ್ದಾಳೆ. ತನ್ನ ಪತಿಯೊಂದಿಗೆ ಸುತ್ತಾಡುತ್ತಿದ್ದ ಯುವತಿಗೆ ನಡುರಸ್ತೆಯಲ್ಲೇ ಮನಬಂದಂತೆ ಥಳಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಆಂಬ್ಯುಲೆನ್ಸ್‌ನಲ್ಲಿ ಸ್ಫೋಟಗೊಂಡ ಆಕ್ಸಿಜನ್‌ ಸಿಲಿಂಡರ್‌; ಕೂದಲೆಳೆಯುವ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಗರ್ಭಿಣಿ

ನಡು ರಸ್ತೆಯಲ್ಲೇ ಹೊಡೆದಾಡಿಕೊಂಡಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೂವರನ್ನೂ ನಾನಾಖೇಡ ಠಾಣೆಗೆ ಕರೆದೊಯ್ದಿದ್ದಾರೆ. ವಿಚಾರಣೆಯ ವೇಳೆ ಜಿತೇಂದ್ರನಿಗೆ ಈಗಾಗಲೇ ಎರಡು ಮದುವೆಯಾಗಿದ್ದು, ಮೂರನೇ ಬಾರಿಗೆ ಮದುವೆಯಾಗಲು ಬಯಸಿರುವುದಾಗಿ ತಿಳಿದುಬಂದಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ