Viral: ಗಂಡನೊಂದಿಗೆ ಜಗಳವಾಡಿ ಚಲಿಸುತ್ತಿರುವ ರೈಲಿನಿಂದ ಜಿಗಿದ ಮಹಿಳೆ; ಅಘಾತಕಾರಿ ವಿಡಿಯೋ ವೈರಲ್

ಪತಿ-ಪತ್ನಿಯರ ನಡುವಿನ ಜಗಳ ಅತಿರೇಕಕ್ಕೆ ತಿರುಗಿದ ಘಟನೆಗಳು ಈ ಹಿಂದೆಯೂ ನಡೆದಿವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಪತಿರಾಯನೊಂದಿಗೆ ಜಗಳವಾಡಿ ಮಹಿಳೆಯೊಬ್ಬಳು ಚಲಿಸುತ್ತಿರುವ ರೈಲಿನಿಂದ ಕೆಳಗೆ ಹಾರಿದ್ದಾಳೆ. ಈ ಅಘಾತಕಾರಿ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.

Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: Nov 03, 2024 | 12:51 PM

ಎಲ್ಲರ ಮನೆ ದೋಸೆ ಕೂಡ ತೂತು ಎನ್ನುವಂತೆ ಪ್ರತಿಯೊಂದು ಕುಟುಂಬದಲ್ಲೂ ಸಮಸ್ಯೆಗಳು ಇದ್ದೇ ಇರುತ್ತದೆ. ಹಾಗೆ ಪ್ರತಿಯೊಂದು ಮನೆಯಲ್ಲೂ ಗಂಡ-ಹೆಂಡ್ತಿ ನಡುವೆ ಸಣ್ಣಪುಟ್ಟ ಜಗಳ, ಮನಸ್ತಾಪಗಳು ಇದ್ದೇ ಇರುತ್ತದೆ. ಹೆಚ್ಚಿನ ಸಂದರ್ಭಗಳಲ್ಲಿ ಈ ಜಗಳಗಳು ಅತಿರೇಕಕ್ಕೆ ಹೋಗುವುದಿಲ್ಲ ಆದ್ರೆ ಕೆಲವೊಂದು ಬಾರಿ ಗಂಡ ಹೆಂಡತಿ ಜಗಳ ತೀರಾ ಅತಿರೇಕಕ್ಕೆ ಹೋಗುತ್ತವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಪತಿರಾಯನೊಂದಿಗೆ ಜಗಳವಾಡಿ ಮಹಿಳೆಯೊಬ್ಬಳು ಚಲಿಸುತ್ತಿರುವ ರೈಲಿನಿಂದ ಕೆಳಗೆ ಹಾರಿದ್ದಾಳೆ. ಈ ಅಘಾತಕಾರಿ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.

ಈ ಅಘಾತಕಾರಿ ಘಟನೆ ಮಧ್ಯಪ್ರದೇಶ ಸಮೀಪ ನಡೆದಿದ್ದು, ಮಹಿಳೆಯೊಬ್ಬಳು ತನ್ನ ಗಂಡನೊಂದಿಗೆ ಜಗಳವಾಡಿ ಇಲ್ಲಿನ ಒರೈ ಮತ್ತು ಅಟ್ಟಾ ನಡುವೆ ಚಲಿಸುವ ಬರೌನಿ ಎಕ್ಸ್‌ಪ್ರೆಸ್‌ ರೈಲಿನಿಂದ ಹಾರಿದ್ದಾಳೆ. ಚಲಿಸುತ್ತಿರುವ ರೈಲಿನಲ್ಲಿಯೇ ಪತಿಪತ್ನಿಯರಿಬ್ಬರು ಜಗಳವಾಡಿದ್ದು, ಮೊದಲೇ ಮದ್ಯ ಸೇವಿಸಿದ್ದ ಆ ಮಹಿಳೆ ಜಗಳದ ನಡುವೆಯೇ ಇದ್ದಕ್ಕಿದ್ದಂತೆ ಬಾಗಿಲ ಬಳಿ ಹೋಗಿ ಅಲ್ಲಿಂದ ಕೆಳಗೆ ಹಾರಿದ್ದಾಳೆ. ಇದಾದ ನಂತರ ರೈಲನ್ನು ನಿಲ್ಲಿಸಲಾಗಿದ್ದು, ಆದರೆ ಮಹಿಳೆಯ ಜೀವ ಉಳಿಸಲಾಗಿದೆಯೇ ಅಥವಾ ಇಲ್ಲವೇ ಎಂಬ ಮಾಹಿತಿ ಲಭ್ಯವಾಗಿಲ್ಲ.

ಈ ಕುರಿತ ವಿಡಿಯೋವನ್ನು ಅವಿನಾಶ್ ತಿವಾರಿ (@TaviJournalist) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಮಹಿಳೆಯೊಬ್ಬಳು ಚಲಿಸುತ್ತಿರುವ ರೈಲಿನಿಂದ ಜಿಗಿಯುವ ದೃಶ್ಯವನ್ನು ಕಾಣಬಹುದು. ರೈಲಿನಲ್ಲಿಯೇ ಗಂಡ ಹೆಂಡ್ತಿ ಜೋರು ಜೋರಾಗಿ ಜಗಳ ಶುರು ಹಚ್ಚಿಕೊಂಡಿದ್ದು, ಮೊದಲೇ ಮದ್ಯ ಸೇವಿಸಿದ್ದ ಆ ಮಹಿಳೆ ಬಾಗಿಲ ಬಳಿ ಬಂದು ಪ್ರಯಾಣಿಕರು ನೋಡ ನೋಡುತ್ತಿದ್ದಂತೆಯೇ ಆಕೆ ರೈಲಿನಿಂದ ಕೆಳಗೆ ಜಿಗಿದಿದ್ದಾಳೆ.

ಇದನ್ನೂ ಓದಿ: ಏನು ಧೈರ್ಯ ಈಕೆಯದು, ಹಗ್ಗದಂತೆ ಹಾವನ್ನು ಹಿಡಿದ ವಿದ್ಯಾರ್ಥಿನಿ

ನವೆಂಬರ್ 2 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ‘ಜಗಳವನ್ನು ಬದಿಗಿಟ್ಟು ಆ ಮೂರ್ಖ ಗಂಡನಿಗೆ ಹೆಂಡತಿಯನ್ನು ರಕ್ಷಿಸಬಹುದಿತ್ತಲ್ವಾ’ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಇನ್ನೂ ಅನೇಕ ಬಳಕೆದಾರರು ಈ ದೃಶ್ಯವನ್ನು ಕಂಡು ಫುಲ್ ಶಾಕ್ ಆಗಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?