AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನಿರರ್ಗಳವಾಗಿ ಇಂಗ್ಲಿಷ್ ಮಾತನಾಡಿದ ವೃದ್ಧ ಆಟೋ ಡ್ರೈವರ್, ತಾತನ ಟ್ಯಾಲೆಂಟ್‌ಗೆ ನೆಟ್ಟಿಗರು ಫಿದಾ

ಮಹಾರಾಷ್ಟ್ರದ ಅಮರಾವತಿಯ ಆಟೋ ಚಾಲಕನೊಬ್ಬರ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಇದಕ್ಕೆ ಕಾರಣವಾಗಿದ್ದು ಅವರು ಇಂಗ್ಲಿಷ್ ಮಾತನಾಡುವ ರೀತಿ. ಈ ಆಟೋ ಡ್ರೈವರ್ ನಿರರ್ಗಳ ಇಂಗ್ಲಿಷ್ ಭಾಷೆ ಎಲ್ಲರಿಗೂ ಅಚ್ಚರಿ ಮೂಡಿಸುತ್ತಿದೆ. ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ, ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ನಿರರ್ಗಳವಾಗಿ ಇಂಗ್ಲಿಷ್ ಮಾತನಾಡಿದ ವೃದ್ಧ ಆಟೋ ಡ್ರೈವರ್, ತಾತನ ಟ್ಯಾಲೆಂಟ್‌ಗೆ ನೆಟ್ಟಿಗರು ಫಿದಾ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Nov 16, 2026 | 6:00 PM

Share

ಮಹಾರಾಷ್ಟ್ರ, ನವೆಂಬರ್ 16: ಇಂಗ್ಲಿಷ್ ಭಾಷೆಯೆಂದರೆ ಕೆಲವರಿಗೆ ಅಷ್ಟಕಷ್ಟೆ. ಕೆಲವರು ಒಂದೊಂದೇ ಪದಗಳನ್ನು ಜೋಡಿಸಿ ಇಂಗ್ಲಿಷ್ ಭಾಷೆ ಮಾತನಾಡುತ್ತಾರೆ. ಆದರೆ, ಈ ಆಟೋ ಡ್ರೈವರ್ (Elderly Auto Driver) ಇಂಗ್ಲಿಷ್ ಮಾತನಾಡುವ ರೀತಿ ನೀವು ಬೆರಗಾಗುವುದು ಗ್ಯಾರಂಟಿ. ಹೌದು, ಮಹಾರಾಷ್ಟ್ರದ ಅಮರಾವತಿಯ ಯಾದವ್ ಚಾಚಾ ಎಂಬ ವೃದ್ಧ ಆಟೋ ಚಾಲಕರೊಬ್ಬರು ನಿರರ್ಗಳವಾಗಿ ಇಂಗ್ಲಿಷ್ ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ. ಹಳೆಯ ವಿಡಿಯೋ ಇದೀಗ ಮತ್ತೆ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ನಿರರ್ಗಳವಾಗಿ ಇಂಗ್ಲಿಷ್‌ ಮಾತನಾಡುವ ಆಟೋ ಡ್ರೈವರ್

ಭೂಷಣ್ (Bhushan) ಎಂಬ ವ್ಯಕ್ತಿ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. 2024ರಲ್ಲಿ ಚಿತ್ರೀಕರಿಸಲಾಗಿದ್ದ ಹಳೆಯ ವಿಡಿಯೋ ಇದಾಗಿದ್ದು, ವೃದ್ಧ ಆಟೋ ಚಾಲಕರೊಬ್ಬರು ಯುವಕನೊಂದಿಗೆ ನಿರರ್ಗಳವಾಗಿ ಇಂಗ್ಲಿಷ್‌ನಲ್ಲಿ ಮಾತನಾಡುವುದನ್ನು ಕಾಣಬಹುದು.

ವೈರಲ್‌ ವಿಡಿಯೋ ಇಲ್ಲಿದೆ

ಇಂಗ್ಲಿಷ್ ಗೊತ್ತಿದ್ರೆ ಫಾರಿನ್‌ಗೆ ಹೋಗ್ಬಹುದು

ಈ ಕ್ಲಿಪಿಂಗ್ ನಲ್ಲಿ ಯುವಕನಿಗೆ ನಾನು ಹೇಳುವುದನ್ನು ನೀನು ಗಮನವಿಟ್ಟು ಕೇಳು. ನಿನಗೆ ಇಂಗ್ಲಿಷ್ ಬಂದರೆ ಲಂಡನ್‌, ಪ್ಯಾರಿಸ್‌, ಅಮೆರಿಕಕ್ಕೆ ಹೋಗ್ಬಹುದು. ಇಲ್ಲದಿದ್ರೆ ವಿದೇಶಕ್ಕೆ ಹೋಗಲು ಸಾಧ್ಯವಿಲ್ಲ. ನೀನೇನಾದ್ರೂ ಲಂಡನ್‌ನ ಹೋಟೆಲ್‌ಗೆ ಹೋದಾಗ ಇಂಗ್ಲಿಷ್ ಮಾತನಾಡಲು ಬರುತ್ತಿದ್ರೆ ಅಲ್ಲಿ ನೀರನ್ನು ಆರಾಮಾಗಿ ಕೇಳಬಹುದು. ಅದೇ ನೀನು ಮರಾಠಿ ಸೇರಿದಂತೆ ಬೇರೆ ಭಾಷೆಯಲ್ಲಿ ಮಾತನಾಡಿದ್ರೆ ನಿಮ್ಮ ಎದುರಿಗಿರುವ ವ್ಯಕ್ತಿಗೆ ಏನು ಅರ್ಥ ಆಗಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮತ್ತೆ ಮಗುವಾಯ್ತು ಮನಸ್ಸು; ಪಾರ್ಕ್‌ನಲ್ಲಿ ಜಾರುಬಂಡಿ ಆಟ ಆಡಿದ ವೃದ್ಧೆ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ವಾವ್ಹ್ ಚಾಚಾನ ಇಂಗ್ಲಿಷ್ ಅದ್ಭುತ ಎಂದಿದ್ದಾರೆ. ಇನ್ನೊಬ್ಬರು, ಆಸಕ್ತಿದಾಯಕ ವಿಷಯ ಎಂದು ಹೇಳಿದ್ದಾರೆ. ಮತ್ತೊಬ್ಬರು, ಅವರನ್ನು ನೋಡಿದ್ರೆ ಓದಿದವರಂತೆ ಕಾಣುತ್ತಿದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಸೋನಿಯಾ ಗಾಂಧಿಯ ಆತ್ಮಕತೆ ಇಂದು ಅಧಿಕೃತ ಬಿಡುಗಡೆ
ಸೋನಿಯಾ ಗಾಂಧಿಯ ಆತ್ಮಕತೆ ಇಂದು ಅಧಿಕೃತ ಬಿಡುಗಡೆ
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮದ್ಯ ಮಾರಾಟ ನಿಷೇಧ
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮದ್ಯ ಮಾರಾಟ ನಿಷೇಧ
ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಪತ್ತೆ: ತಪ್ಪಿದ ಅನಾಹುತ
ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಪತ್ತೆ: ತಪ್ಪಿದ ಅನಾಹುತ
‘ತಲೆ ಮೇಲೆ ಗಾನವಿ ಕಾಲಿಟ್ಟಳು’: ಬಿಗ್ ಬಾಸ್ ಒಳಗಿನ ವಿಷಯ ತೆರೆದಿಟ್ಟ ಸೋನಿಕಾ
‘ತಲೆ ಮೇಲೆ ಗಾನವಿ ಕಾಲಿಟ್ಟಳು’: ಬಿಗ್ ಬಾಸ್ ಒಳಗಿನ ವಿಷಯ ತೆರೆದಿಟ್ಟ ಸೋನಿಕಾ
ರಾಜ್ಯಾದ್ಯಂತ ಹಾಫ್ ಹೆಲ್ಮೆಟ್ ಬ್ಯಾನ್‌:ಸಚಿವ ಬೈರತಿ ಸುರೇಶ್ ಮಹತ್ವದ ಮಾಹಿತಿ
ರಾಜ್ಯಾದ್ಯಂತ ಹಾಫ್ ಹೆಲ್ಮೆಟ್ ಬ್ಯಾನ್‌:ಸಚಿವ ಬೈರತಿ ಸುರೇಶ್ ಮಹತ್ವದ ಮಾಹಿತಿ
ರೇಷನ್ ಕಾರ್ಡ್‌ಗಾಗಿ 40 ವರ್ಷಗಳಿಂದ ಒಂಟಿ ವೃದ್ಧೆಯ ಪರದಾಟ
ರೇಷನ್ ಕಾರ್ಡ್‌ಗಾಗಿ 40 ವರ್ಷಗಳಿಂದ ಒಂಟಿ ವೃದ್ಧೆಯ ಪರದಾಟ
‘ನಾನು ಕನ್ನಡ ನಟರ ಬಗ್ಗೆ ತಪ್ಪಾಗಿ ಮಾತನಾಡಿಲ್ಲ’; ಶ್ರೀರಾಮ್ ಸ್ಪಷ್ಟನೆ
‘ನಾನು ಕನ್ನಡ ನಟರ ಬಗ್ಗೆ ತಪ್ಪಾಗಿ ಮಾತನಾಡಿಲ್ಲ’; ಶ್ರೀರಾಮ್ ಸ್ಪಷ್ಟನೆ
ಸಾರಿಗೆ ನೌಕರರಿಗೆ ಗುಡ್ ನ್ಯೂಸ್: 280 ಕೋಟಿ ರೂ. ವೇತನ ಹಿಂಬಾಕಿ ಬಿಡುಗಡೆ
ಸಾರಿಗೆ ನೌಕರರಿಗೆ ಗುಡ್ ನ್ಯೂಸ್: 280 ಕೋಟಿ ರೂ. ವೇತನ ಹಿಂಬಾಕಿ ಬಿಡುಗಡೆ
ಹೊಸ ಗಂಗಾ ಮನೆಯ ಬಗ್ಗೆ ಮುಕ್ತವಾಗಿ ಹಂಚಿಕೊಂಡ ಸಿಎಂ ಡಿಕೆ ಶಿವಕುಮಾರ್‌
ಹೊಸ ಗಂಗಾ ಮನೆಯ ಬಗ್ಗೆ ಮುಕ್ತವಾಗಿ ಹಂಚಿಕೊಂಡ ಸಿಎಂ ಡಿಕೆ ಶಿವಕುಮಾರ್‌
ಇ-ಕೆವೈಸಿ ಹೆಸರಲ್ಲಿ ವಸೂಲಿಗಿಳಿದ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕಠಿಣ ಕ್ರಮ
ಇ-ಕೆವೈಸಿ ಹೆಸರಲ್ಲಿ ವಸೂಲಿಗಿಳಿದ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕಠಿಣ ಕ್ರಮ