AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇದಿಕೆ ಮೇಲೆ ಹಾಡು ಹಾಡುತ್ತಲೇ ಕುಸಿದು ಬಿದ್ದು ಪ್ರಾಣ ಬಿಟ್ಟ ಮಾಜಿ ಶಿಕ್ಷಕ

ಇತ್ತೀಚಿನ ದಿನಗಳಲ್ಲಿ ಹಿರಿಯರು ಮಕ್ಕಳೆನ್ನದೆ ಎಲ್ಲಾ ವಯೋಮಿತಿಯವರು ಹೃದಯಾಘಾತದಿಂದ ಸಾವನ್ನಪ್ಪುವ ಪ್ರಕರಣಗಳು ತೀರಾ ಹೆಚ್ಚಾಗುತ್ತಿದೆ. ಇಂತಹದ್ದೇ ಪ್ರಕರಣವೊಂದು ಇದೀಗ ಬೆಳಕಿಗೆ ಬಂದಿದ್ದು, ಮಹಾರಾಷ್ಟ್ರದಲ್ಲಿ ಮಾಜಿ ಶಿಕ್ಷಕರೊಬ್ಬರು ಹಳೆ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಖುಷಿ ಖುಷಿಯಿಂದ ಹಾಡು ಹಾಡುತ್ತಿರುವಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ವೇದಿಕೆ ಮೇಲೆ ಹಾಡು ಹಾಡುತ್ತಲೇ ಕುಸಿದು ಬಿದ್ದು ಪ್ರಾಣ ಬಿಟ್ಟ ಮಾಜಿ ಶಿಕ್ಷಕ
ಶಿಕ್ಷಕ ವಿನಾಯಕ್‌ ಸಕರಾಮ್‌ ಕುಂಭಾರ್‌ Image Credit source: Google
ಮಾಲಾಶ್ರೀ ಅಂಚನ್​
|

Updated on: May 31, 2025 | 5:15 PM

Share

ಮಹಾರಾಷ್ಟ್ರ, ಮೇ 31: ಹುಟ್ಟು ಸಾವು (Birth and Death) ಸ್ವಾಭಾವಿಕ. ಜನನದ ನಂತರ ಪ್ರತಿಯೊಬ್ಬ ವ್ಯಕ್ತಿಯೂ ಸಾಯಲೇಬೇಕು. ಆದರೆ ಈ ಸಾವು ಎನ್ನುವುದು ಹೇಗೆ, ಯಾವಾಗ ಯಾವ ರೂಪದಲ್ಲಿ ಬರುತ್ತೇ ಅಂತಾನೇ ಹೇಳಲು ಸಾಧ್ಯವಿಲ್ಲ. ಆದರೆ ಇತ್ತೀಚಿಗೆ ಹೆಚ್ಚಿನವರು ಹೃದಯಾಘಾತಕ್ಕೆ ತುತ್ತಾಗಿಯೇ ಸಾವನ್ನಪ್ಪುತ್ತಿದ್ದಾರೆ. ಅಂತಹದ್ದೇ ಘಟನೆಯೊಂದು ಇದೀಗ ನಡೆದಿದ್ದು, ಮಾಜಿ ಶಿಕ್ಷಕರೊಬ್ಬರು ವೇದಿಕೆ ಮೇಲೆ ಹಾಡು ಹಾಡುತ್ತಲೇ ಪ್ರಾಣ (Teacher dies singing at alumni reunion) ಬಿಟ್ಟಿದ್ದಾರೆ. ಹೌದು ಮಹಾರಾಷ್ಟ್ರದ (Maharashtra) ಪನ್ಹಾಲಾದಲ್ಲಿ 2001-02 ನೇ ಬ್ಯಾಚ್‌ನ ಹಳೆಯ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಪುನರ್ಮಿಲನದ ಕಾರ್ಯಕ್ರಮದಲ್ಲಿ ಮಾಜಿ ಶಿಕ್ಷಕರೊಬ್ಬರು ವೇದಿಕೆ ಮೇಲೆ ಹಾಡು ಹಾಡುತ್ತಲೇ ಕೊನೆಯುಸಿರೆಳೆದಿದ್ದಾರೆ. ತಮ್ಮ ಶಿಕ್ಷಕ ಹಾಡಿದ ಹಾಡನ್ನು ಕೇಳುತ್ತಾ ಕಾರ್ಯಕ್ರಮದಲ್ಲಿ ಎಂಜಾಯ್‌ ಮಾಡ್ತಿದ್ದ ಹಳೆ ವಿದ್ಯಾರ್ಥಿಗಳಿಗೆ ತಮ್ಮ ಪ್ರೀತಿಯ ಶಿಕ್ಷಕನ ಸಾವಿನ ಸುದ್ದಿ ಬರ ಸಿಡಿಲು ಬಡಿದಂತಾಗಿದೆ.

ವೇದಿಕೆ ಮೇಲೆ ಹಾಡು ಹಾಡುತ್ತಲೇ ಕುಸಿದು ಬಿದ್ದು ಪ್ರಾಣ ಬಿಟ್ಟ ಮಾಜಿ ಶಿಕ್ಷಕ:

ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಪ್ರಕರಣಗಳು ತೀರಾ ಹೆಚ್ಚಾಗಿದೆ. ಅಂತಹದ್ದೇ ಘಟನೆ ಮಹಾರಾಷ್ಟ್ರದ ಪನ್ಹಾಲಾದಲ್ಲಿ ನಡೆದಿದ್ದು, ಹಳೆ ವಿದ್ಯಾರ್ಥಿಗಳ ಪುನರ್‌ಮಿಲನ ಕಾರ್ಯಕ್ರಮದಲ್ಲಿ ಹಾಡು ಹಾಡುತ್ತಿರುವಾಗಲೇ ಮಾಜಿ ಶಿಕ್ಷಕರೊಬ್ಬರು ವೇದಿಕೆ ಮೇಲೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

2001-02 ನೇ ಸಾಲಿನ ಹಳೆಯ ವಿದ್ಯಾರ್ಥಿಗಳು ಆಯೋಜಿಸಿದ್ದ ಪುನರ್ಮಿನಲ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಶಿಕ್ಷಕ ವಿನಾಯಕ್‌ ಸಕರಾಮ್‌ ಕುಂಭಾರ್‌ ವೇದಿಕೆ ಮೇಲೆ ಹಾಡು ಹಾಡುತ್ತಲೇ ಕೊನೆಯುಸಿರೆಳೆದಿದ್ದಾರೆ. 78 ವರ್ಷ ವಯಸ್ಸಿನ ಕುಂಭಾರ್‌ ಹೃದಯಘಾತದಿಂದ ಸಾವನ್ನಪ್ಪಿದ್ದು, ನೆಚ್ಚಿನ ಶಿಕ್ಷಕನ ಸಾವಿನ ಸುದ್ದಿ ಕೇಳಿ ಕಾರ್ಯಕ್ರಮದಲ್ಲಿ ಸೇರಿದ್ದ ವಿದ್ಯಾರ್ಥಿಗಳಿಗೆ ಬರ ಸಿಡಿಲು ಬಂದು ಬಡಿದಂತಾಗಿದೆ.

ಇದನ್ನೂ ಓದಿ
Image
ಥೈಲ್ಯಾಂಡ್‌ನಲ್ಲಿ ಭಾರತೀಯ ಪ್ರವಾಸಿಗನ ಮೇಲೆ ಹುಲಿ ದಾಳಿ
Image
ಕೋಪದ ಭರದಲ್ಲಿ ಗಂಡನ ಮೇಲೆ ಕೊತ ಕೊತ ಕುದಿಯುತ್ತಿದ್ದ ಎಣ್ಣೆ ಸುರಿದ ಪತ್ನಿ
Image
ಮಡದಿಗೆ ನೈಲ್ ಪಾಲಿಶ್ ಹಚ್ಚಿದ ವೃದ್ಧ
Image
ಬಸ್‌ ಚಲಾಯಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ

ಇದನ್ನೂ ಓದಿ: ಬಸ್‌ ಚಲಾಯಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ; ಪ್ರಯಾಣಿಕರನ್ನು ರಕ್ಷಿಸಿದ ಕಂಡಕ್ಟರ್‌

2005 ರಲ್ಲಿ ನಿವೃತ್ತರಾದ ವಿನಾಯಕ ಸಕರಾಮ್ ಕುಂಭರ್ ಅವರಿಗೆ ಮೊದಲು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಕೇಳಲಾಯಿತು. ತಮ್ಮ ಅಭಿಪ್ರಾಯವನ್ನು ಹಾಗೂ ತಮ್ಮ ವಿದ್ಯಾರ್ಥಿಗಳಿಗೆ ಒಂದಷ್ಟು ಜೀವನ ಪಾಠವನ್ನು ಬೋಧನೆ ಮಾಡಿ, ಖುಷಿಯಾಗಿ ಹಾಡು ಹಾಡುತ್ತಿರುವಾಗಲೇ ಅವರು ಹೃದಯಾಘಾತಕ್ಕೆ ತುತ್ತಾಗಿ ವೇದಿಕೆ ಮೇಲೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ತಮ್ಮ ಕಣ್ಣೆದುರಲ್ಲೇ ಪ್ರಾಣ ಬಿಟ್ಟ ನೆಚ್ಚಿನ ಶಿಕ್ಷಕನನ್ನು ಕಂಡು ಹಳೆ ವಿದ್ಯಾರ್ಥಿಗಳು ಆಘಾತಕ್ಕೊಳಗಾಗಿದ್ದಾರೆ.

ಆ ತಕ್ಷಣ ಅವರನ್ನು  ಸಾಂಗ್ಲಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.  ಕುಂಭರ್ ಅವರ ಒಬ್ಬ ಮಗ ಪುಣೆಯಲ್ಲಿ ಮತ್ತು ಇನ್ನೊಬ್ಬ ಮಗ ದೆಹಲಿಯಲ್ಲಿ ಇರುವುದರಿಂದ ಮೃತದೇಹವನ್ನು ಖಾಸಗಿ ಆಸ್ಪತ್ರೆಯಲ್ಲಿ ಇಡಲಾಗಿದೆ. ಮಕ್ಕಳು ಮನೆಗೆ ಹಿಂದಿರುಗಿದ ನಂತರ ಅಂತ್ಯಕ್ರಿಯೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!