AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video : ಸರಿಯಾದ ಸಮಯಕ್ಕೆ ಬಾರದ ಆಂಬ್ಯುಲೆನ್ಸ್, ನಡುರಸ್ತೆಯಲ್ಲೇ ಮಹಿಳೆಗೆ ಹೆರಿಗೆ ಮಾಡಿಸಿದ ನಾರಿಯರು

ಹೆರಿಗೆ ನೋವು ಕಾಣಿಸಿಕೊಂಡಾಗ ಆಸ್ಪತ್ರೆಗೆ ಸಾಗಿಸಲು ಸರಿಯಾದ ವ್ಯವಸ್ಥೆಯಿರಬೇಕು. ಹೌದು, ಆರೋಗ್ಯ ಸೌಲಭ್ಯದ ಕೊರತೆಯಿಂದ ಮಾರ್ಗ ಮಧ್ಯದಲ್ಲೇ ಹೆರಿಗೆಯಾದ ಘಟನೆಗಳ ಬಗ್ಗೆ ನೀವು ಕೇಳುತ್ತೀರಿ. ಆದರೆ ಇದೀಗ ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಾರದ ಕಾರಣ ಮಹಿಳೆಯರು ಸೇರಿ, ಆದಿವಾಸಿ ಮಹಿಳೆಗೆ ಮಾರ್ಗ ಮಧ್ಯದಲ್ಲೇ ಹೆರಿಗೆ ಮಾಡಿಸಿದ್ದು, ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ ಬಳಕೆದಾರರು ಈ ಮಹಿಳೆಯರು ಮಾಡಿದ ಕೆಲಸವನ್ನು ಮೆಚ್ಚಿಕೊಂಡಿದ್ದಾರೆ.

Video : ಸರಿಯಾದ ಸಮಯಕ್ಕೆ ಬಾರದ ಆಂಬ್ಯುಲೆನ್ಸ್, ನಡುರಸ್ತೆಯಲ್ಲೇ ಮಹಿಳೆಗೆ ಹೆರಿಗೆ ಮಾಡಿಸಿದ ನಾರಿಯರು
ವೈರಲ್ ವಿಡಿಯೋImage Credit source: Twitter
TV9 Web
| Edited By: |

Updated on: Jun 01, 2025 | 7:45 PM

Share

ಮಹಾರಾಷ್ಟ್ರ, ಜೂನ್ 1 : ಹೆರಿಗೆ (Childbirth) ಎನ್ನುವುದು ಹೆಣ್ಣಿಗೆ ಮರುಹುಟ್ಟು ಇದ್ದಂತೆ. ಮಗುವಿಗೆ ಜನ್ಮ ನೀಡುವುದು ಹೆಣ್ಣಿಗೆ ಹುಟ್ಟು ಸಾವಿನ ನಡುವಿನ ಹೋರಾಟ. ಹೀಗಾಗಿ ಈ ಸಮಯದಲ್ಲಿ ಆಕೆ ಅನುಭವಿಸುವ ನೋವನ್ನು ಹೇಳಲು ಅಸಾಧ್ಯ. ಹೆರಿಗೆ ನೋವು ಕಾಣಿಸಿಕೊಂಡಾಗ ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಾಗುತ್ತದೆ. ಕೆಲವೊಮ್ಮೆ ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್‌ ಬರುವುದೇ ಇಲ್ಲ. ಹೀಗಾಗಿ ಮಾರ್ಗ ಮಧ್ಯದಲ್ಲೇ ಹೆರಿಗೆ ಆಗುವುದಿದೆ. ಆದರೆ ಇದೀಗ ಆರೋಗ್ಯ ಸೌಲಭ್ಯದ ಕೊರತೆಯಿಂದ ಆದಿವಾಸಿ ಮಹಿಳೆಯೊಬ್ಬರು ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ. ಈ ಘಟನೆಯೂ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆ (Jalgaon district of Maharashtra) ಯಲ್ಲಿ ನಡೆದಿದೆ ಎನ್ನಲಾಗಿದೆ. ರಸ್ತೆ ಮಧ್ಯದಲ್ಲೇ ಮಹಿಳೆಯರು ಈ ಮಹಿಳೆಗೆ ಹೆರಿಗೆ ಮಾಡಿಸಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

@theobserverpost ಹೆಸರಿನ ಖಾತೆಯಲ್ಲಿ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ಈ ಮೂರ್ನಾಲ್ಕು ಮಹಿಳೆಯರು ಸೀರೆಯನ್ನು ಅಡ್ಡಲಾಗಿ ಹಿಡಿದು ರಸ್ತೆ ಬದಿಯಲ್ಲಿ ಮಹಿಳೆಗೆ ಹೆರಿಗೆ ಮಾಡಿಸಿದ್ದಾರೆ. ಈ ಆದಿವಾಸಿ ಮಹಿಳೆಯ ಗಂಡನು ಅಲ್ಲೇ ನಿಂತಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದು.

ಇದನ್ನೂ ಓದಿ
Image
ವೇದಿಕೆ ಮೇಲೆ ಹಾಡು ಹಾಡುತ್ತಲೇ ಕುಸಿದು ಬಿದ್ದು ಪ್ರಾಣ ಬಿಟ್ಟ ಮಾಜಿ ಶಿಕ್ಷಕ
Image
ಬಸ್ಸಿನ ಹಿಂಬದಿ ಸೀಟಿನಲ್ಲಿ ಕುಳಿತು ಪ್ರೇಮಿಗಳಿಬ್ಬರ ರೊಮ್ಯಾನ್ಸ್‌
Image
ಥೈಲ್ಯಾಂಡ್‌ನಲ್ಲಿ ಭಾರತೀಯ ಪ್ರವಾಸಿಗನ ಮೇಲೆ ಹುಲಿ ದಾಳಿ
Image
ಕೋಪದ ಭರದಲ್ಲಿ ಗಂಡನ ಮೇಲೆ ಕೊತ ಕೊತ ಕುದಿಯುತ್ತಿದ್ದ ಎಣ್ಣೆ ಸುರಿದ ಪತ್ನಿ

ಇದನ್ನೂ ಓದಿ : ಡಿಜಿಟಲ್ ಪಾವತಿಗೆ ಮೊಬೈಲ್ ಬೇಕಿಲ್ಲ, ಕೈಯ ಉಗುರಿನಿಂದ ಪಾವತಿ ಸಾಧ್ಯ

ಅಂದಹಾಗೆ, ವೈದ್ಯರು ಶಾಂತಾಬಾಯಿ ಬರೇಲಾ ಎಂಬ 24 ವರ್ಷದ ಮಹಿಳೆಗೆ ಮೇ 25 ಕ್ಕೆ ಹೆರಿಗೆ ದಿನಾಂಕ ನೀಡಿದ್ದರು. ಆದರೆ ಮೂರು ದಿನ ಮುಂಚಿತವಾಗಿಯೇ ಹೆರಿಗೆ ನೋವು ಕಾಣಿಸಿಕೊಂಡಿದೆ. ನೋವು ಕಾಣಿಸಿಕೊಂಡ ತಕ್ಷಣವೇ ಆಕೆಯ ಪತಿ ವಿಶ್ವನಾಥ್ ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್‌ಗೆ ಕರೆ ಮಾಡಿದ್ದಾರೆ. ಮೂವತ್ತು ನಿಮಿಷಗಳ ಕಾಲ ಕಾದರೂ ಕೂಡ ಆಂಬ್ಯುಲೆನ್ಸ್ ಬರಲೇ ಇಲ್ಲ. ಕೊನೆಗೆ ಹಿಂದೆ ಮುಂಚೆ ಯೋಚಿಸದೇ ಪತ್ನಿಯನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಆಸ್ಪತ್ರೆಗೆ ಕರೆದೊಯ್ದಿದ್ದು, ಆಸ್ಪತ್ರೆ ತಲುಪಲು ಒಂದೂವರೇ ಕಿಲೋಮೀಟರ್ ಇರುವಾಗಲೇ ಮಹಿಳೆಗೆ ರಸ್ತೆಯಲ್ಲೇ ಹೆರಿಗೆಯಾಗಿದೆ. ದಾರಿಹೋಕ ಮಹಿಳೆಯರು ಸೇರಿ ಈ ಮಹಿಳೆಗೆ ಹೆರಿಗೆ ಮಾಡಿಸಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಈ ವಿಡಿಯೋವೊಂದು ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, ಬಳಕೆದಾರರೊಬ್ಬರು, ನಮ್ಮಂಥ ಬಡವರ ಕಥೆ ಇಷ್ಟೇ, ಇದನ್ನು ನೋಡಿದರೆ ತುಂಬಾ ದುಃಖ ಆಗುತ್ತೆ ಎಂದಿದ್ದಾರೆ. ಮತ್ತೊಬ್ಬ ಬಳಕೆದಾರರು, ಆ ದೇವರು ನಿನಗೆ ಆಯಸ್ಸು ಕೊಡಲಿ ಅಮ್ಮ ಎಂದು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ. ಇನ್ನೊಬ್ಬರು, ಪ್ರಾಣ ಒತ್ತೆ ಇಟ್ಟು ಜನ್ಮ ನೀಡುವವಳು ತಾಯಿ ಮಾತ್ರ, ಆಕೆಯ ತೀರಿಸಲು ಸಾಧ್ಯವೇ ಇಲ್ಲ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ