AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಭೀಕರ ಅಪಘಾತದಲ್ಲಿ ಯುವಕನ ಕಣ್ಣಿನೊಳಗೆ ನುಗ್ಗಿದ ಬೈಕ್‌ನ ಬ್ರೇಕ್ ಹ್ಯಾಂಡಲ್

ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ ವೈದ್ಯರು ಯುವಕನನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿದ್ದು, ಕಣ್ಣಿನ ಒಳಗೆ ನುಗ್ಗಿದ ಬೈಕ್‌ನ ಬ್ರೇಕ್ ಹ್ಯಾಂಡಲ್​​ ಅನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ. CT ಸ್ಕ್ಯಾನ್‌ ಮಾಡಲಾಗಿದ್ದು, ಈವೇಳೆ ಕಣ್ಣಿನ ಗುಡ್ಡೆಗಿಂತ ಕೆಲವೇ ಕೆಲವು ಮಿಲಿ ಮೀಟರ್​​ ಅಂತದಲ್ಲಿ ಬ್ರೇಕ್ ಹ್ಯಾಂಡಲ್ ಸಿಲುಕಿರುವುದು ಕಂಡುಬಂದಿದ್ದು, ಸದ್ಯ ಕಣ್ಣಿನ ಗುಡ್ಡೆಗೆ ಯಾವುದೇ ಹಾನಿಯಾಗಿಲ್ಲ.

Viral News: ಭೀಕರ ಅಪಘಾತದಲ್ಲಿ ಯುವಕನ ಕಣ್ಣಿನೊಳಗೆ ನುಗ್ಗಿದ ಬೈಕ್‌ನ ಬ್ರೇಕ್ ಹ್ಯಾಂಡಲ್
ಯುವಕನ ಕಣ್ಣಿನೊಳಗೆ ನುಗ್ಗಿದ ಬೈಕ್‌ನ ಬ್ರೇಕ್ ಹ್ಯಾಂಡಲ್
ಅಕ್ಷತಾ ವರ್ಕಾಡಿ
|

Updated on: Apr 11, 2024 | 12:29 PM

Share

ಮಲೇಷ್ಯಾ: ಭೀಕರ ರಸ್ತೆ ಅಪಘಾತದಲ್ಲಿ ಬೈಕ್​​ನಲ್ಲಿ ಸಂಚರಿಸುತ್ತಿದ್ದ 19 ವರ್ಷದ ಯುವಕನ ಕಣ್ಣಿನೊಳಗೆ ಬೈಕ್‌ನ ಬ್ರೇಕ್ ಹ್ಯಾಂಡಲ್ ನುಗ್ಗಿದೆ. ತಕ್ಷಣ ಆತನನ್ನು ಹತ್ತಿರದ ಆಸ್ಪತ್ರೆಗೆ ದಾಖಲಾಗಿಸಲಾಗಿದ್ದು, ವೈದ್ಯರ ಸಮಯ ಪ್ರಜ್ಞೆಯಿಂದಾಗಿ ಇದೀಗ ಯುವಕ ಯಾವುದೇ ದೃಷ್ಟಿ ದೋಷದ ಸಮಸ್ಯೆಯಿಲ್ಲದೇ ಚೇತರಿಸಿಕೊಳ್ಳುತ್ತಿದ್ದಾನೆ. ಈ ಈ ಘಟನೆ ಮಲೇಷ್ಯಾದ ಕೌಲಾಲಂಪುರ್‌ ನಲ್ಲಿ ನಡೆದಿದೆ.

ಯುವಕನನ್ನು ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ ವೈದ್ಯರು ಯುವಕನನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿದ್ದು, ಕಣ್ಣಿನ ಒಳಗೆ ನುಗ್ಗಿದ ಬೈಕ್‌ನ ಬ್ರೇಕ್ ಹ್ಯಾಂಡಲ್​​ ಅನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ. CT ಸ್ಕ್ಯಾನ್‌ ಮಾಡಲಾಗಿದ್ದು, ಈವೇಳೆ ಕಣ್ಣಿನ ಗುಡ್ಡೆಗಿಂತ ಕೆಲವೇ ಕೆಲವು ಮಿಲಿ ಮೀಟರ್​​ ಅಂತದಲ್ಲಿ ಬ್ರೇಕ್ ಹ್ಯಾಂಡಲ್ ಸಿಲುಕಿರುವುದು ಕಂಡುಬಂದಿದ್ದು, ಸದ್ಯ ಕಣ್ಣಿನ ಗುಡ್ಡೆಗೆ ಯಾವುದೇ ಹಾನಿಯಾಗಿಲ್ಲ. ಕಣ್ಣುಗುಡ್ಡೆಯ ಕೆಳಗೆ ಭಾಗ ಹಾಗೂ ಮೂಗಿನ ಸುತ್ತಲಿನ ಮೂಳೆಗೆ ಹಾನಿಯಾಗಿದ್ದು, ಮೂಗಿನ ಸುತ್ತಲಿನ ಹಾನಿಗೊಳಗಾದ ಮೂಳೆಯನ್ನು ಎರಡು ಸ್ಕ್ರೂಗಳಿಂದ ಸರಿಪಡಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: 7 ಕೆಜಿ ಚಿನ್ನದಿಂದ ತಯಾರಿಸಿದ ರಾಮಾಯಣ ಪುಸ್ತಕ; ಅಯೋಧ್ಯಾ ರಾಮನಿಗೆ ಸಮರ್ಪಿಸಿದ ನಿವೃತ್ತ ಐಎಎಸ್ ಅಧಿಕಾರಿ

ಕೌಲಾಲಂಪುರ್‌ನಲ್ಲಿರುವ ಯೂನಿವರ್ಸಿಟಿಯ ಕಣ್ಣಿನ ಸಂಶೋಧನಾ ಕೇಂದ್ರದಲ್ಲಿ ಆತನ ಕಣ್ಣಿನ ಒಳಗೆ ನುಗ್ಗಿದ್ದ ಬೈಕ್‌ನ ಬ್ರೇಕ್ ಹ್ಯಾಂಡಲ್​​ನ CT ಸ್ಕ್ಯಾನ್‌ ಚಿತ್ರವನ್ನು ಹಂಚಿಕೊಂಡಿದ್ದಾರೆ. ಸದ್ಯ ಶಸ್ತ್ರಚಿಕಿತ್ಸೆಯ ಬಳಿಕ ಯುವಕ ಚೇತರಿಸಿಕೊಳ್ಳುತ್ತಿದ್ದು, ಯುವಕನ ದೃಷ್ಟಿಗೆ ಯಾವುದೇ ಹಾನಿಯಾಗಿಲ್ಲ ಎಂದು ವೈದ್ಯರು ತಿಳಿಸಿರುವುದು ವರದಿಯಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!