ಪತ್ನಿಗೆ ಫೋನ್‌ನಲ್ಲೇ ತಲಾಖ್ ನೀಡಿ ಪಾಕಿಸ್ತಾನದ ಯುವತಿಯನ್ನು ವರಿಸಿದ ಭಾರತದ ವ್ಯಕ್ತಿ

ಉದ್ಯೋಗದ ಕಾರಣಕ್ಕೆ ಕುವೈತ್‌ನಲ್ಲಿ ವಾಸವಿದ್ದ ರೆಹಮಾನ್​​​ಗೆ ಸೋಶಿಯಲ್​ ಮೀಡಿಯಾ ಮೂಲಕ ಪಾಕಿಸ್ತಾನದ ಯುವತಿಯ ಪರಿಚಯವಾಗಿದೆ. ಪರಿಚಯ ಪ್ರೀತಿಗೆ ತಿರುಗಿದ್ದು, ಕುವೈತ್‌ನಿಂದ ತನ್ನ ಮೊದಲ ಪತ್ನಿಗೆ ದೂರವಾಣಿ ಮೂಲಕ ಕರೆ ಮಾಡಿ ತ್ರಿವಳಿ ತಲಾಖ್ ನೀಡಿದ್ದಾನೆ. ಬಳಿಕ ಪಾಕಿಸ್ತಾನಿ ಯುವತಿಯನ್ನು ವಿವಾಹವಾಗಿದ್ದಾನೆ.

ಪತ್ನಿಗೆ ಫೋನ್‌ನಲ್ಲೇ ತಲಾಖ್ ನೀಡಿ ಪಾಕಿಸ್ತಾನದ ಯುವತಿಯನ್ನು ವರಿಸಿದ ಭಾರತದ ವ್ಯಕ್ತಿ
ಪತ್ನಿಗೆ ಫೋನ್‌ನಲ್ಲೇ ತಲಾಖ್
Follow us
ಅಕ್ಷತಾ ವರ್ಕಾಡಿ
|

Updated on: Aug 15, 2024 | 11:40 AM

ಜೈಪುರ: ಪತ್ನಿಗೆ ಫೋನ್‌ನಲ್ಲೇ ತಲಾಖ್ ನೀಡಿ ಪಾಕಿಸ್ತಾನದ ಯುವತಿಯನ್ನು ಭಾರತದ ವ್ಯಕ್ತಿಯೊರ್ವ ಮದುವೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಪಾಕಿಸ್ತಾನಿ ಮಹಿಳೆಯನ್ನು ಮದುವೆಯಾಗುವ ಮೊದಲು ತಾನು ಕೆಲಸ ಮಾಡುತ್ತಿದ್ದ ಕುವೈತ್‌ನಿಂದ ತನ್ನ ಮೊದಲ ಪತ್ನಿಗೆ ದೂರವಾಣಿ ಮೂಲಕ ಕರೆ ಮಾಡಿ ತ್ರಿವಳಿ ತಲಾಖ್ ನೀಡಿದ್ದಾನೆ. ಇದೀಗ ಆರೋಪಿಯಾದ ರೆಹಮಾನ್ (35)ನನ್ನು ರಾಜಸ್ಥಾನದ ವಿಮಾನ ನಿಲ್ದಾಣದಿಂದ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉದ್ಯೋಗದ ಕಾರಣಕ್ಕೆ ಕುವೈತ್‌ನಲ್ಲಿ ವಾಸವಿದ್ದ ರೆಹಮಾನ್​​​ಗೆ ಸೋಶಿಯಲ್​ ಮೀಡಿಯಾ ಮೂಲಕ ಪಾಕಿಸ್ತಾನದ ಯುವತಿಯ ಪರಿಚಯವಾಗಿದೆ. ಪರಿಚಯ ಪ್ರೀತಿಗೆ ತಿರುಗಿದ್ದು, ಇತ್ತೀಚಿಗಷ್ಟೇ ಆಕೆಯನ್ನು ಭೇಟಿಯಾಗಿ ವಿವಾಹವಾಗಿದ್ದಾನೆ. ಇದಲ್ಲದೇ ಕುವೈತ್‌ನಿಂದಲೇ ಕರೆ ಮಾಡಿ ತನ್ನ ಮೊದಲ ಪತ್ನಿಗೆ ತಲಾಕ್​​​ ನೀಡಿದ್ದಾನೆ.

ಇದನ್ನೂ ಓದಿ: ಇಬ್ಬರು ಯುವತಿಯರ ಜೊತೆ ಕಾರಿನಲ್ಲಿ ಯುವಕನ ಸರಸ ಸಲ್ಲಾಪ; ವಿಡಿಯೋ ವೈರಲ್​

ಹನುಮಾನ್‌ಗಢದ ಭದ್ರಾದಲ್ಲಿರುವ ಮೊದಲ ಪತ್ನಿ ಫರೀದಾ ಬಾನೊ (29) ಕಳೆದ ತಿಂಗಳು ತನ್ನ ಪತಿ ರೆಹಮಾನ್ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ತ್ರಿವಳಿ ತಲಾಖ್ ಮೂಲಕ ವಿಚ್ಛೇದನ ನೀಡಿದ ಆರೋಪದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಹನುಮಾನ್‌ಗಢ ಉಪ ಎಸ್‌ಪಿ (ಎಸ್‌ಸಿ/ಎಸ್‌ಟಿ ಸೆಲ್) ರಣವೀರ್ ಸಿಂಗ್ ಹೇಳಿದ್ದಾರೆ. ಇದೀಗ ಮಹಿಳೆಯ ದೂರಿನ ಆಧಾರದ ಮೇಲೆ ರೆಹಮಾನ್ನನ್ನು ರಾಜಸ್ಥಾನದ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ