Trending: ಮಗುವಿನ ಬಾಯಿಗೆ ಇ ಸಿಗರೇಟ್ ಇಟ್ಟು ವಿಡಿಯೋ ಮಾಡಿದ ವ್ಯಕ್ತಿ ಪೊಲೀಸರ ಅತಿಥಿ

e cigarette : ಸೋಶಿಯಲ್ ಮೀಡಿಯಾದಲ್ಲಿ ಪ್ರಸಿದ್ಧಿ ಪಡೆಯಬೇಕೆಂಬ ಹುಚ್ಚಿಗೆ ಬಿದ್ದಿರುವ ಅನೇಕರು ವಿವೇಚನೆ ಕಳೆದುಕೊಳ್ಳುತ್ತಿದ್ದಾರೆ. ಈಗ ಈ ವ್ಯಕ್ತಿಗೆ 20 ವರ್ಷ ಜೈಲುಶಿಕ್ಷೆಯ ಸಾಧ್ಯತೆ ಇದೆ.

Trending: ಮಗುವಿನ ಬಾಯಿಗೆ ಇ ಸಿಗರೇಟ್ ಇಟ್ಟು ವಿಡಿಯೋ ಮಾಡಿದ ವ್ಯಕ್ತಿ ಪೊಲೀಸರ ಅತಿಥಿ
source : Twitter
Follow us
TV9 Web
| Updated By: ಶ್ರೀದೇವಿ ಕಳಸದ

Updated on:Aug 11, 2022 | 11:01 AM

ನಿಕೋಟಿನ್ ಪರಿಮಳವುಳ್ಳ ಇನ್​ಹೇಲರ್ ಡಿವೈಸ್​ (e cigarette) ಅನ್ನು ಮಗುವಿನ ಬಾಯಿಗಿಟ್ಟ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕೃತ್ಯ ನಡೆದಿದ್ದು ಮಲೇಷಿಯಾದಲ್ಲಿ. ಇದಕ್ಕೆ ಕಾರಣನಾದ ವ್ಯಕ್ತಿ ಈಗ ಪೊಲೀಸರ ಅತಿಥಿ. ಈ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್ ಮಾಡಿದ್ದು ಈತನ ಸ್ನೇಹಿತನೇ. ಮಗುವಿನ ತಾಯಿ ನೀಡಿದ ದೂರಿನ ಅನ್ವಯ ಆ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ವಿವೇಚನಾರಹಿತ ಕ್ರಮಕ್ಕಾಗಿ ಈತನಿಗೆ 20 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸುವ ಸಾಧ್ಯತೆ ಇದೆ.

ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್​, ವ್ಯೂವ್ಸ್​ ಪಡೆಯಲು ಜನರು ಇಂಥ ವಿವೇಚನಾರಹಿತ ಮತ್ತು ವಿಚಿತ್ರ ಕೃತ್ಯಗಳಿಗೆ ಈಡಾಗುವುದು ಮತ್ತೊಬ್ಬರನ್ನು ಈಡು ಮಾಡುವುದು ನಡೆಯುತ್ತಲೇ ಇದೆ. ತಾನು ಪ್ರಸಿದ್ಧನಾಗಬೇಕೆಂಬ ಆಸೆಯಿಂದ ಇಂತ ಮೂರ್ಖತನಕ್ಕೆ ಕೈಹಾಕಿದ ಈ ವ್ಯಕ್ತಿ ಈಗ ಇಂಥ ದೊಡ್ಡ ಶಿಕ್ಷೆಗೆ ಒಳಗಾಗುತ್ತಿದ್ದಾನೆ ಎಂದರೆ ಯೋಚಿಸಿ.

ಈ ಯುವಕನಿಗೆ 23 ವರ್ಷ. ಇ ಸಿಗರೇಟ್​ ಅನ್ನು ಬಾಯಿಗಿಟ್ಟ ಮಗು ಆತನ ಸ್ನೇಹಿತನ ಸಹೋದರಿಯದು. ಆರೋಪಿಯು ತನ್ನ ಸ್ನೇಹಿತ ಮತ್ತು ಮಗುವಿನ ತಾಯಿಯೊಂದಿಗೆ ರೆಸ್ಟೋರೆಂಟ್​ಗೆ ಭೇಟಿ ಕೊಟ್ಟಾಗ ಈ ಘಟನೆ ನಡೆದಿದೆ. ತಮಾಷೆ ಮಾಡಲು ಹೋಗಿದ್ದು ಅಪಾರಾಧದ ಸ್ವರೂಪವಾಗಿ ಮಾರ್ಪಟ್ಟಿದೆ ಎಂದು ಪೊಲೀಸ್ ಕಮಾಂಡರ್ ರುಪಿಯಾ ಅಬ್ಜ್​ ತಿಳಿಸಿದ್ದಾರೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಜೈಲು ಶಿಕ್ಷೆಯ ಹೊರತಾಗಿಯೂ ಈ ವ್ಯಕ್ತಿಗೆ ರೂ. 90,000  ದಂಡ ವಿಧಿಸಲಾಗಿದೆ. ಈ ಹಿನ್ನೆಲೆಯಲ್ಲಿ  ಸಾಮಾಜಿಕ ಜಾಲತಾಣಗಳಲ್ಲಿ  ಪೋಸ್ಟ್​ ಮಾಡುವ ವಿಡಿಯೋ, ಫೋಟೋಗಳ ಬಗ್ಗೆ ಸಾರ್ವಜನಿಕರಿಗೆ ಪೊಲೀಸ್ ಎಚ್ಚರಿಕೆ ನೀಡಿದೆ.

ಇನ್ನಷ್ಟು ಇಂಥ ಸುದ್ದಿಯನ್ನು ಓದಲು ಕ್ಲಿಕ್ ಮಾಡಿ

Published On - 10:58 am, Thu, 11 August 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್