ಫೇಸ್‌ಬುಕ್‌ ಲವ್​​​ ಸ್ಟೋರಿ ವಿವಾಹಿತ ಮಹಿಳೆಯ ಮತಾಂತರ; ವ್ಯಕ್ತಿಯ ಬಂಧನ

ವಿವಾಹಿತೆ ಮಹಿಳೆಯೊಬ್ಬಳು ಫೇಸ್​​​ಬುಕ್​​​ನಲ್ಲಿ ಪರಿಚಯವಾದ ಯುವಕನೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದಾಳೆ. ತಾನು ಮದುವೆಯಾಗಿರುವುದನ್ನು ಮರೆತು ಆತನೊಂದಿಗೆ ಓಡಿಹೋಗಿದ್ದಾಳೆ. ಆತನನ್ನು ನಂಬಿ ಹೋದವಳಿಗೆ ಅಲ್ಲಿ ಆಗಿದ್ದೇ ಬೇರೆ..! ಏನಿದು ಘಟನೆ ಇಲ್ಲಿದೆ ಸಂಪೂರ್ಣ ವಿವರ.

ಫೇಸ್‌ಬುಕ್‌ ಲವ್​​​ ಸ್ಟೋರಿ ವಿವಾಹಿತ ಮಹಿಳೆಯ ಮತಾಂತರ; ವ್ಯಕ್ತಿಯ ಬಂಧನ
ಫೇಸ್‌ಬುಕ್‌ ಲವ್​​​ ಸ್ಟೋರಿ ವಿವಾಹಿತ ಮಹಿಳೆಯ ಮತಾಂತರ
Follow us
ಅಕ್ಷತಾ ವರ್ಕಾಡಿ
|

Updated on: Jun 13, 2023 | 10:37 AM

ಉತ್ತರ ಪ್ರದೇಶದ ಸಿದ್ಧಾರ್ಥನಗರದ ವ್ಯಕ್ತಿಯೊಬ್ಬ ದಲಿತ ಕುಟುಂಬಕ್ಕೆ ಸೇರಿದ ವಿವಾಹಿತ ಮಹಿಳೆಯೊಂದಿಗೆ ಫೇಸ್‌ಬುಕ್‌ನಲ್ಲಿ ಸ್ನೇಹ ಬೆಳೆಸಿ, ಆಕೆಯನ್ನು ಪ್ರೀತಿಯ ಬಲೆಗೆ ಬೀಳಿಸಿದ್ದಾನೆ. ತಾನು ಮದುವೆಯಾಗಿರುವುದನ್ನು ಮರೆತು ಆತನೊಂದಿಗೆ ಓಡಿಹೋಗಿದ್ದಾಳೆ. ಆತನನ್ನು ನಂಬಿ ಹೋದವಳನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಗೊಳಿಸಿದ್ದಾನೆ. ಇದೀಗಾ ಘಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಸಿದ್ಧಾರ್ಥನಗರ ಜಿಲ್ಲೆಯ ಮಿಶ್ರೌಲಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾನೂನುಬಾಹಿರ ಧಾರ್ಮಿಕ ಮತಾಂತರದ ಪ್ರಕರಣ ಅಡಿಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.

ಶೈಲೇಶ್‌ ಕುಮಾರ್‌ ಕಳೆದ 4 ವರ್ಷದ ಹಿಂದೆ ಲಕ್ಷ್ಮೀ ಎಂಬಾಕೆಯನ್ನು ವಿವಾಹವಾಗಿದ್ದಾರೆ. ಇದೇ ವರ್ಷದ ಮೇ.31 ರ ರಾತ್ರಿ ತನ್ನ ಫೇಸ್​​​ ಬುಕ್​​​ ಪ್ರಿಯಕರನಿಗಾಗಿ 55 ಸಾವಿರ ನಗದು ಹಾಗೂ ಚಿನ್ನಾಭರಣದೊಂದಿಗೆ ಲಕ್ಷ್ಮೀ ಮನೆ ಬಿಟ್ಟು ಹೋಗಿದ್ದಾರೆ. ಐಪಿಸಿಯ ಸೆಕ್ಷನ್ 504 ಮತ್ತು 506, ಎಸ್‌ಸಿ/ಎಸ್‌ಟಿ ಕಾಯ್ದೆ ಮತ್ತು ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನಿನ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಿದ್ಧಾರ್ಥನಗರದ ಉಪ ಪೊಲೀಸ್ ವರಿಷ್ಠಾಧಿಕಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ವಿಶ್ವ ದಾಖಲೆ ಮಾಡಿದ ಸಾಮೂಹಿಕ ವಿವಾಹ, ದಾಂಪತ್ಯ ಜೀವನಕ್ಕೆ ಕಾಲಿಟ್ಟ 2,143 ಜೋಡಿಗಳು

ಕುಟುಂಬಸ್ಥರು ಕೂಡಲೇ ಪೊಲೀಸ್ ಠಾಣೆಗೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಎರಡು ದಿನಗಳ ನಂತರ, ಜಿಲ್ಲೆಯ ಸಿಸ್ವಾನ್ ಗ್ರಾಮದ ನಿವಾಸಿ ಸಜಾವುಲ್ಲಾ ಎಂಬಾತ ಶೈಲೇಶ್ ಅವರ ಪತ್ನಿಯೊಂದಿಗೆ ಫೇಸ್‌ಬುಕ್‌ನಲ್ಲಿ ಸ್ನೇಹ ಬೆಳೆಸಿ ಕೆಲವು ಸಹಚರರೊಂದಿಗೆ ಮುಂಬೈಗೆ ಕರೆದೊಯ್ದಿರುವುದು ಪತ್ತೆಯಾಗಿದೆ. ಆಕೆಯ ಹೆಸರನ್ನು ಲಕ್ಷ್ಮಿಯಿಂದ ಮುಸ್ಕಾನ್ ಎಂದು ಬದಲಾಯಿಸಿದ್ದರು. ಯುವತಿಯ ಸಂಬಂಧಿಕರು ಮುಂಬೈ ತಲುಪಿ, ಬಳಿಕ ಆಕೆಯನ್ನು ತನ್ನ ಕುಟುಂಬದ ಮನೆಗೆ ಕರೆದುಕೊಂಡು ಬಂದಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ