AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮಗನ ಜತೆಗೆ ಮಾಜಿ ಪತ್ನಿಯ ಮದುವೆಗೆ ಶುಭ ಹಾರೈಸಲು ಬಂದ ವ್ಯಕ್ತಿ

ದಾಂಪತ್ಯ ಜೀವನದ ಸಣ್ಣ ಪುಟ್ಟ ಜಗಳಗಳು ವಿಚ್ಛೇದನಕ್ಕೆ ಕಾರಣ ವಾಗುತ್ತದೆ. ಹೀಗೆ ದೂರವಾದ ದಂಪತಿಗಳು ಮತ್ತೆ ಭೇಟಿಯಾಗುವುದು ಕಡಿಮೆಯೇ. ಆದರೆ, ಇದೀಗ ವಿಚ್ಛೇದನದ ಬಳಿಕ ವ್ಯಕ್ತಿಯೊಬ್ಬರು ತನ್ನ ಮಗನನ್ನು ಮಾಜಿ ಪತ್ನಿಯ ಮದುವೆಗೆ ಕರೆದುಕೊಂಡು ಬಂದಿರುವ ಘಟನೆ ನಡೆದಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರನ್ನು ಹುಬ್ಬೇರಿಸುವಂತೆ ಮಾಡಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಮಗನ ಜತೆಗೆ ಮಾಜಿ ಪತ್ನಿಯ ಮದುವೆಗೆ ಶುಭ ಹಾರೈಸಲು ಬಂದ ವ್ಯಕ್ತಿ
ಸಾಂದರ್ಭಿಕ ಚಿತ್ರImage Credit source: ashvini sihra / 500pxPrime/Getty Images
ಸಾಯಿನಂದಾ
|

Updated on: Oct 02, 2026 | 2:49 PM

Share

ಗಂಡ ಹೆಂಡಿರ (husband- wife)ನಡುವೆ ಸಣ್ಣ ಪುಟ್ಟ ಮನಸ್ತಾಪಗಳು ಸರ್ವೇ ಸಾಮಾನ್ಯ. ಹೀಗಾದಾಗ ಕುಳಿತು ಬಗೆಹರಿಸುವ ಬದಲು ಕೋರ್ಟ್ ಮೆಟ್ಟಿಲೇರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಆದರೆ ಇಲ್ಲೊಬ್ಬ ವ್ಯಕ್ತಿ ತನ್ನ ಮಾಜಿ ಪತ್ನಿಯ ಮದುವೆಗೆ ಮಗನನ್ನು ಕರೆದುಕೊಂಡು ಬಂದಿದ್ದಾರೆ. ಆದರೆ ತನ್ನ ತಾಯಿಯನ್ನು ಭೇಟಿಯಾಗಲು ಮಗನು ಹಿಂದೇಟು ಹಾಕಿದ್ದಾನೆ. ತಂದೆ ತನ್ನ ಮಗನ ಮನವೊಲಿಸಿ ಮಾಜಿ ಪತ್ನಿಗೆ ಶುಭಾಶಯ ತಿಳಿಸಲು ವೇದಿಕೆ ಹತ್ತಿದ್ದಾರೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮಗನ ಜತೆಗೆ ಮಾಜಿ ಪತ್ನಿ ಮದುವೆಗೆ ಬಂದ ವ್ಯಕ್ತಿ

ಯುವರ್ ಪೇನ್‌ (Your pain) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ತಾಯಿಯಿಂದ ಮಗನನ್ನು ದೂರ ಮಾಡದಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಹೌದು, ತಂದೆ ತನ್ನ ಮಗನನ್ನು ಹೊಸ ಜೀವನಕ್ಕೆ ಕಾಲಿಟ್ಟ ತನ್ನ ಮಾಜಿ ಪತ್ನಿಯ ಬಳಿಗೆ ಕರೆದ್ಯೊಯ್ದಿದ್ದಾರೆ. ಹೊಸ ಜೀವನ ಆರಂಭಿಸುತ್ತಿರುವ ತನ್ನ ಮಾಜಿ ಪತ್ನಿಗೆ ಶುಭ ಹಾರೈಸಿ, ಆಕೆಯ ಪತಿಯನ್ನು ಅಪ್ಪಿಕೊಂಡಿರುವುದನ್ನು ಕಾಣಬಹುದು. ಈ ಮಹಿಳೆ ತನ್ನ ಮಗನನ್ನು ಕಂಡೊಡನೆ ಭಾವುಕರಾಗಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಪ್ರೀತಿಸಿದವಳ ಕೈ ಹಿಡಿಯಲು ಮಗನಿಗೆ ಷರತ್ತು ಹಾಕಿದ ಪೋಷಕರು; ಬೇಸರ ವ್ಯಕ್ತಪಡಿಸಿದ ಯುವಕ

ಈ ವಿಡಿಯೋ ಅಧಿಕ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಯಾವ ಮಕ್ಕಳಿಗೂ ಇಂತಹ ಪರಿಸ್ಥಿತಿ ಬರಬಾರದು ಎಂದಿದ್ದಾರೆ. ಇನ್ನೊಬ್ಬರು, ಮಗ ದೃಷ್ಟಿಯಲ್ಲಿ ತಾಯಿ ಯಾವತ್ತು ಕೆಟ್ಟವಳೇ ಆಗಿ ಉಳಿಯುತ್ತಾಳೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಗುವುದು ಅಂದ್ರೆ ಇದೇ ನೋಡಿ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಮಾದವಾರ ಟೋಲ್‌ನಲ್ಲಿ ನೈಸ್ ಸಂತ್ರಸ್ತ ರೈತರ ಅಹವಾಲು ಸ್ವೀಕರಿಸಿದ ಹೆಚ್​ಡಿಕೆ
ಮಾದವಾರ ಟೋಲ್‌ನಲ್ಲಿ ನೈಸ್ ಸಂತ್ರಸ್ತ ರೈತರ ಅಹವಾಲು ಸ್ವೀಕರಿಸಿದ ಹೆಚ್​ಡಿಕೆ
ಜಂತರ್ ಮಂತರ್‌ನಲ್ಲಿ ಎಎಪಿ ಪ್ರತಿಭಟನೆ
ಜಂತರ್ ಮಂತರ್‌ನಲ್ಲಿ ಎಎಪಿ ಪ್ರತಿಭಟನೆ
ವಿಶ್ವವಿಖ್ಯಾತ ಮೈಸೂರು ದಸರಾ: ರಾಜವಂಶಸ್ಥರಿಗೆ ಆಹ್ವಾನ ನೀಡಿದ ಜಿಲ್ಲಾಡಳಿತ
ವಿಶ್ವವಿಖ್ಯಾತ ಮೈಸೂರು ದಸರಾ: ರಾಜವಂಶಸ್ಥರಿಗೆ ಆಹ್ವಾನ ನೀಡಿದ ಜಿಲ್ಲಾಡಳಿತ
ಸಾಲ ತೀರಿಸಲು ಕಿಡ್ನ್ಯಾಪ್​ ನಾಟಕ: ತಂದೆಗೇ ವಂಚಿಸಲು ಯತ್ನಿಸಿ ತಗ್ಲಾಕೊಂಡ ಮಗ
ಸಾಲ ತೀರಿಸಲು ಕಿಡ್ನ್ಯಾಪ್​ ನಾಟಕ: ತಂದೆಗೇ ವಂಚಿಸಲು ಯತ್ನಿಸಿ ತಗ್ಲಾಕೊಂಡ ಮಗ
ಐಫೆಲ್ ಟವರ್ BAPS ವಿವಾದ: ತನಿಖೆಯಲ್ಲಿ ಸತ್ಯ ಬಯಲು, ಸಂಸ್ಥೆಗೆ ಕ್ಲೀನ್ ಚಿಟ್
ಐಫೆಲ್ ಟವರ್ BAPS ವಿವಾದ: ತನಿಖೆಯಲ್ಲಿ ಸತ್ಯ ಬಯಲು, ಸಂಸ್ಥೆಗೆ ಕ್ಲೀನ್ ಚಿಟ್
ಬೀದರ್​ನಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ!
ಬೀದರ್​ನಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ!
ಮೈಸೂರು-ರಜನಿಕಾಂತ್​​ ನಡುವಿದೆ ಅವಿನಾಭಾವ ನಂಟು: ಕಾರಣ ಇಲ್ಲಿದೆ
ಮೈಸೂರು-ರಜನಿಕಾಂತ್​​ ನಡುವಿದೆ ಅವಿನಾಭಾವ ನಂಟು: ಕಾರಣ ಇಲ್ಲಿದೆ
ದಾವಣಗೆರೆ: ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಚನ್ನಗಿರಿಯಲ್ಲಿ ಪತ್ತೆ
ದಾವಣಗೆರೆ: ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಚನ್ನಗಿರಿಯಲ್ಲಿ ಪತ್ತೆ
ವಚನ ನಾದ ಲೋಕಕ್ಕೆ ಸಾಕ್ಷಿಯಾದ ದೇವನಗರಿ ದಾವಣಗೆರೆ
ವಚನ ನಾದ ಲೋಕಕ್ಕೆ ಸಾಕ್ಷಿಯಾದ ದೇವನಗರಿ ದಾವಣಗೆರೆ
ಸೌಜನ್ಯ ಕೇಸ್​​: ಸಾಕ್ಷಿ, ಪ್ರಕರಣ ಸಂಬಂಧ ಸಿಬಿಐ-ಸಿಐಡಿಗೆ SIT ಪತ್ರ
ಸೌಜನ್ಯ ಕೇಸ್​​: ಸಾಕ್ಷಿ, ಪ್ರಕರಣ ಸಂಬಂಧ ಸಿಬಿಐ-ಸಿಐಡಿಗೆ SIT ಪತ್ರ