AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೆಟ್ರೋದಲ್ಲಿ ಬೀಡಿ ಸೇದುತ್ತಾ ಹಾಯಾಗಿ ಪ್ರಯಾಣಿಸಿದ ವ್ಯಕ್ತಿ: ವೀಡಿಯೊ ವೈರಲ್‌

ಸಹ ಪ್ರಯಾಣಿಕರೊಬ್ಬರು ವ್ಯಕ್ತಿ ಬೀಡಿ ಸೇದುತ್ತಿರುವುದನ್ನು ಮೊಬೈಲ್​​ನಲ್ಲಿ ಸೆರೆಹಿಡಿದು, ಅಂತರ್ಜಾಲದಲ್ಲಿ ಹರಿಬಿಟ್ಟಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​ ಆಗುತ್ತಿದೆ.

Viral Video: ಮೆಟ್ರೋದಲ್ಲಿ ಬೀಡಿ ಸೇದುತ್ತಾ ಹಾಯಾಗಿ ಪ್ರಯಾಣಿಸಿದ ವ್ಯಕ್ತಿ: ವೀಡಿಯೊ ವೈರಲ್‌
ಅಕ್ಷತಾ ವರ್ಕಾಡಿ
|

Updated on: Jun 16, 2024 | 5:35 PM

Share

ನವದೆಹಲಿ: ದೆಹಲಿ ಮೆಟ್ರೋದೊಳಗೆ ವೃದ್ಧ ವ್ಯಕ್ತಿಯೊಬ್ಬರು ಬೀಡಿ ಸೇದುತ್ತಿರುವ ಹಾಯಾಗಿ ಪ್ರಯಾಣಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ವ್ಯಕ್ತಿ ಧೂಮಪಾನ ಮಾಡುತ್ತಿದ್ದರೂ ಕೂಡ ಯಾರೂ ತಡೆಯದೇ ಇದ್ದಿದ್ದು ದುರದೃಷ್ಟಕರ ಸಂಗತಿ. ಸಹ ಪ್ರಯಾಣಿಕರೊಬ್ಬರು ವ್ಯಕ್ತಿ ಬೀಡಿ ಸೇದುತ್ತಿರುವುದನ್ನು ಮೊಬೈಲ್​​ನಲ್ಲಿ ಸೆರೆಹಿಡಿದು, ಅಂತರ್ಜಾಲದಲ್ಲಿ ಹರಿಬಿಟ್ಟಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​ ಆಗುತ್ತಿದೆ.

ಈ ವೇಳೆ ಭದ್ರತಾ ಸಿಬ್ಬಂದಿ ಇಲ್ಲದಿದ್ದಲ್ಲಿ ಇತರ ಪ್ರಯಾಣಿಕರು ಆಕ್ಷೇಪ ವ್ಯಕ್ತಪಡಿಸಿ ಮೆಟ್ರೋದೊಳಗೆ ಬೀಡಿ ಸೇದದಂತೆ ವೃದ್ಧನನ್ನು ತಡೆದು ನಿಲ್ಲಿಸಬೇಕಿತ್ತು. ಯಾಕೆಂದರೆ ಬೆಂಕಿಯ ಚಿಕ್ಕ ಕಿಡಿ ಮೊಟ್ರೋದಲ್ಲಿ ದೊಡ್ಡ ಬೆಂಕಿಗೆ ಕಾರಣವಾಗಬಹುದು. ಅದೃಷ್ಟವಶಾತ್ ಅಂತಹ ಯಾವುದೇ ಘಟನೆ ಸಂಭವಿಸಿಲ್ಲ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ‘ಹಾಯ್​​ ಫ್ರೆಂಡ್ಸ್ ಮೆಲೋಡಿ ಟೀಮ್’​​​, ಮೋದಿ ಜತೆಗೆ ಖುಷಿ ಖುಷಿಯಾಗಿ ವಿಡಿಯೋ ಮಾಡಿದ ಇಟಲಿ ಪ್ರಧಾನಿ ಮೆಲೋನಿ

@lavelybakshi ಎಂಬ ಟ್ವಿಟರ್​ ಖಾತೆಯಲ್ಲಿ ಜೂನ್​ 15ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ ನಾಲ್ಕು ಸಾವಿರಕ್ಕೂ ವೀಕ್ಷಣೆಯನ್ನು ಪಡೆದುಕೊಂಡಿದೆ. “ಅವರನ್ನು ತಡೆಯುವರು ಯಾರು ಇಲ್ಲವೇ?” ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ