AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಛೀ.. ಥೂ.. ದೆಹಲಿ ಮೆಟ್ರೋ ಪ್ಲಾಟ್​ಫಾರ್ಮ್​ನಲ್ಲಿ ಮೂತ್ರ ವಿಸರ್ಜಿಸಿ ಸಿಕ್ಕಿಬಿದ್ದ ವ್ಯಕ್ತಿ

ದೆಹಲಿಯ ಮೆಟ್ರೋ ನಿಲ್ದಾಣದ ಪ್ಲಾಟ್​ಫಾರಂನಲ್ಲಿ ವ್ಯಕ್ತಿಯೊಬ್ಬ ಮೂತ್ರ ವಿಸರ್ಜಿಸಿ ಮುಜುಗರ ಉಂಟು ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಿಂಚಿತ್ತೂ ಸ್ವಚ್ಛತೆ ಬಗ್ಗೆ ಕಾಳಜಿ ಇರದ ವ್ಯಕ್ತಿಯ ನಡೆ ಕಂಡು ನೆಟ್ಟಿಗರು ಕ್ಯಾಕರಿಸಿ ಉಗಿದಿದ್ದಾರೆ. ಆತನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜನರು ಒತ್ತಾಯಿಸಿದ್ದಾರೆ.

Viral Video: ಛೀ.. ಥೂ.. ದೆಹಲಿ ಮೆಟ್ರೋ ಪ್ಲಾಟ್​ಫಾರ್ಮ್​ನಲ್ಲಿ ಮೂತ್ರ ವಿಸರ್ಜಿಸಿ ಸಿಕ್ಕಿಬಿದ್ದ ವ್ಯಕ್ತಿ
ಮೂತ್ರ ವಿಸರ್ಜನೆ
ನಯನಾ ರಾಜೀವ್
|

Updated on: Jan 20, 2026 | 8:11 AM

Share

ನವದೆಹಲಿ, ಜನವರಿ 20: ದೆಹಲಿಯ ಮೆಟ್ರೋ ನಿಲ್ದಾಣದ ಪ್ಲಾಟ್​ಫಾರಂನಲ್ಲಿ ವ್ಯಕ್ತಿಯೊಬ್ಬ ಮೂತ್ರ(Urine) ವಿಸರ್ಜಿಸಿ ಮುಜುಗರ ಉಂಟು ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಿಂಚಿತ್ತೂ ಸ್ವಚ್ಛತೆ ಬಗ್ಗೆ ಕಾಳಜಿ ಇರದ ವ್ಯಕ್ತಿಯ ನಡೆ ಕಂಡು ನೆಟ್ಟಿಗರು ಕ್ಯಾಕರಿಸಿ ಉಗಿದಿದ್ದಾರೆ. ಆತನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜನರು ಒತ್ತಾಯಿಸಿದ್ದಾರೆ.

ಸಾವಿರಾರು ಪ್ರಯಾಣಿಕರು ಓಡಾಡುವ ಪ್ಲಾಟ್​ಫಾರ್ಮ್​ನಲ್ಲಿ ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡಿರುವ ವ್ಯಕ್ತಿಯ ಬೇಜವಾಬ್ದಾರಿಯುತ ವರ್ತನೆಯನ್ನು ತೋರಿಸುತ್ತದೆ. ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಗಾಜಿನ ಕಾರಿಡಾರ್ ಬಳಿ ನಿಂತು ಮೂತ್ರ ವಿಸರ್ಜನೆ ಮಾಡಿರುವುದನ್ನು ಕಾಣಬಹುದು. ಅದನ್ನು ಮತ್ತೊಬ್ಬ ಪ್ರಯಾಣಿಕ ರೆಕಾರ್ಡ್ ಮಾಡಿದ್ದಾನೆ. ಯಾರೋ ತನ್ನನ್ನು ರೆಕಾರ್ಡ್ ಮಾಡುತ್ತಿರುವುದನ್ನು ಆ ವ್ಯಕ್ತಿ ಗಮನಿಸಿ ಕ್ಷಮೆಯನ್ನೂ ಯಾಚಿಸದೆ ಅಲ್ಲಿಂದ ಕಾಲ್ಕಿತ್ತಿದ್ದಾನೆ.

ವಿಡಿಯೋ

ಮೆಟ್ರೋ ಆವರಣದಲ್ಲಿ, ಕೆಲವರು ಬಹಿರಂಗವಾಗಿ ಮೂತ್ರ ವಿಸರ್ಜಿಸುತ್ತಾರೆ ಅಥವಾ ಮಕ್ಕಳನ್ನು ಅದೇ ರೀತಿ ಮಾಡಲು ಬಿಡುತ್ತಾರೆ ಇದು ಗಂಭೀರವಾದ ಸಂಗತಿ. ದೇಶಕ್ಕೆ ಮಾದರಿಯಾಗದಿದ್ದರೂ ತೊಂದರೆಯಿಲ್ಲ, ದೇಶದ ಮರ್ಯಾದಿ ತೆಗೆಯುವ ಇಂಥಾ ಕೆಲಸ ಯಾರೂ ಮಾಡಬೇಡಿ ಎಂದು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ