ವಾಹನದ ಹಿಂದೆ ಅಂಟಿಕೊಂಡಿದ್ದ ಧೂಳಿನಲ್ಲಿ ಮೂಡಿದ ಅದ್ಭುತ ಚಿತ್ರಕಲೆ! ಕಲಾವಿದನ ಕೈ ಚಳಕಕ್ಕೆ ತಲೆ ಬಾಗಲೇಬೇಕು

ಭಾರತದ ಹೆಸರಾಂತ ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರು ಯಾವಾಗಲೂ ಸಾಮಾಜಿಕ ಜಾಲತಾಣದಲ್ಲಿ   ಆಸಕ್ತಿದಾಯಕ ಪೋಸ್ಟ್,  ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಅದೇ ರೀತಿಯ ಸುಂದರ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಕಲಾವಿದರೊಬ್ಬರು ಧೂಳು ಹಿಡಿದ ಕಾರುಗಳ ಗ್ಲಾಸ್ಗಳಲ್ಲಿ ಅದ್ಭುತವಾಗಿ ಚಿತ್ರಗಳನ್ನು ಬಿಡಿಸುವ ದೃಶ್ಯವನ್ನು  ಕಾಣಬಹುದು. 

ವಾಹನದ ಹಿಂದೆ ಅಂಟಿಕೊಂಡಿದ್ದ ಧೂಳಿನಲ್ಲಿ ಮೂಡಿದ ಅದ್ಭುತ ಚಿತ್ರಕಲೆ! ಕಲಾವಿದನ ಕೈ ಚಳಕಕ್ಕೆ ತಲೆ ಬಾಗಲೇಬೇಕು
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Dec 28, 2023 | 2:44 PM

ಸಾಮಾಜಿಕ ಜಾಲತಾಣವು ಪ್ರತಿಭೆಗಳನ್ನು ಪ್ರದರ್ಶಿಸಲಿರುವ ಒಂದು ಅದ್ಭುತ ವೇದಿಕೆಯಾಗಿದೆ. ಅದೆಷ್ಟೋ ಜನರು ತಮ್ಮ ಡಾನ್ಸ್, ಆಕ್ಟಿಂಗ್, ಚಿತ್ರಕಲೆ ಹೀಗೆ ತಮ್ಮ ಪ್ರತಿಭೆಗಳ ಕುರಿತ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.  ಈಗ ಅದೇ ರೀತಿ ಭಾರತದ ಹೆಸರಾಂತ ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರು, ಭಾರತದ ಅದ್ಭುತ ಕಲಾವಿದರೊಬ್ಬರ ಕಲಾ ಪ್ರತಿಭೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆನಂದ್ ಮಹಿಂದ್ರಾ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಟಿವ್ ಆಗಿದ್ದು, ಪ್ರತಿನಿತ್ಯ ಇಂಟರೆಸ್ಟಿಂಗ್ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಈಗ ಅಂತಹದ್ದೇ ಕಲಾವಿದರೊಬ್ಬರು ಧೂಳು ಹಿಡಿದ ಕಾರ್ ಗ್ಲಾಸ್ ಮೇಲೆ ಅದ್ಭುತವಾದ ಚಿತ್ರಗಳನ್ನು ಮೂಡಿಸಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದೀಗ ಈ ವಿಡಿಯೋ ಸಖತ್ ವೈರಲ್ ಆಗಿದ್ದು, ಕಲಾವಿದರ ಕೈ ಚಳಕಕ್ಕೆ ಎಲ್ರೂ ಫಿದಾ ಆಗಿದ್ದಾಗೆ.

ಈ ವಿಡಿಯೋವನ್ನು ಆನಂದ್ ಮಹೀಂದ್ರಾ  (@anandmahindra) ಅವರು ತಮ್ಮ X ಖಾತೆಯಲ್ಲಿ ಹಂಚಿಕೊಂಡಿದ್ದು, “ಎಂತಹ ಅದ್ಭುತ ಪ್ರತಿಭೆ. ಕಲಾವಿದರು ಎಲ್ಲೆಲ್ಲೂ ಕಾಣಸಿಗುತ್ತಾರೆ, ಮತ್ತು ನಿಜವಾದ ಕಲಾವಿದನು ಪ್ರಪಂಚದ ಪ್ರತಿಯೊಂದು ವಸ್ತುವಿನಲ್ಲೂ ತನ್ನ ಕಲೆಯ ಚಿತ್ತಾರವನ್ನು ಮೂಡಿಸುತ್ತಾನೆ ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವಿಡಿಯೋದಲ್ಲಿ ವ್ಯಕ್ತಿಯೊಬ್ಬರು, ಧೂಳು ಹಿಡಿದ ಕಾರಿನ ಗ್ಲಾಸ್ ಮೇಲೆ ಅದ್ಭುತವಾದ ಚಿತ್ರಗಳನ್ನು ಬಿಡಿಸುವ ದೃಶ್ಯವನ್ನು ಕಾಣಬಹುದು. ವೈರಲ್ ವಿಡಿಯೋದಲ್ಲಿ ಕಲಾವಿದರೊಬ್ಬರು ಧೂಳು ಹಿಡಿದ ಕಾರುಗಳ ಗ್ಲಾಸ್ ಮೇಲೆ ಕೈ, ನಾಯಿ ಮರಿ, ಸೈನಿಕರು, ಆನೆ, ಮಂಗ ಸೇರಿದಂತೆ ಅದ್ಭುತ ಚಿತ್ರಗಳನ್ನು ತನ್ನ ಕೈಯಾರೆ ಬಿಡಿಸುವ ಸುಂದರ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ನಿಮ್ಮ ರಾಜ್ಯದ ಆರ್ಥಿಕತೆ ನಡೆಯುತ್ತಿರುವುದು ನಮ್ಮಂತಹ ಕನ್ನಡ ಗೊತ್ತಿರದ ಜನರಿಂದ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಡಿಸೆಂಬರ್ 27 ರಂದು ಹಂಚಿಕೊಳ್ಳಲಾದ ಈ ವಿಡಿಯೋ 5 ಲಕ್ಷಕ್ಕಿಂತೂ ಅಧಿಕ  ವೀಕ್ಷಣೆಗಳನ್ನು ಹಾಗೂ ಹಲವಾರು ಕಮೆಂಟ್ಸ್ ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಅದ್ಭುತ ಕಲಾವಿದʼ ಎಂದು ಹೊಗಳಿಕೆಯ ಮಾತುಗಳನ್ನಾಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಭಾರತದಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲʼ ಎಂದು ಹೇಳಿದ್ದಾರೆ. ಇನ್ನೂ ಅನೇಕರು ಕಲಾವಿದನ ಕ್ರಿಯೇಟಿವಿಟಿಗೆ ತಲೆಬಾಗಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ