ವಿಚ್ಛೇದನದ ವೇಳೆ ‘ನನ್ನ ಕಿಡ್ನಿಯನ್ನು ನನಗೆ ಮರಳಿಸು’ ಎಂದು ಪತಿಯೊಬ್ಬ ಪತ್ನಿಗೆ ಕೋರ್ಟ್ನಲ್ಲಿ ಬೇಡಿಕೆ ಇಟ್ಟಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಇದಲ್ಲದೆ ಕಿಡ್ನಿ ವಾಪಸ್ ಕೊಡಲು ಆಗದ್ದಿದ್ದಲ್ಲಿ 1.2 ಮಿಲಿಯನ್ ಪೌಂಡ್(12.56ಕೋಟಿ ರೂ.) ಹಣ ನೀಡಬೇಕಾಗಿ ಬೇಡಿಕೆಯಿಟ್ಟಿದ್ದಾನೆ. ಪತ್ನಿಯ ಎರಡು ಕಿಡ್ನಿಯೂ ವಿಫಲವಾದ್ದುದನ್ನು ತಿಳಿದು ಆಕೆಯನ್ನು ಬದುಕುಳಿಸುವ ಸಲುವಾಗಿ 2001 ರಲ್ಲಿ ಪತಿ ತನ್ನ ಒಂದು ಕಿಡ್ನಿಯನ್ನು ದಾನ ಮಾಡಿದ್ದ. ಆದರೆ ವರ್ಷಗಳ ನಂತರ ಇಬರಿಬ್ಬರ ನಡುವೆ ಭಿನ್ನಾಭಿಪ್ರಾಯಗಳು ಬಂದ ಕಾರಣ ವಿಚ್ಛೇದನ ಪಡೆದುಕೊಳ್ಳಲು ಪತ್ನಿ ಕೋರ್ಟ್ ಮೆಟ್ಟಿಲೇರಿದ್ದಾಳೆ. ಇದರಿಂದ ಕೋಪಗೊಂಡ ಪತಿ ಕಿಡ್ನಿ ವಾಪಸ್ ಕೇಳಿದ್ದಾನೆ.
ಡೈಲಿ ಸ್ಟಾರ್ ವರದಿಯ ಪ್ರಕಾರ, 1990ರಲ್ಲಿ ರಿಚರ್ಡ್ ಬಟಿಸ್ಟಾ(ಪತಿ) ಮತ್ತು ಡೊನ್ನೆಲ್ (ಪತ್ನಿ) ವಿವಾಹವಾಗಿದ್ದರು. ಇವರಿಗೆ ಮೂರು ಮಕ್ಕಳಿದ್ದಾರೆ. ಆದರೆ 2001 ರಲ್ಲಿ, ಡೊನ್ನೆಲ್ಗೆ ತೀವ್ರ ಅನಾರೋಗ್ಯ ಕಾಡಿದೆ. ಕಡೆಗೆ ಆಕೆಯ ಎರಡು ಕಿಡ್ನಿಯೂ ವಿಫಲವಾಗಿದೆ ಎಂದು ವೈದ್ಯರು ಘೋಷಿಸಿದ್ದರು. ಈ ವೇಳೆ ತನ್ನ ಪತ್ನಿಯ ಜೀವ ಉಳಿಸಲು ಬಟಿಸ್ಟಾ ಮುಂದಾಗಿದ್ದು, ತನ್ನ ಒಂದು ಕಿಡ್ನಿಯನ್ನು ದಾನ ಮಾಡಿದ್ದಾನೆ. ಆದರೆ ಇದಾದ ಕೆಲವೇ ವರ್ಷಗಳ ಬಳಿಕ ಪತ್ನಿ ಡೊನ್ನೆಲ್ ವಿಚ್ಛೇದನ ಪಡೆಯಲು ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಳು. ಇದರಿಂದ ಸಾಕಷ್ಟು ನೋವುಂಡ ಪತಿ ನನ್ನ ಪತ್ನಿಗೆ ಅನೈತಿಕ ಸಂಬಂಧವಿದೆ ಎಂದು ಆರೋಪಿಸಿದ್ದಾನೆ. ಅಲ್ಲದೆ ಕಿಡ್ನಿ ವಾಪಸ್ ಇಲ್ಲವೇ ಹಣ ಕೊಡಿ ಎಂದು ಹೇಳಿದ್ದಾನೆ.
ಇದನ್ನೂ ಓದಿ: ಮಡದಿಗೂ ಸಮಾನ ಗೌರವ, ವಧುವಿನ ಪಾದ ಸ್ಪರ್ಶಿಸಿದ ವರ, ನಾಚಿ ನೀರಾದ ವಧು
ಆದರೆ ರಿಚರ್ಡ್ ಗೆ ನ್ಯಾಯ ಸಿಗಲಿಲ್ಲ. ಕಿಡ್ನಿಯನ್ನು ವಾಪಸ್ ನೀಡಲು ಸಾಧ್ಯವಿಲ್ಲ ಎಂದು ವೈದ್ಯಕೀಯ ತಜ್ಞರು ಸ್ಪಷ್ಟಪಡಿಸಿದ್ದರು. ಇಂತಹ ಪರಿಸ್ಥಿತಿಯಲ್ಲಿ ಕಿಡ್ನಿ ವಾಪಸ್ ಕೊಡಲು ಸಾಧ್ಯವಿಲ್ಲ . ಡೊನ್ನೆಲ್ ತನ್ನ ಮೂತ್ರಪಿಂಡವನ್ನು ಹಿಂದಿರುಗಿಸಲು ಎರಡನೇ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಗುತ್ತದೆ. ಇದರಿಂದ ಅವರ ಪ್ರಾಣಕ್ಕೂ ಅಪಾಯವಿದೆ. ಆದ್ದರಿಂದ ಮೂತ್ರಪಿಂಡವನ್ನು ಮರಳಿ ನೀಡಲು ಸಾಧ್ಯವಿಲ್ಲ ಎಂದು ತಜ್ಞರ ಹೇಳಿಯನ್ನು ಆಧರಿಸಿ ಕೋರ್ಟ್ ತೀರ್ಪು ನೀಡಿದೆ.
ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ