Viral Video: ಮಾಸ್ಕ್ ಧರಿಸದೆ ಓಡಾಡಿದವರಿಗೆ ಮಂಗಳಾರತಿ ಬೆಳಗಿ ಹಾಡು ಹೇಳಿದ ಮಹಿಳಾ ಪೊಲೀಸ್ ಅಧಿಕಾರಿ, ವಿಡಿಯೋ ವೈರಲ್

ಕೊರೊನಾ ಸೋಂಕು ಹರಡುವುದನ್ನು ತಪ್ಪಿಸಲು ಮಾಸ್ಕ್ ಕಡ್ಡಾಯ. ಆದರೆ ಇದನ್ನು ಮರೆತ ಇಬ್ಬರು ಪುರುಷರು ಮಾಸ್ಕ್ ಧರಿಸದೆ ರಸ್ತೆಯಲ್ಲಿ ಓಡಾಡುತ್ತಿದ್ದರು. ಹೀಗೆ ಮಾಸ್ಕ್ ಧರಿಸದೆ ಓಡಾಡುವಾಗ ಮಹಿಳಾ ಪೊಲೀಸ್ ಅಧಿಕಾರಿಗಳ ಕೈಗೆ ಇಬ್ಬರು ಸಿಕ್ಕಿಹಾಕಿಕೊಂಡಿದ್ದಾರೆ. ಈ ಇಬ್ಬರನ್ನು ನಿಲ್ಲಿಸಿಕೊಂಡ ಮಹಿಳಾ ಪೊಲೀಸ್ ಅಧಿಕಾರಿ ಮಂಗಳಾರತಿ ತಟ್ಟೆ ಹಿಡಿದು ಆರತಿ ಬೆಳಗಿದ್ದಾರೆ.

Viral Video: ಮಾಸ್ಕ್ ಧರಿಸದೆ ಓಡಾಡಿದವರಿಗೆ ಮಂಗಳಾರತಿ ಬೆಳಗಿ ಹಾಡು ಹೇಳಿದ ಮಹಿಳಾ ಪೊಲೀಸ್ ಅಧಿಕಾರಿ, ವಿಡಿಯೋ ವೈರಲ್
ಮಂಗಳಾರತಿ ಬೆಳಗಿ ಹಾಡು ಹೇಳಿದ ಮಹಿಳಾ ಪೊಲೀಸ್ ಅಧಿಕಾರಿ
Follow us
TV9 Web
| Updated By: preethi shettigar

Updated on:Jun 12, 2021 | 4:48 PM

ಇಡೀ ದೇಶವು ಕೊರೊನಾ ಸೋಂಕಿನ ವಿರುದ್ಧ ಹೋರಾಡುತ್ತಿದ್ದು, ಅನೇಕ ಜನರು ಕೊವಿಡ್​ನಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ ಕೊರೊನಾ ಸೋಂಕನ್ನು ದೂರವಾಗಿಸಲು ನಾನಾ ಪ್ರಯತ್ನಗಳು ನಡೆಯುತ್ತಿವೆ. ಅದರಲ್ಲೂ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಆದರೆ ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವಲ್ಲಿ ಜನರು ಈಗಲೂ ಕೂಡ ಹಿಂದೇಟು ಹಾಕುತ್ತಿದ್ದಾರೆ. ಈ ರೀತಿಯಾಗಿ ಸರ್ಕಾರದ ನಿಯಮವನ್ನು ಗಾಳಿಗೆ ತೂರಿದವರಿಗೆ ತಕ್ಕ ಪಾಠ ಕಲಿಸುವಲ್ಲಿ ಪೊಲೀಸರು ಪ್ರಮುಖ ಪಾತ್ರ ವಹಿಸಿದ್ದಾರೆ. ಆದರೆ ಎಷ್ಟೇ ಬುದ್ಧಿವಾದ ಹೇಳಿದರು ಕೇಳದ ಜನರಿಗೆ ಪೊಲೀಸರು ವಿಭಿನ್ನ ರೀತಿಯಲ್ಲಿ ಎಚ್ಚರಿಕೆ ನೀಡಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ವಿಡಿಯೋ ನೋಡುಗರನ್ನು ನಗಿಸುವುದರ ಜೊತೆಗೆ ಆಶ್ಚರ್ಯಚಕಿತರನ್ನಾಗಿ ಮಾಡಿದೆ.

ಕೊರೊನಾ ಸೋಂಕು ಹರಡುವುದನ್ನು ತಪ್ಪಿಸಲು ಮಾಸ್ಕ್ ಕಡ್ಡಾಯ. ಆದರೆ ಇದನ್ನು ಮರೆತ ಇಬ್ಬರು ಪುರುಷರು ಮಾಸ್ಕ್ ಧರಿಸದೆ ರಸ್ತೆಯಲ್ಲಿ ಓಡಾಡುತ್ತಿದ್ದರು. ಹೀಗೆ ಮಾಸ್ಕ್ ಧರಿಸದೆ ಓಡಾಡುವಾಗ ಮಹಿಳಾ ಪೊಲೀಸ್ ಅಧಿಕಾರಿಗಳ ಕೈಗೆ ಇಬ್ಬರು ಸಿಕ್ಕಿಹಾಕಿಕೊಂಡಿದ್ದಾರೆ. ಈ ಇಬ್ಬರನ್ನು ನಿಲ್ಲಿಸಿಕೊಂಡ ಮಹಿಳಾ ಪೊಲೀಸ್ ಅಧಿಕಾರಿ ಮಂಗಳಾರತಿ ತಟ್ಟೆ ಹಿಡಿದು ಆರತಿ ಬೆಳಗಿದ್ದಾರೆ. ಅಷ್ಟೇ ಅಲ್ಲದೆ ಮಾಸ್ಕ್ ಹಾಕಿಕೊಳ್ಳಿ ಮಹಾರಾಜರೇ ಎಂದು ಹಾಡು ಕೂಡ ಹೇಳಿದ್ದಾರೆ. ಈ ಸನ್ನಿವೇಶ ಆಶ್ಚರ್ಯಕರವಾಗಿದ್ದಷ್ಟೇ ಅಲ್ಲದೆ ದೊಡ್ಡ ಪಾಠವನ್ನು ಕೂಡ ಕಲಿಸಿದೆ. ಹಾಸ್ಯಮಯವಾದ ಈ ವಿಡಿಯೋ ಸದ್ಯ ವೈರಲ್ ಆಗಿದೆ.

ಈಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನೀವೂ ಈ ವಿಡಿಯೋ ನೋಡಿ ಆನಂದಿಸಿರಬೇಕು. ಈ ವಿಡಿಯೋವನ್ನು ಭಾರತೀಯ ಪೊಲೀಸ್ ಸೇವಾ ಅಧಿಕಾರಿ ‘ಬಿಶಮ್ ಸಿಂಗ್’ ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ಹಂಚಿಕೊಳ್ಳುವಾಗ, ‘ಮಾಸ್ಕ್ ಹಾಕಿಕೊಳ್ಳಿ ಪ್ರಭು’ ಎಂದು ಅವರು ಬರೆದಿದ್ದಾರೆ. ಈ ಸುದ್ದಿ ಬರೆಯುವವರೆಗೆ, 60 ಸಾವಿರ ಜನರು ಈ ವೀಡಿಯೊವನ್ನು ನೋಡಿದ್ದಾರೆ. ಅಲ್ಲದೆ ಇದನ್ನು ಇನ್ನಿತರ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

Viral Video: ಅತಿ ಹೆಚ್ಚು ವೇಗದಲ್ಲಿ ಗ್ರೀಸ್​ ಹಚ್ಚಿದ ಕಂಬವನ್ನು ದಾಟುವವರು ಯಾರು? ವಿಡಿಯೋ ವೈರಲ್

Viral Video: ಎಟಿಎಂ ಕೇಂದ್ರಕ್ಕೆ ಹಣ ತೆಗೆದುಕೊಳ್ಳಲು ಹೋದವ ಸ್ಯಾನಿಟೈಸರ್​ ಕದ್ದ; ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

Published On - 3:54 pm, Sat, 12 June 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ